AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಮಕ್ಕಳು ಡ್ರಗ್ ಅಡಿಕ್ಟ್ ಆಗಿದ್ದಾರೆಂದು ಪೋಷಕರಿಂದಲೇ ಪೊಲೀಸರಿಗೆ ದೂರು! ಆಮೇಲೇನಾಯ್ತು?

ಮಕ್ಕಳು ಡ್ರಗ್ಸ್ ಅಡಿಕ್ಷನ್​ಗೆ ಒಳಗಾಗಿದ್ದಾರೆ ಎಂದು ಪೋಷಕರೇ ಎಲ್ಲಿಯಾದರೂ ಪೊಲೀಸರಿಗೆ ದೂರು ನೀಡುತ್ತಾರೆಯೇ? ಹೌದು ಎಂದರೆ ನೀವು ನಂಬಲೇಬೇಕು. ಮಂಗಳೂರಿನ ಸೆನ್ ಕ್ರೈಮ್ ಠಾಣೆಗೆ ಇಂಥದ್ದೊಂದು ದೂರು ಬಂದಿದೆ. ಇದರ ಆಧಾರದಲ್ಲಿ ಪೊಲೀಸರು ಕಾರ್ಯಾಚರಣೆಯನ್ನೂ ನಡೆಸಿದ್ದಾರೆ. ಆಮೇಲೇನಾಯ್ತು? ತಿಳಿಯಲು ಮುಂದೆ ಓದಿ.

ಮಂಗಳೂರು: ಮಕ್ಕಳು ಡ್ರಗ್ ಅಡಿಕ್ಟ್ ಆಗಿದ್ದಾರೆಂದು ಪೋಷಕರಿಂದಲೇ ಪೊಲೀಸರಿಗೆ ದೂರು! ಆಮೇಲೇನಾಯ್ತು?
ಮಂಗಳೂರು ಪೊಲೀಸರು ಬಂಧಿಸಿರುವ ಡ್ರಗ್ಸ್ ಪೆಡ್ಲರ್​ಗಳು
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Jul 04, 2025 | 10:32 AM

Share

ಮಂಗಳೂರು, ಜುಲೈ 4: ಮಕ್ಕಳು ಡ್ರಗ್ ಅಡಿಕ್ಟ್ ಆಗಿದ್ದಾರೆಂದು ಪೋಷಕರೇ ಪೊಲೀಸರಿಗೆ ದೂರು ನೀಡಿದ ಅಚ್ಚರಿಯ ವಿದ್ಯಮಾನ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ (Mangalore) ನಡೆದಿದೆ. ಆದರೆ, ಇದರ ಪರಿಣಾಮ ಮಾತ್ರ ಒಳಿತೇ ಆಗಿದೆ. ನೂರಾರು ವಿದ್ಯಾರ್ಥಿಗಳಿಗೆ, ಮಕ್ಕಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಜಾಲವೇ ಪೊಲೀಸ್ ಬಲೆಗೆ ಬಿದ್ದಿದೆ. ಪೋಷಕರ ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಮಂಗಳೂರು ಸೆನ್ ಕ್ರೈಮ್ ಠಾಣೆ ಪೊಲೀಸರು ಡ್ರಗ್ಸ್ ಜಾಲವೊಂದನ್ನು ಬಯಲಿಗಳೆದಿದ್ದಾರೆ.

ಪೋಷಕರ ದೂರು ಆಧರಿಸಿ ಮಂಗಳೂರಿನ ಪಡುಶೆಡ್ಡೆ ಗ್ರಾಮದ ಹಾಲಾಡಿ ಎಂಬಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, 200ಕ್ಕೂ ಹೆಚ್ಚು ವಿದ್ಯಾರ್ಥಿ, ಉದ್ಯೋಗಿಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರಿನ ತುಷಾರ್ (21), ಧನ್ವಿ ಶೆಟ್ಟಿ (20), ಸಾಗರ್ ಕರ್ಕೇರಾ (19), ವಿಕಾಸ್ ಥಾಪ (23), ವಿಘ್ನೇಶ್ ಕಾಮತ್ (24) ಬಂಧಿತರು. ಆರೋಪಿಗಳು ಮಾದಕ ವಸ್ತುಗಳನ್ನು ಮಾರಾಟ ಮಾಡಲು ತಯಾರಿ ನಡೆಸುತ್ತಿದ್ದಾಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದು, ಒಟ್ಟು 5.20 ಲಕ್ಷ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ಗಾಂಜಾವನ್ನು ಚಿಕ್ಕ ಚಿಕ್ಕ ಪ್ಯಾಕೆಟ್ ಮಾಡಿ ಮಂಗಳೂರು ನಗರದಲ್ಲಿ ಮಾರಾಟ ಮಾಡುತ್ತಿದ್ದರು. ಪ್ಯಾಕೆಟ್​​ಗೆ 1000 ರೂ.ನಂತೆ ವಿದ್ಯಾರ್ಥಿಗಳಿಗೆ, ಉದ್ಯೋಗಿಗಳಿಗೆ ಮಾರಾಟ ಮಾಡುತ್ತಿದ್ದರು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆರೋಪಿಗಳಿಗೆ ಗಾಂಜಾ ಪೂರೈಕೆಯಾಗಿದ್ದು ಎಲ್ಲಿಂದ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ
Image
ಮುಚ್ಚುವ ಆತಂಕದಲ್ಲಿ ಜೀನ್ಸ್ ಉದ್ಯಮ: ಬೀದಿಗೆ ಬೀಳಲಿದೆ 2 ಲಕ್ಷ ಜನರ ಬದುಕು
Image
ಬೆಂಗಳೂರು: ಅಪಾರ್ಟ್‌ಮೆಂಟ್​ನಲ್ಲಿ ಸಿಕ್ಕ ಅಸ್ಥಿಪಂಜರ ಪ್ರಕರಣಕ್ಕೆ ಟ್ವಿಸ್ಟ್
Image
ಮತ್ತೊಂದು ಭ್ರಷ್ಟಾಚಾರ ಆರೋಪ: ಹಣ ಪಡೆದು ಮನೆ ಇದ್ದವರಿಗೇ ಮನೆ ಹಂಚಿಕೆ!
Image
ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್‌ ಕೇಸ್​: ಸ್ಪೋಟಕ ಮಾಹಿತಿ ಬಹಿರಂಗ

