
ಮಂಗಳೂರು, ಜುಲೈ 05: ಹಿಂದೂ ಮುಖಂಡನ (Hindu leader) ಮೊಬೈಲ್‌ನಲ್ಲಿ ರಾಜಕಾರಣಿ (politician) ಒಬ್ಬರ ಅಶ್ಲೀಲ ವಿಡಿಯೋ ಪತ್ತೆ ಆಗಿರುವ ಬಗ್ಗೆ ಕರಾವಳಿಯಲ್ಲಿ ಭಾರಿ ಚರ್ಚೆ ಶುರುವಾಗಿದೆ. ಮಂಗಳೂರು ಪೊಲೀಸರ ತನಿಖೆ ವೇಳೆ ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಹಸಂಯೋಜಕ ಸಮಿತ್ ರಾಜ್ ಧರೆಗುಡ್ಡೆ ಮೊಬೈಲ್‌ನಲ್ಲಿ ಐವತ್ತಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದು, ಇದರಲ್ಲಿ ಕರಾವಳಿ ರಾಜಕಾರಣಿಯೊಬ್ಬರ ವಿಡಿಯೋ ಕೂಡ ಇದೆ ಎನ್ನಲಾಗುತ್ತಿದೆ. ಸದ್ಯ ಈ ಕುರಿತಾಗಿ ಮೂಡಬಿದಿರೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಅಪಘಾತವೆಸಗಿದ ಖಾಸಗಿ ಬಸ್ಗೆ ಕಲ್ಲು ತೂರಿ ಹಾನಿಗೊಳಿಸಿದ ಪ್ರಕರಣದಲ್ಲಿ ಸಮಿತ್ ರಾಜ್ ಧರೆಗುಡ್ಡೆರನ್ನು ಮೂಡಬಿದಿರೆ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಪ್ರಕರಣದ ಹೆಚ್ಚಿನ ತನಿಖೆಗಾಗಿ ಅವರ ಮೊಬೈಲ್ ವಶಕ್ಕೆ ಪಡೆಯಲಾಗಿತ್ತು. ಪೊಲೀಸರು ದತ್ತಾಂಶಗಳನ್ನು ಎಕ್ಸ್‌ಟ್ರಾಕ್ಟ್ ಮಾಡಿಸಲು ಕೋರ್ಟ್ ಮತ್ತು ಮೇಲಾಧಿಕಾರಿಗಳ ಅನುಮತಿ ಪಡೆದಿದ್ದರು. ಅದರಂತೆ ಮೊಬೈಲ್ ಡೇಟಾ ಎಕ್ಸ್‌ಟ್ರಾಕ್ಟ್ ವೇಳೆ ಸ್ವತಃ ಪೊಲೀಸರೇ ಬೆಚ್ಚಿ ಬಿದಿದ್ದಾರೆ. 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗ ತುಣುಕುಗಳು ಪತ್ತೆ ಆಗಿವೆ.
ಇದನ್ನೂ ಓದಿ: ಕರಾವಳಿಯಲ್ಲಿ ಫುಲ್ ಆ್ಯಕ್ಟಿವ್ ಆದ ಸ್ಪೆಷಲ್ ಆ್ಯಕ್ಷನ್ ಫೋರ್ಸ್: ಪ್ರಚೋದನಕಾರಿ ಸ್ಟೇಟಸ್ ಹಾಕಿದ್ದ ಯುವಕನ ಬಂಧನ
ವಿಡಿಯೋಗಳು ಪತ್ತೆಯಾದ ಹಿನ್ನೆಲೆಯಲ್ಲಿ ಇನ್ಸ್‌ಪೆಕ್ಟರ್ ಸಂದೇಶ್ರಿಂದ ದೂರು ನೀಡಲಾಗಿದ್ದು, ಮೂಡಬಿದಿರೆ ಠಾಣೆಯಲ್ಲಿಈ ಸಂಬಂಧ ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ವಿಡಿಯೋ ತುಣುಕುಗಳನ್ನು ಪ್ರಸಾರ ಮಾಡುವ, ಬೇರೆಯವರಿಗೆ ಕಳುಹಿಸುವ ಅಥವಾ ಸಾಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವಂತಹ ಸಾಧ್ಯತೆ ಹಿನ್ನೆಲೆ ಎಫ್ಐಆರ್ ದಾಖಲಿಸಲಾಗಿದೆ.
ಇದನ್ನೂ ಓದಿ: ಮಂಗಳೂರಿನ ಪಿಲಿಕುಳ ಉದ್ಯಾನವನದಲ್ಲಿ ಪ್ರಾಣಿಗಳ ನಿಗೂಢ ಸಾವು, ಕಾರಣವೇನು?
ಸದ್ಯ ಮೂಡಬಿದಿರೆ ಪೊಲೀಸರು ವಿಡಿಯೋದ ಮೂಲ ಪತ್ತೆ ಹಚ್ಚಲು ಮುಂದಾಗಿದ್ದು, ಇತ್ತ ಈ ಬಗ್ಗೆ ವಿಚಾರಣೆ ನಡೆಸಲು ಸಮಿತ್ ರಾಜ್ಗೆ ನೋಟೀಸ್ ನೀಡಲು ಸಿದ್ದತೆ ನಡೆಸಿದ್ದಾರೆ. ಬಸ್ಗೆ ಕಲ್ಲು ತೂರಿದ ಕೇಸ್ ನಲ್ಲಿ ಸಮಿತ್ ರಾಜ್ ಜಾಮೀನು ಪಡೆದು ಬಿಡುಗಡೆಗೊಂಡಿದ್ದಾರೆ. ಹಾಗಾಗಿ ಮತ್ತೆ ನೋಟೀಸ್ ಕೊಟ್ಟು ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:11 am, Sat, 5 July 25