AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೊಕ್ಕೊಟ್ಟು ಫ್ಲೈಓವರ್‌ ಬಳಿ ರೌಡಿಶೀಟರ್‌ ಭೀಕರ ಹತ್ಯೆ: ಗ್ಯಾಂಗ್​ವಾರ್​ಗೆ ಹೋಯ್ತಾ ಜೀವ?

ಮಂಗಳೂರು ಹೊರವಲಯದ ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ರೌಡಿಶೀಟರ್ ಆರಿಫ್​ನನ್ನು ಬರ್ಬರವಾಗಿ ಹತ್ಯೆಗೈಯಲಾಗಿದೆ. ಶುಕ್ರವಾರ ನಸುಕಿನ ಜಾವ ಆರಿಫ್ ಬೈಕ್‌ಗೆ ಕಾರು ಡಿಕ್ಕಿ ಹೊಡೆದು, ನಂತರ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಈ ಹಿಂದೆಯೂ ಆರಿಫ್ ಮೇಲೆ ಕೊಲೆ ಯತ್ನ ನಡೆದಿತ್ತು. ಹೀಗಾಗಿ ಇದು ಗ್ಯಾಂಗ್‌ವಾರ್‌ನ ಪರಿಣಾಮವಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ.

ತೊಕ್ಕೊಟ್ಟು ಫ್ಲೈಓವರ್‌ ಬಳಿ ರೌಡಿಶೀಟರ್‌ ಭೀಕರ ಹತ್ಯೆ: ಗ್ಯಾಂಗ್​ವಾರ್​ಗೆ ಹೋಯ್ತಾ ಜೀವ?
ತೊಕ್ಕೊಟ್ಟು ಫ್ಲೈಓವರ್‌ ಬಳಿ ರೌಡಿಶೀಟರ್‌ ಭೀಕರ ಹತ್ಯೆ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Mar 27, 2026 | 10:25 AM

Share

ಮಂಗಳೂರು, ಮಾರ್ಚ್​ 27: ನಗರದ (Mangalore) ಹೊರವಲಯದ ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ಶುಕ್ರವಾರ ನಸುಕಿನ ಜಾವ ರೌಡಿಶೀಟರ್‌ನೊಬ್ಬರನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ಮೃತರನ್ನು ತಲಪಾಡಿ ಸಮೀಪದ ಮುಳ್ಳುಗುಡ್ಡೆ ನಿವಾಸಿ ಆರಿಫ್ ಅಲಿಯಾಸ್ ಟಾಬ್ಲೆಟ್ ಆರಿಫ್ (46) ಎಂದು ಗುರುತಿಸಲಾಗಿದೆ. ಕೊಲೆಗೆ ನೈಜ ಕಾರಣವೇನೆಂಬುದು ತಿಳಿಯಬೇಕಿದೆ.

ಆರಿಫ್ ಬೈಕ್​ಗೆ ಕಾರಿನಿಂದ ಡಿಕ್ಕಿ

ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ ರೌಡಿಶೀಟರ್ ಆಗಿದ್ದ ಆರಿಫ್, ಮುಂಜಾನೆ ಸುಮಾರು 4 ಗಂಟೆ ವೇಳೆಗೆ ಬೈಕ್‌ನಲ್ಲಿ ಸಂಚರಿಸುತ್ತಿದ್ದ ವೇಳೆ ದುಷ್ಕರ್ಮಿಗಳ ಹಲ್ಲೆಗೊಳಗಾಗಿದ್ದಾನೆ. ಆರಿಫ್ ತೆರಳುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಆತ ರಸ್ತೆ ಮೇಲೆ ಬಿದ್ದಾಗ, ಕಾಯುತ್ತಾ ಕುಳಿತಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ತಲೆಯ ಭಾಗಕ್ಕೆ ಕಡಿದು ಕೊಲೆಗೈದಿದ್ದಾರೆ. ಕೃತ್ಯ ಎಸಗಿದ ಬಳಿಕ ಆರೋಪಿಗಳು ಕಾರಿನಲ್ಲಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಉಳ್ಳಾಲ ಠಾಣೆ ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.

ಇದನ್ನೂ ಓದಿ ಗಂಡ ಮಕ್ಳನ್ನ ಬಿಟ್ಟು ಇವನೇ ಬೇಕಂತ ಯಾಕೆ ಬಂದವ್ಳೇ? ಅಕ್ರಮ ಸಂಬಂಧಕ್ಕೆ ಕೊಲೆಯಾದ ರಂಜಿತ್ ತಾಯಿ ಅಳಲು

ಈ ಮೊದಲೂ ನಡೆದಿತ್ತು ಕೊಲೆ ಯತ್ನ

ಆರಿಫ್ ವಿರುದ್ಧ ಹಿಂದೆಯೂ ಪ್ರಕರಣಗಳು ದಾಖಲಾಗಿದ್ದವು ಎಂದು ತಿಳಿದುಬಂದಿದೆ. 2022ರಲ್ಲಿ ಉಚ್ಚಿಲ ಸೇತುವೆ ಸಮೀಪ ಆತನ ಮೇಲೆ ಕೊಲೆ ಯತ್ನ ನಡೆದಿತ್ತು. ಹೀಗಾಗಿ ಈ ಹತ್ಯೆಗೆ ಗ್ಯಾಂಗ್‌ವಾರ್ ಹಿನ್ನೆಲೆ ಇರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ನಿಖರ ಕಾರಣ ತನಿಖೆಯ ಬಳಿಕವೇ ತಿಳಿಯಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More