AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರಿ ಗಾಳಿ ಮಳೆಗೆ ಮನೆ ಮೇಲೆ ಬಿತ್ತು ಬೃಹದಾಕಾರದ ಅಶ್ವತ್ಥ ಮರ: ಪವಾಡಸದೃಶ ರೀತಿಯಲ್ಲಿ ಪಾರಾದ ಕುಟುಂಬ

ಮಂಗಳೂರಿನಲ್ಲಿ ಭಾರೀ ಮಳೆಗೆ ಕುದ್ರೋಳಿಯ ವರದರಾಜ್ ಶೇಟ್ ಎಂಬುವವರ ಮನೆ ಮೇಲೆ ಬೃಹತ್ ಅಶ್ವತ್ಥ ಮರ ಬಿದ್ದಿದೆ. ಮಂಗಳವಾರ ರಾತ್ರಿ ಮಲಗುವ ಜಾಗ ಬದಲಿಸಿದ್ದರಿಂದ ಮನೆಯಲ್ಲಿದ್ದ 4 ತಿಂಗಳ ಮಗು ಹಾಗೂ ವೃದ್ಧರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಾಲಿಕೆಯ ನಿರ್ಲಕ್ಷ್ಯವೇ ಈ ಅವಘಡಕ್ಕೆ ಕಾರಣ ಎಂದು ಕುಟುಂಬಸ್ಥರು ದೂರಿದ್ದಾರೆ.

ಭಾರಿ ಗಾಳಿ ಮಳೆಗೆ ಮನೆ ಮೇಲೆ ಬಿತ್ತು ಬೃಹದಾಕಾರದ ಅಶ್ವತ್ಥ ಮರ: ಪವಾಡಸದೃಶ ರೀತಿಯಲ್ಲಿ ಪಾರಾದ ಕುಟುಂಬ
ಮನೆ ಮೇಲೆ ಬಿದ್ದ ಬೃಹದಾಕಾರದ ಅಶ್ವತ್ಥ ಮರImage Credit source: tv9
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Apr 22, 2026 | 11:32 AM

Share

ಮಂಗಳೂರು, ಏಪ್ರಿಲ್ 22: ಕರಾವಳಿಯಲ್ಲಿ (Coastal Karnataka) ಮಂಗಳವಾರ ತಡರಾತ್ರಿ ಭಾರಿ ಗಾಳಿ-ಮಳೆ (Rain) ಸುರಿದಿದೆ. ಗಾಳಿ-ಮಳೆಗೆ ಮಂಗಳೂರಿನ (Mangalore) ಕುದ್ರೋಳಿಯ ಬಸವನಗುಡಿ ರಸ್ತೆಯಲ್ಲಿ ಭೀಕರ ಅವಘಡವೊಂದು ಸಂಭವಿಸಿದೆ. ಇಲ್ಲಿನ ಮನೆಯೊಂದರ ಮೇಲೆ ಬೃಹದಾಕಾರದ ಅಶ್ವತ್ಥ ಮರವೊಂದು ಉರುಳಿ ಬಿದ್ದಿದ್ದು, ಮನೆಯಲ್ಲಿದ್ದವರು ಪವಾಡಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವರದರಾಜ್ ಶೇಟ್ ಎಂಬುವವರ ಮನೆ ಮೇಲೆ ನಸುಕಿನ ಜಾವ 3:30ರ ಸುಮಾರಿಗೆ ಈ ಮರ ಬಿದ್ದಿದೆ.

ಸಾಮಾನ್ಯವಾಗಿ ಮನೆಯ ಸದಸ್ಯರು ಪ್ರತಿದಿನ ಮಹಡಿಯ ಮೇಲಿರುವ ಬೆಡ್‌ರೂಂನಲ್ಲಿ ಮಲಗುತ್ತಿದ್ದರು. ಆದರೆ, ಮಂಗಳವಾರ ರಾತ್ರಿ ಅಚಾನಕ್ಕಾಗಿ ‘ಇವತ್ತು ಕೆಳಗಡೆ ಅಡ್ಜಸ್ಟ್ ಮಾಡಿಕೊಂಡು ಮಲಗೋಣ’ ಎಂದು ನಿರ್ಧರಿಸಿ ಕೆಳಮಹಡಿಯಲ್ಲಿ ಮಲಗಿದ್ದರು. ನಸುಕಿನ ಜಾವ ಮರ ಬಿದ್ದ ರಭಸಕ್ಕೆ ಮಹಡಿಯ ಭಾಗ ಜಖಂಗೊಂಡಿದ್ದು, ಒಂದು ವೇಳೆ ಮೇಲೆ ಮಲಗಿದ್ದರೆ ಭಾರೀ ಅಪಾಯ ಸಂಭವಿಸುತ್ತಿತ್ತು ಎಂದು ಕುಟುಂಬಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಮನೆಯಲ್ಲಿ 4 ತಿಂಗಳ ಮಗು ಹಾಗೂ 80 ವರ್ಷದ ಇಬ್ಬರು ವೃದ್ಧರಿದ್ದರು.

