AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ದುರಂತ: ಭಾರೀ ಮಳೆಗೆ ಕುಸಿದ ಹಂಚಿನ ಮನೆಯ ಮೇಲ್ಚಾವಣಿ, ಇಬ್ಬರು ಬಾಲಕಿಯರು ಸೇರಿ ಮೂವರು ಸ್ಥಳದಲ್ಲೇ ಸಾವು

Mangalore Rain: ಕರಾವಳಿ ಕರ್ನಾಟಕದಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಮಂಗಳೂರಿನ ಕಂಕನಾಡಿಯಲ್ಲಿ ಹಳೆಯ ಹಂಚಿನ ಮನೆಯೊಂದರ ಮೇಲ್ಚಾವಣಿ ಕುಸಿದು ಬಿದ್ದಿದೆ. ಘಟನೆಯಲ್ಲಿ ಮನೆಯೊಳಗಿದ್ದ ಮಹಿಳೆ ಸೇರಿದಂತೆ ಇಬ್ಬರು ಬಾಲಕಿಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಮೂವರನ್ನು ರಕ್ಷಿಸಲಾಗಿದೆ.

ಮಂಗಳೂರಿನಲ್ಲಿ ದುರಂತ: ಭಾರೀ ಮಳೆಗೆ ಕುಸಿದ ಹಂಚಿನ ಮನೆಯ ಮೇಲ್ಚಾವಣಿ, ಇಬ್ಬರು ಬಾಲಕಿಯರು ಸೇರಿ ಮೂವರು ಸ್ಥಳದಲ್ಲೇ ಸಾವು
ರಕ್ಷಣಾ ಕಾರ್ಯಾಚರಣೆImage Credit source: tv9
ಅಶೋಕ್​ ಪೂಜಾರಿ
| Edited By: |

Updated on:Jul 01, 2026 | 8:56 AM

Share

ಮುಖ್ಯಾಂಶಗಳು

  • ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ
  • ಮಹಿಳೆ, ಇಬ್ಬರು ಬಾಲಕಿಯರ ಸಾವು
  • ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ ಸಿಬ್ಬಂದಿ

ಮಂಗಳೂರು, ಜುಲೈ 1: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಾದ್ಯಂತ ಮಂಗಳವಾರ ರಾತ್ರಿಯಿಂದ ಸುರಿಯುತ್ತಿರುವ ನಿರಂತರ ಮಳೆಗೆ ಮಂಗಳೂರು ನಗರದ ಕಂಕನಾಡಿಯಲ್ಲಿ ಭೀಕರ ದುರಂತ ಸಂಭವಿಸಿದೆ. ಇಲ್ಲಿನ ಹಳೆಯ ಹಂಚಿನ ಮನೆಯೊಂದರ ಮೇಲ್ಚಾವಣಿ ಹಾಗೂ ಗೋಡೆ ಬುಧವಾರ ಮುಂಜಾನೆ ದಿಢೀರನೆ ಕುಸಿದು ಬಿದ್ದ ಪರಿಣಾಮ, ಮನೆಯೊಳಗೆ ನಿದ್ದೆಯ ಮಂಪರಿನಲ್ಲಿದ್ದ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಒಬ್ಬ ಮಹಿಳೆ ಹಾಗೂ ಇಬ್ಬರು ಬಾಲಕಿಯರು ಎಂದು ಗುರುತಿಸಲಾಗಿದೆ.

ಒಬ್ಬ ಪುರುಷ, ಇಬ್ಬರು ಬಾಲಕಿಯರ ರಕ್ಷಣೆ

ಘಟನೆಯ ನಡೆದ ತಕ್ಷಣ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಮೇಲ್ಚಾವಣಿಯ ಅವಶೇಷಗಳ ಅಡಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಒಬ್ಬ ಪುರುಷ ಹಾಗೂ ಇಬ್ಬರು ಬಾಲಕಿಯರನ್ನು ಪ್ರಾಣಾಪಾಯದಿಂದ ರಕ್ಷಿಸಲಾಗಿದೆ. ಮಂಗಳವಾರ ರಾತ್ರಿಯಿಂದ ತಡೆವಿಲ್ಲದೆ ಸುರಿದ ಭಾರಿ ಮಳೆಯಿಂದಾಗಿ ಹಳೆಯದಾಗಿದ್ದ ಮನೆಯ ಗೋಡೆಗಳು ಸಂಪೂರ್ಣವಾಗಿ ತೇವಗೊಂಡು ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಬಾಡಿಗೆ ಮನೆಯಲ್ಲಿ ವಾಸವಿದ್ದ ಬಿಹಾರದವರು

