AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲೇಜ್ ಹುಡುಗಿಯರನ್ನಿಟ್ಟುಕೊಂಡು ದಂಧೆ: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿ

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ನಿಡ್ಡೋಡಿಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ರಕ್ಷಣೆ ಮಾಡಿದ್ದಾರೆ. ಓರ್ವ ಆಟೋ ಚಾಲಕ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಸದ್ಯ ಮೂಡಬಿದಿರೆ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ಕಾಲೇಜ್ ಹುಡುಗಿಯರನ್ನಿಟ್ಟುಕೊಂಡು ದಂಧೆ: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿ
ಬಂಧಿತರು
ಅಶೋಕ್​ ಪೂಜಾರಿ
| Edited By: |

Updated on: Oct 14, 2025 | 6:02 PM

Share

ಮಂಗಳೂರು, ಅಕ್ಟೋಬರ್​ 14: ಅಪ್ರಾಪ್ತ ಕಾಲೇಜ್ ಹುಡುಗಿಯರನ್ನಿಟ್ಟುಕೊಂಡು (girls) ದಂಧೆ ಮಾಡುತ್ತಿದ್ದ ವೇಶ್ಯಾವಾಟಿಕೆ (Prostitution) ಅಡ್ಡೆ ಮೇಲೆ ಮೂಡಬಿದಿರೆ ಪೊಲೀಸರು ದಾಳಿ ಮಾಡಿ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಆಟೋ ಚಾಲಕ ಮಹೇಶ್, ಕಟೀಲು ನಿವಾಸಿ ಶ್ರೀಕಾಂತ್, ಯಜ್ಞೇಶ್ ಮತ್ತು ದಿಲೀಪ್ ಬಂಧಿತರು. ಖಾಕಿ ಪಡೆ ಇಬ್ಬರು ಅಪ್ರಾಪ್ತೆಯರ ರಕ್ಷಣೆ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ನಿಡ್ಡೋಡಿ ಎಂಬಲ್ಲಿ ಘಟನೆ ನಡೆದಿದೆ. ಮೂಡಬಿದಿರೆಯ ನಿಡ್ಡೋಡಿ ನಿವಾಸಿ ಆಟೋ ಚಾಲಕ, ಬಂಧಿತ ಮಹೇಶ್, ಇಬ್ಬರು ಅಪ್ರಾಪ್ತ ಕಾಲೇಜ್​ ಬಾಲಕಿಯರನ್ನು ಪುಸಲಾಯಿಸಿ ಕರೆತಂದಿದ್ದ.

ಇದನ್ನೂ ಓದಿ: ಮನೆಯಲ್ಲೇ ಹೈಟೆಕ್ ವೇಶ್ಯವಾಟಿಕೆ ದಂಧೆ: ರೆಡ್​ ಹ್ಯಾಂಡ್ ಆಗಿ ಸಿಕ್ಕಿಬಿದ್ದ 6 ಪುರುಷರು, ಇಬ್ಬರು ಯುವತಿಯರು

ಇದೇ ವೇಳೆ ತನ್ನ ಸ್ನೇಹಿತರನ್ನು ಮನೆಗೆ ಕರೆಸಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಮೂಡಬಿದಿರೆ ಪೊಲೀಸರು ಇಬ್ಬರು ಅಪ್ರಾಪ್ತೆಯರ ರಕ್ಷಣೆ ಮಾಡಿ ನಾಲ್ವರನ್ನು ಬಂಧಿಸಿದ್ದಾರೆ. ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ.

ಅಕ್ರಮ ಹೈಟೆಕ್ ವೇಶ್ಯಾವಾಟಿಕೆ ದಂಧೆ

ಇನ್ನು ಇತ್ತೀಚೆಗೆ ಮೈಸೂರು ತಾಲ್ಲೂಕಿನ ದಾಸನಕೊಪ್ಪಲಿನಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ದಂಧೆಯ ಮೇಲೆ ಪೊಲೀಸರು ದಾಳಿ ಮಾಡಿ, 6 ಆರೋಪಿಗಳನ್ನು ಬಂಧಿಸಿದ್ದರು. ಇನ್ನು ದಾಳಿ ವೇಳೆ ಮನೆಯಲ್ಲಿ ನಡೆಯುತ್ತಿದ್ದ ಅನೈತಿಕ ಚಟುವಟಿಕೆಗಳು ಬೆಳಕಿಗೆ ಬಂದಿದ್ದವು.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ ಪತ್ತೆ

ಓಡನಾಡಿ ಸಂಸ್ಥೆ ನೀಡಿದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿದ್ದರು. ಮನೆಯಲ್ಲಿ ನಕಲಿ ಪೇಯಿಂಗ್ ಗೆಸ್ಟ್ ಎಂದು ಯುವತಿಯರನ್ನು ಇರಿಸಲಾಗಿತ್ತು. ಸ್ಥಳೀಯರು ಈ ಕುರಿತು ಅನುಮಾನ ವ್ಯಕ್ತಪಡಿಸಿದ್ದರು.

ಕೆಎಸ್ಆರ್​ಟಿಸಿ ಬಸ್​ನಲ್ಲಿ ವೈದ್ಯೆಗೆ ಲೈಂಗಿಕ ಕಿರುಕುಳ

ಇನ್ನು ಮತ್ತೊಂದು ಪ್ರಕರಣದಲ್ಲಿ ಕೆಎಸ್ಆರ್​ಟಿಸಿ ಬಸ್​ನಲ್ಲಿ ಪ್ರಯಾಣ ಮಾಡುತ್ತಿದ್ದ ವೈದ್ಯೆಗೆ ಕಾಮುಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದ ಘಟನೆಯೊಂದು ವರದಿಯಾಗಿತ್ತು. ಬಸ್​​ನಲ್ಲಿ ಪಕ್ಕದಲ್ಲಿ ಕುಳಿತು ಅಸಭ್ಯವಾಗಿ ವರ್ತಿಸಿದ್ದ. ಸದ್ಯ ಪ್ರಯಾಣಿಕರೆಲ್ಲರೂ ಸೇರಿ ವ್ಯಕ್ತಿಯನ್ನು ಪೊಲೀಸರಿಗೆ ಹಿಡಿದುಕೊಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಶೋಕ್​ ಪೂಜಾರಿ
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!