Mangaluru News: ಕಮಿಷನರ್ ಚೇರ್​​ನಲ್ಲಿ ಪುಟ್ಟ ಬಾಲಕಿ ಕೂರಿಸಿ ಹೃದಯ ವೈಶಾಲ್ಯ ಮೆರೆದ ಮಂಗಳೂರು ಕಮಿಷನರ್

ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಅಧಿಕಾರಿಯೊಬ್ಬರ ಮಗಳನ್ನು ಕಮಿಷನರ್ ಸೀಟ್​​ನಲ್ಲಿ ಕೂರಿಸಿ ಗೌರವಿಸುವ ಮೂಲಕ ಮಂಗಳೂರಿನ ಕಮಿಷನರ್ ಎನ್‌.ಶಶಿಕುಮಾರ್ ವಿಶಾಲ ಹೃದಯ ಮೆರೆದಿದ್ದಾರೆ.

Mangaluru News: ಕಮಿಷನರ್ ಚೇರ್​​ನಲ್ಲಿ ಪುಟ್ಟ ಬಾಲಕಿ ಕೂರಿಸಿ ಹೃದಯ ವೈಶಾಲ್ಯ ಮೆರೆದ ಮಂಗಳೂರು ಕಮಿಷನರ್
ಕಮಿಷನರ್ ಎನ್‌.ಶಶಿಕುಮಾರ್, ಪುಟ್ಟ ಬಾಲಕಿ ಪ್ರಣೀತಾ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Oct 23, 2022 | 3:15 PM

ಮಂಗಳೂರು: ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಅಧಿಕಾರಿಯೊಬ್ಬರ ಮಗಳನ್ನು ಕಮಿಷನರ್ (Commissioner) ಸೀಟ್​​ನಲ್ಲಿ ಕೂರಿಸಿ ಗೌರವಿಸುವ ಮೂಲಕ ಮಂಗಳೂರಿನ ಕಮಿಷನರ್ ಎನ್‌.ಶಶಿಕುಮಾರ್ ವಿಶಾಲ ಹೃದಯ ಮೆರೆದಿದ್ದಾರೆ. ಮಂಗಳೂರಿನ ಪಣಂಬೂರು ಉಪ ವಿಭಾಗದಲ್ಲಿ 2013 -15ರಲ್ಲಿ ಎಸಿಪಿ ಆಗಿದ್ದ ರವಿ ಕುಮಾರ್ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಮಂಗಳೂರು ಎಸಿಪಿ ಆಗಿದ್ದ ರವಿ ಕುಮಾರ್ ಮೈಸೂರಿಗೆ ಲೋಕಾಯುಕ್ತ ಎಸ್ಪಿ ಆಗಿ ಬಡ್ತಿ ಹೊಂದಿ ವರ್ಗಾವಣೆಗೊಂಡಿದ್ದರು. ಹೀಗಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡು ಮೈಸೂರಿಗೆ ವಾಪಸಾಗುವ ವೇಳೆ ಅವರ ಕಾರಿಗೆ ಲಾರಿ ಡಿಕ್ಕಿ ಹೊಡೆದಿತ್ತು. 2017ರ ಫೆಬ್ರವರಿ 22 ರಂದು ಬೆಂಗಳೂರು ಗ್ರಾಮಾಂತರದ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು, ಈ ಅಪಘಾತದಲ್ಲಿ ಡ್ರೈವರ್ ಹಾಗೂ ಎಸ್ಪಿ ರವಿ ಕುಮಾರ್ ಮೃತಪಟ್ಟಿದ್ದರು.

2008ನೇ ಬ್ಯಾಚ್‌ನ ಕೆಎಎಸ್ ಅಧಿಕಾರಿಯಾಗಿದ್ದ ರವಿ ಕುಮಾರ್ ಅವರಿಗೆ ಒಂದು ಹೆಣ್ಣು ಮಗುವಿತ್ತು. ಅಪಘಾತ ಸಂಭವಿಸುವ ಕೆಲವೇ ದಿನಗಳ ಮೊದಲು ಮಗುವಿನ ನಾಮಕರಣ ಮಾಡಿದ್ದು, ಪ್ರಣೀತಾ ಎಂದು ಹೆಸರಿಟ್ಟಿದ್ದರು. ಶನಿವಾರ ರವಿ ಕುಮಾರ್ ಅವರ ಪತ್ನಿ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಆಗಮಿಸಿದ್ದರು.

ಈ ವೇಳೆ ರವಿ ಕುಮಾರ್ ಅವರ ಪುತ್ರಿ ಪ್ರಣೀತಾರನ್ನು ತಮ್ಮ ಸೀಟ್ ಮೇಲೆ ಕೂರಿಸಿ ಅಗಲಿದ ರವಿ ಕುಮಾರ್ ಅವರಿಗೆ ಗೌರವಿಸಲಾಯಿತು. ಮುಂದೆ ಚೆನ್ನಾಗಿ ಕಲಿತು ತಂದೆಯಂತೆ ಉನ್ನತ ಪೊಲೀಸ್ ಹುದ್ದೆ ಅಲಂಕರಿಸಬೇಕು ಎಂದು ಕಮಿಷನರ್ ಶಶಿಕುಮಾರ್ ಮತ್ತು ಇತರೆ ಪೊಲೀಸ್ ಅಧಿಕಾರಿಗಳು ಹಾರೈಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:13 pm, Sun, 23 October 22

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು