AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಹಾಸ್ ಶೆಟ್ಟಿ ಹತ್ಯೆಯ ಪ್ರತೀಕಾರವಾಗಿ ಕೊಲೆ ಸುಪಾರಿ ನೀಡಿದ ಆರೋಪ; ಡೀಲರ್​ನಿಂದಲೇ ಬಯಲಾಯ್ತು ಸಂಚು!

ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರವಾಗಿ ಮುಸ್ಲಿಂ ವ್ಯಕ್ತಿಯ ಕೊಲೆಗೆ ನಡೆದಿದ್ದ 25 ಲಕ್ಷ ರೂಪಾಯಿ ಸುಪಾರಿ ಸಂಚು ದೂರುದಾರ ಯುವಕನಿಂದಲೇ ಬಯಲಾಗಿದೆ. ಇನ್ನೊಂದೆಡೆ, ಬಂಟ್ವಾಳದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಗೂಂಡಾ ಕಾಯಿದೆ ಹೇರಿರುವುದನ್ನು ಹಾಗೂ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟೀಸ್ ನೀಡಿರುವುದನ್ನು ವಿರೋಧಿಸಿ ವಿಎಚ್‌ಪಿ-ಭಜರಂಗದಳದಿಂದ ಬಿಸಿರೋಡ್ ಚಲೋ ಹಮ್ಮಿಕೊಳ್ಳಲಾಗಿದೆ.

ಸುಹಾಸ್ ಶೆಟ್ಟಿ ಹತ್ಯೆಯ ಪ್ರತೀಕಾರವಾಗಿ ಕೊಲೆ ಸುಪಾರಿ ನೀಡಿದ ಆರೋಪ; ಡೀಲರ್​ನಿಂದಲೇ ಬಯಲಾಯ್ತು ಸಂಚು!
ಸುಹಾಸ್ ಶೆಟ್ಟಿ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Sep 28, 2026 | 10:25 AM

Share

ಮುಖ್ಯಾಂಶಗಳು

  • ಮಂಗಳೂರಿನಲ್ಲಿ 25 ಲಕ್ಷ ರೂಪಾಯಿ ಸುಪಾರಿ ಕೊಲೆ ಸಂಚು ಸಿಸಿಬಿ ತನಿಖೆಗೆ ಹಸ್ತಾಂತರ.
  • ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರದ ರಹಸ್ಯ ಬಿಚ್ಚಿಟ್ಟ ಸುಪಾರಿ ಪಡೆದ ಯುವಕ  ಅಭಿಷೇಕ್.
  • ಬಂಟ್ವಾಳದಲ್ಲಿ ಗೂಂಡಾ ಕಾಯಿದೆ ಖಂಡಿಸಿ ವಿಎಚ್‌ಪಿ ಮತ್ತು ಭಜರಂಗದಳದಿಂದ ಬಿಸಿರೋಡ್ ಚಲೋ.

ಮಂಗಳೂರು, ಸೆಪ್ಟೆಂಬರ್ 28: ಕರಾವಳಿ ಭಾಗದಲ್ಲಿ ಮತ್ತೆ ಪ್ರತೀಕಾರದ ಹೆಸರಿನಲ್ಲಿ ರಕ್ತಪಾತ ಹರಿಸಲು ದೊಡ್ಡ ಮಟ್ಟದ ಸಂಚು ನಡೆದಿತ್ತೇ ಎಂಬ ಅನುಮಾನ ಮೂಡಿದೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರವಾಗಿ ಮುಸ್ಲಿಂ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಲು 25 ಲಕ್ಷ ರೂಪಾಯಿ ಸುಪಾರಿ ಡೀಲ್ ಮಾತನಾಡಲಾಗಿದ್ದ ಗಂಭೀರ ಆರೋಪ ಕೇಳಿಬಂದಿದೆ. ಈ ಕೊಲೆ ಸಂಚಿನಲ್ಲಿ ಭಾಗಿಯಾಗಿದ್ದ ಯುವಕನೊಬ್ಬ ಮನಪರಿವರ್ತನೆಯಾಗಿ ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡುವ ಮೂಲಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಕೊಟ್ಟಿದ್ದಾನೆ.

ಪ್ರತೀಕಾರದ ಮಾತುಗಳನ್ನಾಡಿದ್ದ ವ್ಯಕ್ತಿ!

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತೊಟ್ಟು ಕಾಶಿಪಟ್ಲ ನಿವಾಸಿ ಅಭಿಷೇಕ್ ದೂರು ನೀಡಿದ ಯುವಕ. ಅಭಿಷೇಕ್‌ನನ್ನು, 2025ರ ಮೇ ತಿಂಗಳಲ್ಲಿ ಸುಹಾಸ್ ಶೆಟ್ಟಿ ಹತ್ಯೆಯಾದ ಬಳಿಕ ಉಡುಪಿಯ ಸುದೀಪ್ ಎಂಬಾತ ಸಂಪರ್ಕಿಸಿದ್ದ. “ಒಬ್ಬ ಹಿಂದುವಿನ ಹತ್ಯೆಗೆ ಪ್ರತಿಯಾಗಿ ಮುಸ್ಲಿಂ ವ್ಯಕ್ತಿಯನ್ನು ಕೊಲೆ ಮಾಡಲೇಬೇಕು” ಎಂದು ಪ್ರತೀಕಾರದ ಮಾತುಗಳನ್ನಾಡಿದ್ದ ಎಂದು ಆರೋಪಿಸಲಾಗಿದೆ.

25 ಲಕ್ಷ ರೂ. ಸುಪಾರಿ ಮತ್ತು ಜೈಲಿಗೆ ಹೋದರೆ ಮಾಸಿಕ ಖರ್ಚಿನ ಭರವಸೆ!

