AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಮುಖಂಡನ ಮೊಬೈಲ್​ನಲ್ಲಿ ರಾಜಕಾರಣಿಯೊಬ್ಬರ ಅಶ್ಲೀಲ ವಿಡಿಯೋ ಪತ್ತೆ: ಪೊಲೀಸರೇ ಶಾಕ್​!

ಮಂಗಳೂರಿನಲ್ಲಿ ಹಿಂದೂ ಮುಖಂಡನ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಈ ವಿಡಿಯೋಗಳಲ್ಲಿ ಕರಾವಳಿ ರಾಜಕಾರಣಿಯೊಬ್ಬರ ವಿಡಿಯೋ ಕೂಡ ಇದೆ ಎನ್ನಲಾಗುತ್ತಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಪೊಲೀಸರೇ ಒಂದು ಕ್ಷಣ ಬೆಚ್ಚಿಬಿದ್ದಿದ್ದಾರೆ. ಸದ್ಯ ಈ ವಿಚಾರವಾಗಿ ಮೂಡಬಿದಿರೆ ಠಾಣೆಯಲ್ಲಿ ಪ್ರತ್ಯೇಕ ಎಫ್​​ಐಆರ್​ ದಾಖಲಾಗಿದೆ. 

ಹಿಂದೂ ಮುಖಂಡನ ಮೊಬೈಲ್​ನಲ್ಲಿ ರಾಜಕಾರಣಿಯೊಬ್ಬರ ಅಶ್ಲೀಲ ವಿಡಿಯೋ ಪತ್ತೆ: ಪೊಲೀಸರೇ ಶಾಕ್​!
ಸಮಿತ್ ರಾಜ್ ಧರೆಗುಡ್ಡೆ
ಅಶೋಕ್​ ಪೂಜಾರಿ, ಮಂಗಳೂರು
| Updated By: ಗಂಗಾಧರ​ ಬ. ಸಾಬೋಜಿ|

Updated on:Jul 05, 2025 | 10:13 AM

Share

ಮಂಗಳೂರು, ಜುಲೈ 05: ಹಿಂದೂ ಮುಖಂಡನ (Hindu leader) ಮೊಬೈಲ್​ನಲ್ಲಿ ರಾಜಕಾರಣಿ (politician) ಒಬ್ಬರ ಅಶ್ಲೀಲ ವಿಡಿಯೋ ಪತ್ತೆ ಆಗಿರುವ ಬಗ್ಗೆ ಕರಾವಳಿಯಲ್ಲಿ ಭಾರಿ ಚರ್ಚೆ ಶುರುವಾಗಿದೆ. ಮಂಗಳೂರು  ಪೊಲೀಸರ ತನಿಖೆ ವೇಳೆ ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಹಸಂಯೋಜಕ ಸಮಿತ್ ರಾಜ್ ಧರೆಗುಡ್ಡೆ ಮೊಬೈಲ್​​​ನಲ್ಲಿ ಐವತ್ತಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದು, ಇದರಲ್ಲಿ ಕರಾವಳಿ ರಾಜಕಾರಣಿಯೊಬ್ಬರ ವಿಡಿಯೋ ಕೂಡ ಇದೆ ಎನ್ನಲಾಗುತ್ತಿದೆ. ಸದ್ಯ ಈ ಕುರಿತಾಗಿ ಮೂಡಬಿದಿರೆ ಠಾಣೆಯಲ್ಲಿ ಎಫ್​​ಐಆರ್​ ದಾಖಲಾಗಿದೆ.

ಬೆಚ್ಚಿ ಬಿದ್ದ ಪೊಲೀಸ್​

ಅಪಘಾತವೆಸಗಿದ ಖಾಸಗಿ ಬಸ್​ಗೆ ಕಲ್ಲು ತೂರಿ ಹಾನಿಗೊಳಿಸಿದ ಪ್ರಕರಣದಲ್ಲಿ ಸಮಿತ್ ರಾಜ್ ಧರೆಗುಡ್ಡೆರನ್ನು ಮೂಡಬಿದಿರೆ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಪ್ರಕರಣದ ಹೆಚ್ಚಿನ ತನಿಖೆಗಾಗಿ ಅವರ ಮೊಬೈಲ್ ವಶಕ್ಕೆ ಪಡೆಯಲಾಗಿತ್ತು. ಪೊಲೀಸರು ದತ್ತಾಂಶಗಳನ್ನು ಎಕ್ಸ್‌ಟ್ರಾಕ್ಟ್ ಮಾಡಿಸಲು ಕೋರ್ಟ್ ಮತ್ತು ಮೇಲಾಧಿಕಾರಿಗಳ ಅನುಮತಿ ಪಡೆದಿದ್ದರು. ಅದರಂತೆ ಮೊಬೈಲ್ ಡೇಟಾ ಎಕ್ಸ್‌ಟ್ರಾಕ್ಟ್​​ ವೇಳೆ ಸ್ವತಃ ಪೊಲೀಸರೇ ಬೆಚ್ಚಿ ಬಿದಿದ್ದಾರೆ. 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗ ತುಣುಕುಗಳು ಪತ್ತೆ ಆಗಿವೆ.

