AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ ಅಡಿಕ್ಟ್ ಯುವತಿ ಎಂದು ವೈರಲ್ ಆಗಿದ್ದ ವಿಡಿಯೋ ಸತ್ಯ ಬಿಚ್ಚಿಟ್ಟ ಮಂಗಳೂರು ಪೊಲೀಸರು, ಮಾನಸಿಕ ಸಮಸ್ಯೆಯಿಂದ ಬಳಲುತ್ತಿರುವ ಯುವತಿ

ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ಡ್ರಗ್ ಅಡಿಕ್ಟ್ ಆಗಿರುವ ಯುವತಿಯೊಬ್ಬಳು ರಂಪಾಟ ಮಾಡಿದ್ದಾಳೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಸದ್ಯ ಈ ಬಗ್ಗೆ ಈಗ ಪೊಲೀಸರು ಸ್ಪಷ್ಟನೆ ನೀಡಿದ್ದು, ಯುವತಿ ಡ್ರಗ್ಸ್ ತೆಗೆದುಕೊಂಡಿರಲಿಲ್ಲ. ಆಕೆ ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದಾಳೆ ಎಂದು ತಿಳಿಸಿದ್ದಾರೆ.

ಡ್ರಗ್ ಅಡಿಕ್ಟ್ ಯುವತಿ ಎಂದು ವೈರಲ್ ಆಗಿದ್ದ ವಿಡಿಯೋ ಸತ್ಯ ಬಿಚ್ಚಿಟ್ಟ ಮಂಗಳೂರು ಪೊಲೀಸರು, ಮಾನಸಿಕ ಸಮಸ್ಯೆಯಿಂದ ಬಳಲುತ್ತಿರುವ ಯುವತಿ
ಡ್ರಗ್ ಅಡಿಕ್ಟ್ ಯುವತಿ ಎಂದು ವೈರಲ್ ಆಗಿದ್ದ ವಿಡಿಯೋ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಆಯೇಷಾ ಬಾನು|

Updated on: Sep 10, 2023 | 10:45 AM

Share

ಮಂಗಳೂರು, ಸೆ.10: ಡ್ರಗ್ ಅಡಿಕ್ಟ್ (Drug Addict) ಆಗಿರುವ ಯುವತಿಯೊಬ್ಬಳು ರಂಪಾಟ ಮಾಡಿದ್ದಾಳೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಸದ್ಯ ಈ ವಿಡಿಯೋ ಬಗ್ಗೆ ಮಂಗಳೂರು ಪೊಲೀಸ್ ಇಲಾಖೆ(Mangaluru Police) ಸ್ಪಷ್ಟನೆ ನೀಡಿದ್ದು, ಯುವತಿ ಯಾವುದೇ ಮಾದಕ ದ್ರವ್ಯ ಸೇವನೆ ಮಾಡಿರಲಿಲ್ಲ. ಮಾನಸಿಕ ಸಮಸ್ಯೆಯಿಂದ ಯುವತಿ ಬಳಲುತ್ತಿರೋ ಬಗ್ಗೆ ಮಾಹಿತಿ ಸಿಕ್ಕಿದೆ. ಹೀಗಾಗಿ ತಪ್ಪು ಸಂದೇಶ ರವಾನಿಸಬೇಡಿ ಎಂದು ಪೊಲೀಸ್ ಇಲಾಖೆ ಸೂಚಿಸಿದೆ.

