ಮಂಗಳೂರು: ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ (Kuldeep Kumar R Jain) ಎಚ್ಚರಿಕೆ ನೀಡಿದ್ದಾರೆ. ಜೂನ್ 29ರಂದು ಮುಸ್ಲಿಮರ ಪವಿತ್ರ ಹಬ್ಬ ಬಕ್ರೀದ್ (Bakrid) ಹಿನ್ನೆಲೆಯಲ್ಲಿ ಈ ಎಚ್ಚರಿಕೆ ನೀಡಲಾಗಿದೆ. ಕಳೆದ 15 ದಿನಗಳಿಂದ ಮಂಗಳೂರು ನಗರದಲ್ಲಿ ಶಾಂತಿಸಭೆ ನಡೆಸುತ್ತಿದ್ದೇವೆ. ಕಮಿಷನರೇಟ್ ವ್ಯಾಪ್ತಿಯಲ್ಲಿ ಚೆಕ್ಪೋಸ್ಟ್ ವ್ಯವಸ್ಥೆ ಮಾಡಿದ್ದೇವೆ. ದಿನದ 24 ಗಂಟೆಯೂ ಚೆಕ್ಪೋಸ್ಟ್ನಲ್ಲಿ ವಾಹನ ತಪಾಸಣೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.
ಯಾವುದೇ ಸಂಘಟನೆ ಕಾನೂನು ಕೈಗೆತ್ತಿಕೊಂಡರೂ ಅವುಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅಕ್ರಮ ಗೋ ಸಾಗಾಟ ಕೇಸ್ನಲ್ಲಿ ಭಾಗಿಯಾಗಿದ್ದವರ ಪಟ್ಟಿ ಮಾಡಿದ್ದೇವೆ. ಆಯಾಯ ಪೊಲೀಸ್ ಠಾಣೆಗಳಲ್ಲಿ ಅವರನ್ನು ಕರೆಸಿ ವಾರ್ನ್ ಮಾಡಿದ್ದೇವೆ ಎಂದು ಕುಲದೀಪ್ ಕುಮಾರ್ ಜೈನ್ ಹೇಳಿದ್ದಾರೆ.
ನಮ್ಮ ದೇಶವು ಗೋವುಗಳ ರಕ್ಷಣೆ ಮತ್ತು ಸಂರಕ್ಷಣೆಗೆ ಅತ್ಯಂತ ಮಹತ್ವ ನೀಡಿದ್ದು, ಗೋವು ನಮ್ಮ ಸಂಸ್ಕೃತಿಯನ್ನು ಪ್ರತಿನಿಧಿಸುತ್ತದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರಕಾರ ಈ ನೆಲದ ಸಂಸ್ಕೃತಿಯನ್ನು ರಕ್ಷಿಸಲು ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತಂದಿದೆ. ಮಹಾತ್ಮಾ ಗಾಂಧೀಜಿಯವರು ಕೂಡ ದನಗಳನ್ನು ಸಂರಕ್ಷಿಸುವ ಬಗ್ಗೆ ಮಾತನಾಡಿದ್ದರು. ಈಗಿನ ಸರಕಾರ ಜಾನುವಾರು ಹತ್ಯೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯಲ್ಲಿ ಎನ್ಐಎ ದಾಳಿ
ಹೊಸ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಾನುವಾರು ಕಳ್ಳತನ ಮತ್ತು ಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಇಂತಹ ಘಟನೆಗಳ ವಿರುದ್ಧ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ನಳಿನ್ ಒತ್ತಾಯಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