ನಾಲ್ಕು ತಿಂಗಳ ಹಿಂದೆ ಅಭಿಷೇಕ್ ಹಾಗೂ ಆತನ ಸ್ನೇಹಿತ ಕೀರ್ತನ್‌ನನ್ನು ಉಡುಪಿಗೆ ಕರೆಸಿಕೊಂಡ ಸುದೀಪ್, ಮಹೇಶ್ ಎಂಬಾತನನ್ನು ಪರಿಚಯಿಸಿ ಕೊಲೆ ಯೋಜನೆ ರೂಪಿಸಿದ್ದ. ಬಜ್ಪೆ ಕಿನ್ನಿಪದವಿನ ವ್ಯಕ್ತಿಯೊಬ್ಬರ ಫೋಟೋ ನೀಡಿ ಹತ್ಯೆ ಮಾಡಲು ಸೂಚಿಸಲಾಗಿತ್ತು. ಈ ಕೃತ್ಯ ಎಸಗಿದರೆ ಒಟ್ಟು 24 ರಿಂದ 25 ಲಕ್ಷ ರೂಪಾಯಿ ನೀಡುವುದಾಗಿಯೂ, ಜೈಲಿಗೆ ಹೋದರೆ ಕುಟುಂಬದ ನಿರ್ವಹಣೆಗೆ ಪ್ರತಿ ತಿಂಗಳು 15,000 ರೂ. ಹಣ ಮತ್ತು 5,000 ರೂ. ಮೌಲ್ಯದ ದಿನಸಿ ನೀಡುವುದಾಗಿ ಭರವಸೆ ನೀಡಲಾಗಿತ್ತು. ದೂರುದಾರ ಅಭಿಷೇಕ್ ಕೊಲೆಗೆ ಎರಡು ತಲವಾರ್‌ಗಳನ್ನು ಸಹ ಸಿದ್ಧಪಡಿಸಿಕೊಂಡಿದ್ದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾನೆ.

ಪತ್ನಿಯ ಹೆರಿಗೆ ಬಳಿಕ ಬದಲಾದ ಮನಸ್ಸು!

ಇಷ್ಟೆಲ್ಲಾ ಸಿದ್ಧತೆಯ ನಡುವೆ ಅಭಿಷೇಕ್ ಪತ್ನಿ ಹೆರಿಗೆಯಾದ ಕಾರಣ ಆತನಿಗೆ ಮನಪರಿವರ್ತನೆಯಾಗಿದೆ. ಅಪರಾಧ ಕೃತ್ಯದಲ್ಲಿ ಭಾಗಿಯಾದರೆ ಜೈಲು ಪಾಲಾಗಬೇಕಾಗುತ್ತದೆ ಎಂಬ ಭಯದಿಂದ ಕೃತ್ಯದಿಂದ ಹಿಂದೆ ಸರಿದ ಆತ, ವಾಟ್ಸಾಪ್ ಚಾಟ್‌ಗಳು, ಸ್ಕ್ರೀನ್‌ಶಾಟ್‌ಗಳು ಹಾಗೂ ಸಂಭಾಷಣೆಯ ಆಡಿಯೋ ಸಾಕ್ಷ್ಯಗಳೊಂದಿಗೆ ಪೊಲೀಸರ ಮೆಟ್ಟಿಲೇರಿದ್ದಾನೆ.

ಸದ್ಯ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಅವರು ತನಿಖೆಯನ್ನು ಸಿಸಿಬಿಗೆ (CCB) ಹಸ್ತಾಂತರಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿದ್ದು, ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ವಾಸ್ತವಾಂಶ ತಿಳಿಯಲು ತನಿಖೆ ಚುರುಕುಗೊಳಿಸಲಾಗಿದೆ.

LIVE TV

ಹಿಂದೂ ಕಾರ್ಯಕರ್ತರ ಮೇಲೆ ಗೂಂಡಾ ಕಾಯಿದೆ ಖಂಡಿಸಿ ಇಂದು ಬಿ.ಸಿ.ರೋಡ್ ಚಲೋ!

ಇನ್ನೊಂದೆಡೆ, ಬಂಟ್ವಾಳದ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣದಲ್ಲಿ ಕೋಕಾ ಕೋರ್ಟ್‌ನಿಂದ ಜಾಮೀನು ಸಿಕ್ಕಿದ್ದರೂ ಭಜರಂಗದಳ ಮುಖಂಡ ಭರತ್ ಕುಮ್ಡೇಲು ಸೇರಿದಂತೆ 6 ಜನರ ಮೇಲೆ ದ.ಕ ಜಿಲ್ಲಾಡಳಿತ ಗೂಂಡಾ ಕಾಯಿದೆ ಹೇರಿರುವುದು ಹಾಗೂ ಆರ್‌ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಪೊಲೀಸ್ ನೋಟೀಸ್ ನೀಡಿರುವುದನ್ನು ಖಂಡಿಸಿ ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ಇಂದು ಬಿ.ಸಿ.ರೋಡ್ ಚಲೋಗೆ ಕರೆ ನೀಡಿವೆ. ಕಾಂಗ್ರೆಸ್ ಸರ್ಕಾರ ಹಾಗೂ ದ.ಕ ಜಿಲ್ಲಾ ಪೊಲೀಸ್ ಇಲಾಖೆಯ ನಡೆ ವಿರೋಧಿಸಿ ಇಂದು ಬೆಳಿಗ್ಗೆ 10:30ಕ್ಕೆ ಬೃಹತ್ ಪ್ರತಿಭಟನೆ ಆಯೋಜಿಸಲಾಗಿದ್ದು, ಕರಾವಳಿಯಲ್ಲಿ ಮತ್ತೆ ಕಾವೇರಿದ ವಾತಾವರಣ ನಿರ್ಮಾಣವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