ಮೃತಪಟ್ಟವರೆಲ್ಲ ಬಿಹಾರದವರು ಎಂಬುದು ತಿಳಿದುಬಂದಿದೆ. ಒಟ್ಟು ನಾಲ್ಕು ಕುಟುಂಬಗಳು ಬಾಡಿಗೆ ಮನೆಯಲ್ಲಿ ವಾಸವಾಗಿದ್ದವು. ಈ ಪೈಕಿ ಒಂದು ಮನೆಯಲ್ಲಿ ಬಿಹಾರ ಮೂಲದ ಕುಟುಂಬ ವಾಸವಿತ್ತು. ಗಂಡ ಲಾಲ್ ಬಾಬು, ಪತ್ನಿ ಇಂದು, ಮಕ್ಕಳಾದ ಅನುಷಾ, ಅಲ್ಕಾ, ಅನಾಮಿಕ ಚೌರಾಸಿಯ, ಪರಿ ಜೊತೆ ವಾಸವಾಗಿದ್ದರು. ಈ ಪೈಕಿ ಅನಾಮಿಕ ಚೌರಾಸಿಯ(8), ಪರಿ (4) ಮೃತಪಟ್ಟಿದ್ದಾರೆ. ಲಾಲ್ ಬಾಬು ಹಾಗೂ ಪತ್ನಿ ಇಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೊಂದು ಮನೆಯಲ್ಲಿ ಬಾಲಕೃಷ್ಣ, ಶಾಂತಾ ದಂಪತಿ ವಾಸವಾಗಿದ್ದರು. ಇದರಲ್ಲಿ ಮಹಿಳೆ ಶಾಂತ (46) ಸಾವಿಗೀಡಾಗಿದ್ದಾರೆ. ಸದ್ಯ ಗಾಯಾಳುಗಳಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ

ಮೃತರ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಘೋಷಣೆ ಮಾಡಿದೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಜಿಲ್ಲಾಡಳಿತವೇ ಭರಿಸಲಿದೆ. ಮನೆ ಮಾಲೀಕರಿಗೆ ಪರಿಹಾರ ನೀಡುವುದಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ‘ಟವಿ9’ಗೆ ಮಾಹಿತಿ ನೀಡಿದರು.

ದೆಹಲಿ ಪ್ರವಾಸ ಮೊಟಕುಗಳಿಸಿದ ಸಚಿವ ಯುಟಿ ಖಾದರ್

ಮನೆ ಮೇಲೆ ತಡೆಗೋಡೆ ಕುಸಿದು ಮೂವರು ಸಾವಿಗೀಡಾದ ವಿಚಾರ ತಿಳಿಯುತ್ತಿದ್ದಂತೆಯೇ ಸಚಿವ ಯುಟಿ ಖಾದರ್ ದೆಹಲಿ ಪ್ರವಾಸ ಮೊಟಕುಗೊಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದು ಜಿಲ್ಲಾಧಿಕಾರಿಯನ್ನು ಸಂಪರ್ಕಿಸಿದ ಸಚಿವರು, ತ್ವರಿತ ಪರಿಹಾರ ಕ್ರಮಗಳಿಗೆ ಸೂಚನೆ‌ ನೀಡಿದ್ದಾರೆ.

ದಕ್ಷಿಣ ಕನ್ನ ಜಿಲ್ಲೆಗೆ ಆರೆಂಜ್ ಅಲರ್ಟ್

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕೊನೆಗೂ ಮುಂಗಾರು ಮಳೆ ಚುರುಕುಗೊಂಡಿದ್ದು, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗುತ್ತಿದೆ. ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: ಮುಂದಿನ ಕೆಲವು ದಿನ ಭಾರಿ ಮಳೆ; ಉಡುಪಿ, ಮಂಗಳೂರು ಸೇರಿ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:48 am, Wed, 1 July 26

Follow Us
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