ಮಕ್ಕಳು ಮಾದಕವಸ್ತು ಜಾಲಕ್ಕೆ ಸಿಲುಕಿದ್ದರೆ ಮಾಹಿತಿ ನೀಡಿ: ಪೋಷಕರಿಗೆ ಪೊಲೀಸ್ ಆಯುಕ್ತರ ಮನವಿ

ಎರಡು ದಿನಗಳ ಹಿಂದೆ ಇಬ್ಬರು ಪೋಷಕರು ಬಂದು ತಮ್ಮ‌ ಮಕ್ಕಳು ಡ್ರಗ್ಸ್ ಅಡಿಕ್ಟ್ ಆಗಿರುವ ಬಗ್ಗೆ ಹೇಳಿಕೊಂಡಿದ್ದು, ದೂರು ನೀಡಿದ್ದರು. ದೂರಿನ‌ ಬಗ್ಗೆ ಕೂಲಂಕಷ ತನಿಖೆಗೆ ತಂಡ ರಚಿಸಿದ್ದೆವು. ಅದರಂತೆ, ಕಾರ್ಯಾಚರಣೆ ನಡೆಸಿ ಡ್ರಗ್ಸ್ ಪೂರೈಕೆ ಜಾಲದ ಐವರನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.

ಸದ್ಯ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಲಾಗಿದೆ. ಇನ್ನು ಮುಂದೆ ಅವರು ಡ್ರಗ್ಸ್ ಪೂರೈಕೆ ಮಾಡಲು ಆಗದು. ಒಬ್ಬರು ಪೋಷಕರು ಬಂದು ದೂರು ಕೊಟ್ಟಿದದರಿಂದ 200 ಜನರಿಗೆ ಡ್ರಗ್ಸ್ ಪೂರೈಕೆಯಾಗುತ್ತಿದ್ದುದನ್ನು ತಡೆಯವುದು ಸಾಧ್ಯವಾಗಿದೆ. ಅದೇ ರೀತಿ ಹತ್ತು ಜನ ಬಂದು ದೂರು ಕೊಟ್ರೆ 2 ಸಾವಿರ ಜನರಿಗೆ ಗಾಂಜಾ ಪೂರೈಕೆ ಮಾಡದಂತೆ ಪೊಲೀಸರು ಕ್ರಮ ಕೈಗೊಳ್ಳಬಹುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಭಿಕ್ಷಾಟನೆ ಬಿಟ್ಟು ಸ್ವಾವಲಂಬಿ ಬದುಕು ಕಟ್ಟಿಕೊಂಡ ತೃತೀಯ ಲಿಂಗಿ: ನಾಲ್ಕು ಆಟೋಗಳ ಓನರ್​ ಇವರು

ಸಾರ್ವಜನಿಕರು ಖಚಿತ ಮಾಹಿತಿ ಕೊಟ್ಟರೆ ಮಂಗಳೂರಿನಲ್ಲಿ ಎಲ್ಲಿಯೂ ಸಹ ಡ್ರಗ್ಸ್ ಸಿಗದಂತೆ ಮಾಡಬಹುದು. ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು. ಯಾರೇ ಡ್ರಗ್ಸ್ ಅಡಿಕ್ಟ್ ಆಗಿದದರ ಅವರನ್ನು ಸಂತ್ರಸ್ತರು ಎಂದು ಪರಿಗಣಿಸುತ್ತೇವೆ. ಅವರಿಗೆ ಪೂರೈಕೆ ಮಾಡುತ್ತಿದ್ದವರನ್ನು ಬಂಧಿಸಿ ಜೈಲಿಗೆ ಕಳುಹಿಸುತ್ತೇವೆ ಎಂದು ಪೊಲೀಸ್ ಆಯುಕ್ತರು ಭರವಸೆ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