AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್‌ ನಿಧನ

ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಪತ್ರಕರ್ತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮನೋಹರ್ ಪ್ರಸಾದ್ ಅವರು ನಿಧನ ಹೊಂದಿದ್ದಾರೆ. ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದ ಮನೋಹರ ಪ್ರಸಾದ್ ಅವರು ಸುಮಾರು ನಾಲ್ಕು ದಶಕಗಳ ಕಾಲ ಮಾಧ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದರು.

ಮಂಗಳೂರು: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್‌ ನಿಧನ
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್‌ ನಿಧನ
ಅಶೋಕ್​ ಪೂಜಾರಿ, ಮಂಗಳೂರು
| Updated By: Rakesh Nayak Manchi|

Updated on:Mar 01, 2024 | 9:51 AM

Share

ಮಂಗಳೂರು, ಮಾ.1: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಹಿರಿಯ ಪತ್ರಕರ್ತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮನೋಹರ್ ಪ್ರಸಾದ್ (Manohar Prasad) (64) ಅವರು ನಿಧನ ಹೊಂದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮನೋಹರ್ ಪ್ರಸಾದ್ ಅವರು ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಇವರ ಅಗಲಿಕೆಗೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದ ಮನೋಹರ ಪ್ರಸಾದ್ ಅವರು ಸುಮಾರು ನಾಲ್ಕು ದಶಕಗಳ ಕಾಲ ಮಾಧ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ತಮ್ಮದೇ ಆದ ಕೊಡುಗೆ ನೀಡಿದ್ದರು. ಸರಳ ಸಜ್ಜನಿಯ ವ್ಯಕ್ತಿತ್ವವನ್ನು ಹೊಂದಿದ್ದ ಇವರ ಅಗಲಿಕೆಗೆ ಪತ್ರಿಕಾ ರಂಗ ಕಂಬನಿ ಮಿಡಿದಿದೆ.

ಇದನ್ನೂ ಓದಿ: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ಗೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರರ ಅವಿರತ ಶ್ರಮ ಮುಖ್ಯ ಕಾರಣ: ಕೆವಿ ಪ್ರಭಾಕರ್

ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ ನವ ಭಾರತ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ ಉದಯವಾಣಿ ಪತ್ರಿಕೆಯಲ್ಲಿ ವರದಿಗಾರರಾಗಿ ಕೆಲಸ ನಿರ್ವಹಿಸಿದ್ದ ಇವರು ಮುಖ್ಯ ವರದಿಗಾರರಾಗಿ, ಬ್ಯೂರೋ ಚೀಫ್, ಸಹಾಯಕ ಸಂಪಾದಕರಾಗಿ ಸೇವೆಸಲ್ಲಿಸಿದ್ದರು. ಸುಮಾರು ನಾಲ್ಕು ದಶಕಗಳ ಕಾಲ ಪತ್ರಕಾ ರಂಗದಲ್ಲಿ ಸೇವೆ ಸಲ್ಲಿಸಿದ್ದ ಇವರು ಎರಡು ವರ್ಷಗಳ ಹಿಂದೆಯಷ್ಟೇ ನಿವೃತ್ತಿಗೊಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:43 am, Fri, 1 March 24