AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾವಳಿಯಲ್ಲಿ ಫುಲ್ ಆ್ಯಕ್ಟಿವ್ ಆದ ಸ್ಪೆಷಲ್ ಆ್ಯಕ್ಷನ್ ಫೋರ್ಸ್: ಪ್ರಚೋದನಕಾರಿ ಸ್ಟೇಟಸ್ ಹಾಕಿದ್ದ ಯುವಕನ ಬಂಧನ

ಇತ್ತೀಚೆಗೆ ಕರಾವಳಿಯಲ್ಲಿ ಸ್ಥಾಪನೆಯಾದ ಸ್ಪೆಷಲ್ ಆ್ಯಕ್ಷನ್ ಫೋರ್ಸ್​ ಫುಲ್​ ಆ್ಯಕ್ಟೀವ್​ ಆಗಿದ್ದು,​​ ತೀವ್ರ ಕಾರ್ಯಾಚರಣೆ ನಡೆಸುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಉಡುಪಿ ಜಿಲ್ಲೆಯ ಓರ್ವ ಯುವಕನನ್ನು ಬಂಧಿಸಿದೆ. ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರಾವಳಿಯಲ್ಲಿ ಫುಲ್ ಆ್ಯಕ್ಟಿವ್ ಆದ ಸ್ಪೆಷಲ್ ಆ್ಯಕ್ಷನ್ ಫೋರ್ಸ್: ಪ್ರಚೋದನಕಾರಿ ಸ್ಟೇಟಸ್ ಹಾಕಿದ್ದ ಯುವಕನ ಬಂಧನ
ಆಶಿಕ್ ಎಸ್ ಕೋಟ್ಯಾನ್
ಅಶೋಕ್​ ಪೂಜಾರಿ, ಮಂಗಳೂರು
| Updated By: ಗಂಗಾಧರ​ ಬ. ಸಾಬೋಜಿ|

Updated on:Jul 04, 2025 | 12:50 PM

Share

ಮಂಗಳೂರು, ಜುಲೈ 04: ಕರಾವಳಿಯಲ್ಲಿ ಕೋಮು ಸಂಘರ್ಷವನ್ನು ತಡೆಗಟ್ಟಲು ಸ್ಪೆಷಲ್ ಆ್ಯಕ್ಷನ್ ಫೋರ್ಸ್ (Special Action Force)​ ಸ್ಥಾಪಿಸಲಾಗಿದೆ. ದೇಶದಲ್ಲೇ ಮೊದಲ ಬಾರಿಗೆ ಸ್ಥಾಪಿಸಲಾದ ಈ ಸಂಸ್ಥೆ ಈಗಾಗಲೇ ಫುಲ್ ಆಕ್ಟಿವ್​ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಪ್ರಚೋದನಾಕಾರಿ ಪೋಸ್ಟ್ (Provocative post) ಹಾಕುವವರನ್ನು ಬೆನ್ನಟ್ಟಿ ಬೆಂಡೆತ್ತುತ್ತಿದೆ. “ರಕ್ತಕ್ಕೆ ರಕ್ತವೇ ಬೇಕು” ಎಂದು ಸ್ಟೇಟಸ್ ಹಾಕಿದವನು ಬಂಧಿಸಿದೆ.

ಓರ್ವನ ಬಂಧನ

ಉಡುಪಿ ಜಿಲ್ಲೆಯ ಕಾರ್ಕಳ, ಇರ್ವತ್ತೂರು ಗ್ರಾಮದ ಆಶಿಕ್ ಎಸ್ ಕೋಟ್ಯಾನ್​​ ಎಂಬಾತನನ್ನು ಸ್ಪೆಷಲ್ ಆ್ಯಕ್ಷನ್ ಫೋರ್ಸ್​ ಬಂಧಿಸಿದೆ. ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ “ನಮಗೆ ಯಾವುದೇ ರೀತಿಯ ಉತ್ತರಗಳು ಬೇಡ ರಕ್ತಕ್ಕೆ ರಕ್ತವೇ ಉತ್ತರವಾಗಬೇಕು”. “ಜೀವಕ್ಕೆ ಜೀವನೇ ಬೇಕು” ಎಂದು ಮಾರಕಾಯುಧಗಳ ಚಿಹ್ನೆ ಬಳಸಿ ಪ್ರಚೋದನಕಾರಿ ಸ್ಟೇಟಸ್ ಹಾಕಿದ್ದ.

ಇದನ್ನೂ ಓದಿ: ಕೋಮು ಕ್ರಿಮಿಗಳ ಹುಟ್ಟಡಗಿಸಲು ಬಂದ ಸ್ಪೆಷಲ್ ಆ್ಯಕ್ಷನ್ ಫೋರ್ಸ್: ಏನಿದರ ಕೆಲಸ? ಇದರಲ್ಲಿ ಯಾರ್ಯಾರು ಇರ್ತಾರೆ?