ಪಾಲಿಕೆ ವಿರುದ್ಧ ಆಕ್ರೋಶ

ಈ ಮರ ಅಪಾಯಕಾರಿಯಾಗಿದೆ ಎಂದು ಈ ಹಿಂದೆಯೇ ಮಹಾನಗರ ಪಾಲಿಕೆಗೆ ದೂರು ನೀಡಲಾಗಿತ್ತು. ಆದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಪಾಲಿಕೆಯ ನಿರ್ಲಕ್ಷ್ಯದಿಂದಲೇ ಈ ಅವಘಡ ಸಂಭವಿಸಿದೆ ಎಂದು ವರದರಾಜ್ ಕುಟುಂಬ ಆಕ್ರೋಶ ವ್ಯಕ್ತಪಡಿಸಿದೆ. ಜನಪ್ರತಿನಿಧಿಗಳು ಸ್ಥಳಕ್ಕೆ ಬರುವವರೆಗೂ ಮರ ತೆರವು ಮಾಡಲು ಬಿಡುವುದಿಲ್ಲ ಎಂದು ಅವರು ಪಟ್ಟು ಹಿಡಿದಿದ್ದಾರೆ.

ಅತ್ತಾವರದಲ್ಲಿ ಕಾಂಪೌಂಡ್ ಕುಸಿತ

Mangalore Compound Collapse

ಅತ್ತಾವರದಲ್ಲಿ ಕಾಂಪೌಂಡ್ ಕುಸಿದು ಕಾರುಗಳು ಸಂಪೂರ್ಣ ಜಖಂ

ಮತ್ತೊಂದೆಡೆ, ಮಂಗಳೂರಿನ ಅತ್ತಾವರದಲ್ಲಿ ಕಾಂಪೌಂಡ್ ಗೋಡೆಯೊಂದು ಕುಸಿದು ಬಿದ್ದ ಪರಿಣಾಮ ಅದರ ಪಕ್ಕದಲ್ಲಿ ನಿಲ್ಲಿಸಿದ್ದ ಕಾರುಗಳು ಸಂಪೂರ್ಣ ಜಖಂಗೊಂಡಿವೆ. ಧಾರ್ಮಿಕ ಕಾರ್ಯಕ್ರಮವಿದ್ದ ಕಾರಣ ಪಾರ್ಕಿಂಗ್ ಜಾಗವಿಲ್ಲದೆ ಕಾರನ್ನು ಅಲ್ಲಿ ನಿಲ್ಲಿಸಲಾಗಿತ್ತು. ‘ವರ್ಷದ ಹಿಂದೆಯಷ್ಟೇ ನಿರ್ಮಿಸಿದ ಗೋಡೆ ಮಳೆಗೆ ಕುಸಿದಿದೆ, ಈಗ ನಮಗೆ ಪರಿಹಾರ ನೀಡುವವರು ಯಾರು?’ ಎಂದು ಕಾರು ಮಾಲೀಕರು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಮುಂದಿನ 7 ದಿನ ಕರ್ನಾಟಕ ಕೂಲ್​ ಕೂಲ್: ಈ ಜಿಲ್ಲೆಗಳಿಗೆ ಬರಲಿದ್ದಾನೆ ವರುಣ; ಬಿಸಿಲ ಧಗೆಯಿಂದ ಸಿಗಲಿದೆ ಮುಕ್ತಿ!

ಏತನ್ಮಧ್ಯೆ, ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಏಪ್ರಿಲ್ 22 ಮತ್ತು 23 ರಂದು ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಸಂಜೆ ಅಥವಾ ರಾತ್ರಿ ವೇಳೆ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!