AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಪೊಲೀಸರ ಕಾರ್ಯಾಚರಣೆ: 15 ಮಾದಕ ವ್ಯಸನಿಗಳ ಬಂಧನ, 12 ಪ್ರಕರಣ ದಾಖಲು

ಮಾದಕ ದ್ರವ್ಯ ಸೇವನೆಗೆ ಕುಖ್ಯಾತವಾಗಿರುವ ಸ್ಥಳಗಳಲ್ಲಿ ನಾಲ್ಕು ತಂಡಗಳು ಕಾರ್ಯಾಚರಣೆ ನಡೆಸಿದವು. ಕಳೆದ ನಾಲ್ಕು ದಿನಗಳಲ್ಲಿ ಲಾಡ್ಜ್‌ಗಳು, ಪಬ್‌ಗಳು, ರೆಸ್ಟೋರೆಂಟ್‌ಗಳು, ಹೋಂಸ್ಟೇಗಳು, ರೆಸಾರ್ಟ್‌ಗಳು ಮತ್ತು ಅಪಾರ್ಟ್‌ಮೆಂಟ್‌ಗಳು ಸೇರಿದಂತೆ 53 ಸ್ಥಳಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ತಿಳಿಸಿದರು.

ಮಂಗಳೂರು ಪೊಲೀಸರ ಕಾರ್ಯಾಚರಣೆ: 15 ಮಾದಕ ವ್ಯಸನಿಗಳ ಬಂಧನ, 12 ಪ್ರಕರಣ ದಾಖಲು
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on: Nov 07, 2023 | 7:39 AM

ಮಂಗಳೂರು ನ.07: ಮಾದಕ ವಸ್ತು ಜಾಗೃತಿ ಅಭಿಯಾನದ ಅಂಗವಾಗಿ ಮಂಗಳೂರು ಪೊಲೀಸರು (Mangaluru Police) ಕಳೆದ ನಾಲ್ಕು ದಿನಗಳಲ್ಲಿ 56 ಮಂದಿಗೆ ಮಾದಕ ದ್ರವ್ಯ (Narcotics) ಸೇವನೆ ಪರೀಕ್ಷೆ ನಡೆಸಿದರು. ವೈದ್ಯಕೀಯ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ, 15 ಯುವಕರನ್ನು ಬಂಧಿಸಲಾಗಿದೆ ಮತ್ತು ಎನ್​ಡಿಪಿಎಸ್​ ಕಾಯ್ದೆಯ ಸೆಕ್ಷನ್ 27 (ಬಿ) ಅಡಿಯಲ್ಲಿ ಮಾದಕವಸ್ತು ಸೇವನೆಯ 12 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಕಾರ್ಯಾಚರಣೆಯ ಭಾಗವಾಗಿ ಏಳು ಮೊಬೈಲ್ ಫೋನ್‌ಗಳು ಮತ್ತು ಎರಡು ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ತಿಳಿಸಿದರು.

ಜಾಗೃತಿ ಅಭಿಯಾನದ ಅಂಗವಾಗಿ ನವೆಂಬರ್ 1 ರಂದು ನಾಲ್ಕು ತಂಡಗಳನ್ನು ರಚಿಸಲಾಗಿದೆ. ನಾಲ್ವರು ಎಸಿಪಿಗಳ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಕೇಂದ್ರ ಉಪವಿಭಾಗ ಎಸಿಪಿ ಮಹೇಶ್ ಕುಮಾರ್, ಉತ್ತರ ಉಪ-ವಿಭಾಗ ಎಸಿಪಿ ಮನೋಜ್ ಕುಮಾರ್ ನಾಯಕ್, ದಕ್ಷಿಣ ಉಪವಿಭಾಗ ಎಸಿಪಿ ಧನ್ಯಾ ನಾಯಕ್ ಮತ್ತು ನಗರ ಅಪರಾಧ ವಿಭಾಗ ಪಿಎ ಹೆಗ್ಡೆ ನೇತೃತ್ವದಲ್ಲಿ ತಂಡ ರಚಿಸಲಾಗಿದೆ ಎಂದರು.

