AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru News: ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ; ಬಕ್ರೀದ್ ಹಿನ್ನೆಲೆ ಪೊಲೀಸ್ ಆಯುಕ್ತರಿಂದ ಎಚ್ಚರಿಕೆ

ಯಾವುದೇ ಸಂಘಟನೆ ಕಾನೂನು ಕೈಗೆತ್ತಿಕೊಂಡರೂ ಅವುಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅಕ್ರಮ ಗೋ ಸಾಗಾಟ ಕೇಸ್​ನಲ್ಲಿ ಭಾಗಿಯಾಗಿದ್ದವರ ಪಟ್ಟಿ ಮಾಡಿದ್ದೇವೆ. ಆಯಾಯ ಪೊಲೀಸ್​ ಠಾಣೆಗಳಲ್ಲಿ ಅವರನ್ನು ಕರೆಸಿ ವಾರ್ನ್​ ಮಾಡಿದ್ದೇವೆ ಎಂದು ಕುಲದೀಪ್ ಕುಮಾರ್ ಜೈನ್ ಹೇಳಿದ್ದಾರೆ.

Mangaluru News: ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ; ಬಕ್ರೀದ್ ಹಿನ್ನೆಲೆ ಪೊಲೀಸ್ ಆಯುಕ್ತರಿಂದ ಎಚ್ಚರಿಕೆ
ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್
TV9 Web
| Edited By: |

Updated on: Jun 27, 2023 | 6:36 PM

Share

ಮಂಗಳೂರು: ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ (Kuldeep Kumar R Jain) ಎಚ್ಚರಿಕೆ ನೀಡಿದ್ದಾರೆ. ಜೂನ್ 29ರಂದು ಮುಸ್ಲಿಮರ ಪವಿತ್ರ ಹಬ್ಬ ಬಕ್ರೀದ್ (Bakrid) ಹಿನ್ನೆಲೆಯಲ್ಲಿ ಈ ಎಚ್ಚರಿಕೆ ನೀಡಲಾಗಿದೆ. ಕಳೆದ 15 ದಿನಗಳಿಂದ ಮಂಗಳೂರು ನಗರದಲ್ಲಿ ಶಾಂತಿಸಭೆ ನಡೆಸುತ್ತಿದ್ದೇವೆ. ಕಮಿಷನರೇಟ್​​​ ವ್ಯಾಪ್ತಿಯಲ್ಲಿ ಚೆಕ್​​ಪೋಸ್ಟ್ ವ್ಯವಸ್ಥೆ ಮಾಡಿದ್ದೇವೆ. ದಿನದ 24 ಗಂಟೆಯೂ ಚೆಕ್​​ಪೋಸ್ಟ್​ನಲ್ಲಿ ವಾಹನ ತಪಾಸಣೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.

ಯಾವುದೇ ಸಂಘಟನೆ ಕಾನೂನು ಕೈಗೆತ್ತಿಕೊಂಡರೂ ಅವುಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅಕ್ರಮ ಗೋ ಸಾಗಾಟ ಕೇಸ್​ನಲ್ಲಿ ಭಾಗಿಯಾಗಿದ್ದವರ ಪಟ್ಟಿ ಮಾಡಿದ್ದೇವೆ. ಆಯಾಯ ಪೊಲೀಸ್​ ಠಾಣೆಗಳಲ್ಲಿ ಅವರನ್ನು ಕರೆಸಿ ವಾರ್ನ್​ ಮಾಡಿದ್ದೇವೆ ಎಂದು ಕುಲದೀಪ್ ಕುಮಾರ್ ಜೈನ್ ಹೇಳಿದ್ದಾರೆ.

ಗೋಹತ್ಯೆ ತಡೆಯಲು ಸರ್ಕಾರ ಕ್ರಮ ಕೈಗೊಳ್ಳಲಿ; ನಳಿನ್ ಕುಮಾರ್ ಕಟೀಲ್

ನಮ್ಮ ದೇಶವು ಗೋವುಗಳ ರಕ್ಷಣೆ ಮತ್ತು ಸಂರಕ್ಷಣೆಗೆ ಅತ್ಯಂತ ಮಹತ್ವ ನೀಡಿದ್ದು, ಗೋವು ನಮ್ಮ ಸಂಸ್ಕೃತಿಯನ್ನು ಪ್ರತಿನಿಧಿಸುತ್ತದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರಕಾರ ಈ ನೆಲದ ಸಂಸ್ಕೃತಿಯನ್ನು ರಕ್ಷಿಸಲು ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತಂದಿದೆ. ಮಹಾತ್ಮಾ ಗಾಂಧೀಜಿಯವರು ಕೂಡ ದನಗಳನ್ನು ಸಂರಕ್ಷಿಸುವ ಬಗ್ಗೆ ಮಾತನಾಡಿದ್ದರು. ಈಗಿನ ಸರಕಾರ ಜಾನುವಾರು ಹತ್ಯೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯಲ್ಲಿ ಎನ್​ಐಎ ದಾಳಿ

ಹೊಸ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಾನುವಾರು ಕಳ್ಳತನ ಮತ್ತು ಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಇಂತಹ ಘಟನೆಗಳ ವಿರುದ್ಧ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ನಳಿನ್ ಒತ್ತಾಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು