ಪ್ರವೀಣ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಬಂಧನ

2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು ಕೊಲೆ ಮಾಡಲಾಗಿತ್ತು. ಇದು ರಾಜ್ಯದಲ್ಲಿ ಸಂಚಲನ ಸೃಷ್ಟಿಸಿತ್ತು. ಪ್ರವೀಣ ನೆಟ್ಟಾರು ಕೊಲೆಯಿಂದ ಆಕ್ರೋಶಗೊಂಡಿದ್ದ ಬಿಜೆಪಿ ಕಾರ್ಯಕರ್ತರು ಅಂದು ತಮ್ಮ ಪಕ್ಷದ ರಾಜ್ಯಾಧ್ಯಕ್ಷರ ಕಾರನ್ನೇ ಅಲುಗಾಡಿಸಿದ್ದರು.

ಪ್ರವೀಣ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಬಂಧನ
ಆರೋಪಿ ಮುಸ್ತಾಫ ಪೈಚಾರ್‌, ಬಿಜೆಪಿ ಕಾರ್ಯಕರ್ತ ಪ್ರವೀಣ ನೆಟ್ಟಾರು
Edited By: ವಿವೇಕ ಬಿರಾದಾರ

Updated on: May 10, 2024 | 11:43 AM

ಮಂಗಳೂರು, ಮೇ 10: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣದ ನಾಲ್ಕನೇ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಹಾಸನ ಜಿಲ್ಲೆ ಸಕಲೇಶಪುರದ ಆನೆಮಹಲ್​ ಆನೆಮಹಲ್ ಬಳಿ ಬಂಧಿಸಿದ್ದಾರೆ. ಸುಳ್ಯದ ಶಾಂತಿನಗರ ನಿವಾಸಿ ಮುಸ್ತಾಫ ಪೈಚಾರ್ (43) ಬಂಧಿತ ಆರೋಪಿ. ಆರೋಪಿಯನ್ನು ಅಧಿಕಾರಿಗಳು ಬೆಂಗಳೂರು ಎನ್​ಐಎ ಕಚೇರಿಗೆ ಕರೆದೊಯ್ದಿದ್ದಾರೆ.

ಪ್ರವೀಣ ನೆಟ್ಟಾರು ಕೊಲೆ

2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು, ಆತನ ಕೋಳಿ ಅಂಗಡಿ ಬಳಿಯೇ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರ್​ನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಇದಾದ ಬಳಿಕ ದುಷ್ಕರ್ಮಿಗಳು ವಿವಿಧ ಕಡೆಗಳಿಗೆ ಪರಾರಿಯಾಗಿದ್ದರು.

ಇದನ್ನೂ ಓದಿ: ದಕ್ಷಿಣ ಕನ್ನಡ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮೂವರು ಆರೋಪಿಗಳ ಪತ್ತೆಗೆ ತಲಾ 2 ಲಕ್ಷ ಬಹುಮಾನ ಘೋಷಿಸಿದ ಎನ್​ಐಎ

ಬಿಜೆಪಿ ಕಾರ್ಯಕರ್ತರ ಆಕ್ರೋಶ

ಪ್ರವೀಣ ನೆಟ್ಟಾರು ಕೊಲೆ ನಡೆದ ಸಂದರ್ಭದಲ್ಲಿ ರಾಜ್ಯದಲ್ಲಿ ಬಸವರಾ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಆಡಳಿತ ನಡೆಸುತ್ತಿತ್ತು. ಬಿಜೆಪಿ ಆಡಳಿತದಲ್ಲೇ ತಮ್ಮದೇ ಕಾರ್ಯಕರ್ತನೋರ್ವನ ಕೊಲೆ ಕಾರ್ಯಕರ್ತರನ್ನು ಕೆರಳಿಸುವಂತೆ ಮಾಡಿತ್ತು. ಬಿಜೆಪಿ ಸರ್ಕಾರದ ವಿರುದ್ಧ ಹಿಂದೂ ಸಂಘಟನೆಗಳು ಮಾತ್ರವಲ್ಲದೆ ಬಿಜೆಪಿ ಕಾರ್ಯಕರ್ತರು ಕೂಡ ಆಕ್ರೋಶ ಹೊರಹಾಕಿದ್ದರು. ಘಟನೆ ನಂತರ ಬಿಜೆಪಿ ರಾಜ್ಯಾಧ್ಯಕ್ಷರ ಕಾರು ಮಾತ್ರವಲ್ಲ, ರಾಜ್ಯ ಸರ್ಕಾರದ ಬುಡವೇ ಅಲುಗಾಡಿತ್ತು. ರಾಜ್ಯಾದ್ಯಂತ ಸಾಮೂಹಿಕ ರಾಜೀನಾಮೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:38 am, Fri, 10 May 24

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us