ಇನ್ನು ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಪೊಲೀಸ್ ಇಲಾಖೆ, ವಿಡಿಯೋದಲ್ಲಿರುವ ಘಟನೆ ಸ್ಪಪ್ಟೆಂಬರ 1 ರಂದು ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ನಡೆದಿತ್ತು. ಸೆ.1ರ ಬೆಳಿಗ್ಗೆ 06.50ಕ್ಕೆ ಪಂಪವೆಲ್ ನಲ್ಲಿರುವ ಗಣೇಶ ಮೆಡಿಕಲ್ ನಲ್ಲಿ ಯುವತಿ ಸಿಕ್ಕಿದ್ದಾಳೆ. ಆಕೆ ಅಸಾಮಾನ್ಯವಾಗಿ ಹಾಗೂ ಆಕ್ರಮಣಕಾರಿ ರೀತಿಯಲ್ಲಿ ವರ್ತಿಸುತ್ತಿದ್ದಳು. ಸ್ಥಳಕ್ಕೆ ತೆರಳಿದ ಅಬಕಾರಿ ಇಲಾಖೆಯ ಅಧಿಕಾರಿಗಳು ಯುವತಿಯನ್ನು ಕಂಡು ಆಕೆ ಮಾದಕ ದ್ರವ್ಯ ಸೇವನೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿ ಆಕೆಯನ್ನು ವೈದ್ಯಕೀಯ ತಪಾಸಣೆಗೆ ಕರೆದುಕೊಂಡು ಹೋಗಲು ಪ್ರಯತ್ನಿಸಿದ್ದಾರೆ. ಆಗ ಆಕೆ ಅಬಕಾರಿ ಇಲಾಖೆಯ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನಿಸಿದ್ದಾಳೆ. ಈ ಹಿನ್ನಲೆ ಅಬಕಾರಿ ಇಲಾಖಾ ಅಧಿಕಾರಿಗಳು ಆಕೆಯನ್ನು ಪೊಲೀಸರ ಸಹಾಯದಿಂದ ಮಂಗಳೂರು ಪೂರ್ವ (ಕದ್ರಿ) ಪೊಲಿಸ್‌ ಠಾಣೆಗೆ ಕರೆ ತಂದಿದ್ದಾರೆ.

ಇದನ್ನೂ ಓದಿ: ಪ್ರತ್ಯೇಕ ಪ್ರಕರಣ: ಒಡಿಸ್ಸಾ ಮೂಲದ ಡ್ರಗ್ ಪೆಡ್ಲರ್ ಬಂಧನ, ಮುಂಬೈ ಸಿಐಡಿ ಪೊಲೀಸರೆಂದು ಹೇಳಿ ಕರೆ‌ಮಾಡಿ ವಂಚನೆ; ದೂರು ದಾಖಲು

ಈ ವೇಳೆ ಯುವತಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿ ವಿಚಿತ್ರವಾಗಿ ವರ್ತಿಸಿದ್ದಾಳೆ. ಬಳಿಕ ಮಹಿಳಾ ಸಿಬ್ಬಂದಿ ಬಲದೊಂದಿಗೆ ಯುವತಿ ವೈದ್ಯಕೀಯ ತಪಾಸಣೆ ಮಾಡಿಸಲಾಗಿದೆ. ಆದರೆ ವೈದ್ಯಕೀಯ ತಪಾಸಣೆಯಲ್ಲಿ ಮಾದಕ ದ್ರವ್ಯ ಪರೀಕ್ಷೆ ನೆಗೆಟಿವ್ ಬಂದಿದೆ. ನಂತರ ಅಕೆಯನ್ನು ಆಕೆಯ ಪೋಷಕರ ವಶಕ್ಕೆ ವಹಿಸಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಮಾನಸಿಕ ಸಮಸ್ಯೆಯಿಂದ ಯುವತಿ ಬಳಲುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ವೈರಲ್ ವಿಡಿಯೋ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಸ್ಪಷ್ಟನೆ ನೀಡಿದರು.

ಇನ್ನು ಯುವತಿಯೊಬ್ಬಳನ್ನ ನಾಲ್ಕೈದು ಮಹಿಳಾ ಪೊಲೀಸ್ ಸಿಬ್ಬಂದಿ ನಿಯಂತ್ರಿಸುತ್ತಿರುವುದು. ಹಾಗೂ ಪೊಲೀಸ್ ಸಿಬ್ಬಂದಿಗೆ ಯುವತಿ ತುಳಿದು ಹಲ್ಲೆಗೆ ಯತ್ನಿಸುತ್ತಿರುವುದು. ಈ ವೇಳೆ ಯುವತಿ ನಿಯಂತ್ರಿಸಲು ಪೊಲೀಸರು ಕೈಗೆ ಕೋಳ ತೊಡಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಡ್ರಗ್ಸ್ ವೆಸನಿ ಯುವತಿ ಈ ರೀತಿ ವರ್ತಿಸಿದ್ದಾಳೆ ಎಂದು ವೈರಲ್ ಆಗುತ್ತಿತ್ತು. ಸದ್ಯ ಈ ಬಗ್ಗೆ ಸ್ಪಷ್ಟನೆ ಸಿಕ್ಕಿದ್ದು ಯುವತಿ ಡ್ರಗ್ಸ್ ತೆಗೆದುಕೊಂಡಿರಲಿಲ್ಲ. ಆಕೆ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಾಳೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ.

ಮಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