ಮಂಗಳೂರು: ಬಿಲ್ ಪಾಸ್ ಮಾಡಲು ಗುತ್ತಿಗೆದಾರನಿಂದ ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಬಿದ್ದ PWD ಕಿರಿಯ ಇಂಜಿನಿಯರ್

Lokayukta Raid: ಬಿಲ್ ಪಾಸ್ ಮಾಡಲು ಗುತ್ತಿಗೆದಾರನಿಂದ 20 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮಂಗಳೂರಿನ ಬೋಂದೆಲ್​ನಲ್ಲಿರುವ ಸಹಾಯಕ ಕಾರ್ಯಪಾಲ ಇಂಜಿನಿಯರವರ ಕಛೇರಿ, ಲೋಕೋಪಯೋಗಿ ಇಲಾಖೆ ಗುಣ ಭರವಸೆ ಉಪವಿಭಾಗದ ಇದರ ಕಿರಿಯ ಇಂಜಿನಿಯರ್-2 ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ನಡೆದಿದೆ.   

ಮಂಗಳೂರು: ಬಿಲ್ ಪಾಸ್ ಮಾಡಲು ಗುತ್ತಿಗೆದಾರನಿಂದ ಲಂಚಕ್ಕೆ ಬೇಡಿಕೆ: ಲೋಕಾಯುಕ್ತ  ಬಲೆಗೆ ಬಿದ್ದ PWD ಕಿರಿಯ ಇಂಜಿನಿಯರ್
PWD ಕಿರಿಯ ಇಂಜಿನಿಯರ್ ರೊನಾಲ್ಡ್ ಲೋಬೋ
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on: Oct 18, 2023 | 2:50 PM

ಮಂಗಳೂರು, ಅಕ್ಟೋಬರ್​​​​ 18: ಬಿಲ್ ಪಾಸ್ ಮಾಡಲು ಗುತ್ತಿಗೆದಾರನಿಂದ ಲಂಚ (bribe) ಕ್ಕೆ ಬೇಡಿಕೆ ಇಟ್ಟಿದ್ದ ಮಂಗಳೂರಿನ ಬೋಂದೆಲ್​ನಲ್ಲಿರುವ ಸಹಾಯಕ ಕಾರ್ಯಪಾಲ ಇಂಜಿನಿಯರವರ ಕಛೇರಿ, ಲೋಕೋಪಯೋಗಿ ಇಲಾಖೆ ಗುಣ ಭರವಸೆ ಉಪವಿಭಾಗದ ಇದರ ಕಿರಿಯ ಇಂಜಿನಿಯರ್-2 ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಆಕ್ಟೋಬರ್ 18 ರಂದು ಮುಲ್ಕಿಯಲ್ಲಿ ನಡೆದಿದೆ. ರೋನಾಲ್ಡ್ ಲೋಬೋ ಲೋಕಾಯುಕ್ತ ಬಲೆಗೆ ಬಿದ್ದ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್.

ಮಂಗಳೂರು ಬೋಂದೆಲ್​ನಲ್ಲಿರುವ ಸಹಾಯಕ ಕಾರ್ಯಪಾಲಕ ಇಂಜಿನಿಯರವರ ಕಚೇರಿ ಲೋಕೋಪಯೋಗಿ ಇಲಾಖೆಯ ಗುಣ ಭರವಸೆ ಉಪವಿಭಾಗದ ಕಿರಿಯ ಇಂಜಿನಿಯರ್ -2 ಆಗಿರುವ ರೋನಾಲ್ಡ್ ಲೋಬೋ ಗುತ್ತಿಗೆದಾರರೊಬ್ಬರಿಂದ 20,000 ರೂ. ಲಂಚದ ಹಣ ಸ್ವೀಕಾರಿಸುತ್ತಿದ್ದ ವೇಳೆ ಇಂದು ಮಧ್ಯಾಹ್ನದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಆರೋಪಿ ಕಿರಿಯ ಇಂಜಿನಿಯರ್ ನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಹೆಡ್​ ಕಾನ್ಸ್​ಟೇಬಲ್​; ಪಡೆದ ಹಣವೇಷ್ಟು ಗೊತ್ತಾ?