ಇದನ್ನೂ ಓದಿ
Image
ಚೆಕ್​ಗಳು ಮಂಗಮಾಯ: ಕದ್ದ ಚೆಕ್ ಏನು ಮಾಡ್ತಾರೆ ಗೊತ್ತಾ? ಶಾಕ್ ​ಆಗ್ತೀರಾ
Image
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
Image
ಮಕ್ಕಳು ಡ್ರಗ್ ಅಡಿಕ್ಟ್ ಆಗಿದ್ದಾರೆಂದು ಪೋಷಕರಿಂದಲೇ ಪೊಲೀಸರಿಗೆ ದೂರು!
Image
ಕೋಮು ಕ್ರಿಮಿಗಳ ಹುಟ್ಟಡಗಿಸಲು ಸ್ಪೆಷಲ್ ಆ್ಯಕ್ಷನ್ ಫೋರ್ಸ್: ಏನಿದರ ಕೆಲಸ?

ಈ ಹಿನ್ನಲೆ ಆರೋಪಿ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, BNS ಕಲಂ.196, 353(2),351(3) ಯಡಿ ಎಫ್​ಐಆರ್ ದಾಖಲಾಗಿದೆ. ಪೊಲೀಸರು ಆರೋಪಿಯನ್ನ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಕೋಮುದಳ್ಳುರಿಗೆ ಸಿಲುಕಿದ್ದ ಮಂಗಳೂರು ರಕ್ಷಣೆಗೆ ಇತ್ತೀಚೆಗೆ ಸ್ಪೆಷಲ್ ಆ್ಯಕ್ಷನ್ ಫೋರ್ಸ್​ನ ಆಗಮನವಾಗಿತ್ತು. ಆ ಮೂಲಕ ರಾಜ್ಯ ಸರ್ಕಾರ ಕೊನೆಗೂ ಕೊಟ್ಟ ಮಾತಿನಂತೆ ಕೋಮು ಸಂಘರ್ಷದ ನೆಲದಲ್ಲಿ ಹೊಸ ತಂಡವನ್ನು ಹುಟ್ಟುಹಾಕಿತ್ತು. ಸ್ಪೆಷಲ್ ಆ್ಯಕ್ಷನ್ ಫೋರ್ಸ್ ಪೊಲೀಸ್ ಪಡೆ ಮಂಗಳೂರಿನಿಂದ ಅಸ್ತಿತ್ವಕ್ಕೆ ಬಂದಿದ್ದು, ಇದೀಗ ಕಿಡಿಗೇಡಿಗಳ ಹುಟ್ಟಡಗಿಸುತ್ತಿದೆ.

ಕೋಮು ಸಂಘರ್ಷ ನಿಗ್ರಹಕ್ಕೆ ಮಾಡಿರುವ ಸ್ಪೆಷಲ್ ಆ್ಯಕ್ಷನ್ ಫೋರ್ಸ್‌ಗೆ ಇತ್ತೀಚೆಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಮಂಗಳೂರಿನಲ್ಲಿ ಚಾಲನೆ ನೀಡಿದ್ದರು. ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಈ ಸ್ಪೆಷಲ್ ಆ್ಯಕ್ಷನ್ ಫೋರ್ಸ್ ಕಾರ್ಯಾಚರಣೆ ನಡೆಸಿದೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಅಸ್ತಿತ್ವಕ್ಕೆ ಬಂತು ಸ್ಪೆಷಲ್ ಆ್ಯಕ್ಷನ್ ಫೋರ್ಸ್: ಗೃಹ ಸಚಿವ ಪರಮೇಶ್ವರ್ ಚಾಲನೆ

ಮಂಗಳೂರು ನಗರ ಕೇಂದ್ರದಲ್ಲಿಯೇ ಎಸ್ಎಎಫ್ ಕಾರ್ಯಪಡೆಯ ಕೇಂದ್ರ ಕಛೇರಿ ಇದೆ. ನಕ್ಸಲ್ ನಿಗ್ರಹ ಪಡೆಯಲ್ಲಿದ್ದ 656 ಸಿಬ್ಬಂದಿಗಳ ಪೈಕಿ 248 ಮಂದಿ ಈ ಹೊಸ ಪಡೆಯಲ್ಲಿದ್ದಾರೆ. ಡಿಐಜಿ, ಡಿವೈಎಸ್ಪಿ, ಸಹಾಯಕ ಕಮಾಂಡೆಂಟ್, 4 ಇನ್ ಸ್ಪೆಕ್ಟರ್, 16 ಪಿಎಸ್ಐ ಸೇರಿದಂತೆ 248 ಸಿಬ್ಬಂದಿ ತಂಡದಲ್ಲಿ ಇದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:48 pm, Fri, 4 July 25