ಇದನ್ನೂ ಓದಿ: ಕರಾವಳಿಯಲ್ಲಿ ಫುಲ್ ಆ್ಯಕ್ಟಿವ್ ಆದ ಸ್ಪೆಷಲ್ ಆ್ಯಕ್ಷನ್ ಫೋರ್ಸ್: ಪ್ರಚೋದನಕಾರಿ ಸ್ಟೇಟಸ್ ಹಾಕಿದ್ದ ಯುವಕನ ಬಂಧನ

ಇದನ್ನೂ ಓದಿ
Image
ಕ್ಷುಲ್ಲಕ ಕಾರಣಕ್ಕೆ ಕಿರಿಕ್: ಮಾಡೆಲ್ ಮೇಲೆ ಬಸ್ ಸಿಬ್ಬಂದಿ ಹಲ್ಲೆ
Image
Karnataka Rains: ಮಳೆ ಆರ್ಭಟ, ಇಂದು ಕೂಡ ಶಾಲೆಗಳಿಗೆ ರಜೆ
Image
ಬೆಂಗಳೂರಿನಿಂದ ದೆಹಲಿಗೆ ಹೊರಟಿದ್ದ ವಿಮಾನದಲ್ಲೇ ಕುಸಿದು ಬಿದ್ದ ಪೈಲಟ್!
Image
ಮಂಗಳೂರಿನ ಪಿಲಿಕುಳ ಉದ್ಯಾನವನದಲ್ಲಿ ಪ್ರಾಣಿಗಳ ನಿಗೂಢ ಸಾವು

ವಿಡಿಯೋಗಳು ಪತ್ತೆಯಾದ ಹಿನ್ನೆಲೆಯಲ್ಲಿ ಇನ್ಸ್‌ಪೆಕ್ಟರ್ ಸಂದೇಶ್​ರಿಂದ ದೂರು ನೀಡಲಾಗಿದ್ದು,  ಮೂಡಬಿದಿರೆ ಠಾಣೆಯಲ್ಲಿಈ ಸಂಬಂಧ ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ವಿಡಿಯೋ ತುಣುಕುಗಳನ್ನು ಪ್ರಸಾರ ಮಾಡುವ, ಬೇರೆಯವರಿಗೆ ಕಳುಹಿಸುವ ಅಥವಾ ಸಾಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವಂತಹ ಸಾಧ್ಯತೆ ಹಿನ್ನೆಲೆ ಎಫ್ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ: ಮಂಗಳೂರಿನ ಪಿಲಿಕುಳ ಉದ್ಯಾನವನದಲ್ಲಿ ಪ್ರಾಣಿಗಳ ನಿಗೂಢ ಸಾವು, ಕಾರಣವೇನು?

ಸದ್ಯ ಮೂಡಬಿದಿರೆ ಪೊಲೀಸರು ವಿಡಿಯೋದ ಮೂಲ ಪತ್ತೆ ಹಚ್ಚಲು ಮುಂದಾಗಿದ್ದು, ಇತ್ತ ಈ ಬಗ್ಗೆ ವಿಚಾರಣೆ ನಡೆಸಲು ಸಮಿತ್ ರಾಜ್​ಗೆ ನೋಟೀಸ್ ನೀಡಲು ಸಿದ್ದತೆ ನಡೆಸಿದ್ದಾರೆ. ಬಸ್​ಗೆ ಕಲ್ಲು ತೂರಿದ ಕೇಸ್ ನಲ್ಲಿ ಸಮಿತ್ ರಾಜ್ ಜಾಮೀನು ಪಡೆದು ಬಿಡುಗಡೆಗೊಂಡಿದ್ದಾರೆ. ಹಾಗಾಗಿ ಮತ್ತೆ ನೋಟೀಸ್ ಕೊಟ್ಟು ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:11 am, Sat, 5 July 25