ದಕ್ಷಿಣ ಕನ್ನಡ ಜಿಲ್ಲಾ ಲೋಕಾಯುಕ್ತ ಎಸ್ಪಿ ಸಿ.ಎ.ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಕಲಾವತಿ, ಇನ್ಸ್ಪೆಕ್ಟರ್ ಸುರೇಶ್ ಕುಮಾರ್, ಇನ್ಸ್ಪೆಕ್ಟರ್ ಅಮಾನುಲ್ಲಾ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಬಿದ್ದ ಅಬಕಾರಿ ಕಾನ್ಸ್‌ಟೇಬಲ್‌

ಮಂಡ್ಯ: ಲಂಚ ಸ್ವೀಕರಿಸುವಾಗ ಅಬಕಾರಿ ಕಾನ್ಸ್‌ಟೇಬಲ್‌ ರೆಡ್​ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಇತ್ತೀಚೆಗೆ ಜಿಲ್ಲೆಯ ನಾಗಮಂಗಲ ಅಬಕಾರಿ ಕಚೇರಿಯಲ್ಲಿ ನಡೆದಿತ್ತು. ಲೋಕಾಯುಕ್ತ ದಾಳಿ ವೇಳೆ ಅಬಕಾರಿ ಇನ್ಸ್​ಪೆಕ್ಟರ್‌​​ ಗೀತಾ ಪರಾರಿಯಾಗಿದ್ದರು. ಅಬಕಾರಿ ಪೇದೆ ದೇವರಾಜು ಬಲೆಗೆ ಬಿದಿದ್ದರು. ಇತ ಸುರೇಶ್ ಎಂಬಾತನಿಂದ 10 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಮಂಡ್ಯ ಲೋಕಾಯುಕ್ತ ಎಸ್​ಪಿ ಸಜೀತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.

ಇದನ್ನೂ ಓದಿ: ಜನತಾ ದರ್ಶನ: ದೂರು ಕೊಟ್ಟವರಿಂದಲೇ ಲಂಚ ಕೇಳುತ್ತಾರೆ: ಶಾಸಕ ವಿಠಲ ಕಟಕದೊಂಡ ಅಸಮಾಧಾನ

ಚಾರ್ಜ್‌ಶೀಟ್​ನಲ್ಲಿ ಜಮೀನು ಮಾಲೀಕನ ಹೆಸರು ಕೈಬಿಡಲು ಸುರೇಶ್‌ ಬಳಿ ಇನ್ಸ್​ಪೆಕ್ಟರ್‌ ಗೀತಾ 20 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಗೀತಾ ಅವರ ಸೂಚನೆಯಂತೆ ಪೇದೆ ದೇವರಾಜು ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದರು.

ಪ್ರಾಥಮಿಕ ಆರೋಗ್ಯ ಕೇಂದ್ರದ SDA ಲೋಕಾ ಬಲೆಗೆ

ಬೀದರ್: ಹುಮ್ನಾಬಾದ್ ತಾಲೂಕಿನ ಹುಡುಗಿ ಗ್ರಾಮದ ಪ್ರಾಥಮಿಕ ಕೇಂದ್ರದ ಎಸ್​ಡಿಎ ಅಧಿಕಾರಿ ಆಗಿ ಕೆಲಸ ಮಾಡುತ್ತಿದ್ದ ಸುನೀಲ್ ಕುಮಾರ್ ಎಂಬಾತ, ಹೆಲ್ತ್​​ ಇನ್ಸ್​ಪೆಕ್ಟರ್​ ಸಂಬಳ ಮಂಜೂರು ಮಾಡಲು 20 ಸಾವಿರ ರೂ, ಲಂಚಕ್ಕೆ ಬೇಡಿಕೆಯಿಟ್ಟು, ಅದನ್ನು ಪಡೆಯುವಾಗ ಲೋಕಾಯುಕ್ತ ಡಿವೈಎಸ್​ಪಿ ಎನ್.ಎಂ.ಓಲೇಕಾರ್ ಮಾರ್ಗದರ್ಶನದಲ್ಲಿ ದಾಳಿ ನಡೆಸಿದಾಗ ಸಿಕ್ಕಿಬಿದ್ದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್