ಇದನ್ನೂ ಓದಿ: ಮಂಗಳೂರಿನಲ್ಲಿ ಮಾದಕ ದ್ರವ್ಯ ಬೆರೆಸಿದ 100 ಕೆಜಿ ಚಾಕೊಲೇಟ್ ವಶ; ಆರೋಪಿಗಳ ಬಂಧನ

ಮಾದಕ ದ್ರವ್ಯ ಸೇವನೆಗೆ ಕುಖ್ಯಾತವಾಗಿರುವ ಸ್ಥಳಗಳಲ್ಲಿ ನಾಲ್ಕು ತಂಡಗಳು ಕಾರ್ಯಾಚರಣೆ ನಡೆಸಿದವು. ಕಳೆದ ನಾಲ್ಕು ದಿನಗಳಲ್ಲಿ ಲಾಡ್ಜ್‌ಗಳು, ಪಬ್‌ಗಳು, ರೆಸ್ಟೋರೆಂಟ್‌ಗಳು, ಹೋಂಸ್ಟೇಗಳು, ರೆಸಾರ್ಟ್‌ಗಳು ಮತ್ತು ಅಪಾರ್ಟ್‌ಮೆಂಟ್‌ಗಳು ಸೇರಿದಂತೆ 53 ಸ್ಥಳಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಗಿದೆ ಎಂದು ಆಯುಕ್ತರು ಹೇಳಿದರು.

ಸಿಸಿಬಿ ಅಧಿಕಾರಿಗಳು ಸೋಮವಾರ ಎಂಡಿಎಂಎ ಮಾರಾಟ ಆರೋಪದ ಮೇಲೆ ಮೂವರನ್ನು ಬಂಧಿಸಿ 95,000 ರೂಪಾಯಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದ್ದಾರೆ. ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಫಳ್ನೀರ್‌ನಲ್ಲಿ ಎಂಡಿಎಂಎ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಕೊಯಿನೂರು ರಸ್ತೆಯಲ್ಲಿ ಪ್ರಮೋದ್ ಎಂಜಿ ಅಲಿಯಾಸ್ ಡಿಸ್ಕ್ (30), ಕಾನ್ವೆಂಟ್ ಜಂಕ್ಷನ್‌ನ ಮೊಹಮ್ಮದ್ ರಶೀದ್ ಎಂಜೆಡ್ ಅಲಿಯಾಸ್ ರಶೀ (41), ಮಡಿಕೇರಿಯ ಕಡಗದಾಳು ಮೂಲದ ದರ್ಶನ್ ಎಸ್ (24) ಎಂಬುವರನ್ನು ಬಂಧಿಸಿದ್ದಾರೆ.

75,000 ಮೌಲ್ಯದ 15 ಗ್ರಾಂ ಎಂಡಿಎಂಎ, ಡಿಜಿಟಲ್ ತೂಕದ ಮಾಪಕ ಮತ್ತು ಹಲವಾರು ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸುಳ್ಯದಲ್ಲಿ ನಡೆದ ಕೊಲೆ ಪ್ರಕರಣ, ಬರ್ಕೆಯಲ್ಲಿ ಕೊಲೆ ಯತ್ನ ಪ್ರಕರಣ, ಮಡಿಕೇರಿ ಪೇಟೆ ಠಾಣೆಯಲ್ಲಿ ಕಳ್ಳತನ ಮತ್ತು ಸುಲಿಗೆ ಪ್ರಕರಣಗಳಲ್ಲಿ ಪ್ರಮೋದ್ ಭಾಗಿಯಾಗಿದ್ದನು. ಮೊಹಮ್ಮದ್ ರಶೀದ್ ಭಾಗಮಂಡಲ ಮತ್ತು ಮಡಿಕೇರಿ ಪಟ್ಟಣ ಠಾಣೆಗಳಲ್ಲಿ ಕಳ್ಳತನ, ಕೊಲೆ, ಸುಲಿಗೆ ಪ್ರಕರಣಗಳನ್ನು ಎದುರಿಸುತ್ತಿದ್ದಾನೆ. ಈ ನಡುವೆ ದರ್ಶನ್ ವಿರುದ್ಧ ಮಡಿಕೇರಿ ನಗರ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