ಅನಾಫಿಲ್ಯಾಕ್ಸಿಸ್ ರಿಯಾಕ್ಷನ್​ನಿಂದ ಉಪನ್ಯಾಸಕಿ ಸಾವು; ಸಾವಿನಲ್ಲೂ ಸಾರ್ಥಕತೆ!

ಅನಾಫಿಲ್ಯಾಕ್ಸಿಸ್ ರಿಯಾಕ್ಷನ್ ನಿಂದ ಮಂಗಳೂರಿನ ಉಪನ್ಯಾಸಕಿ ಸಾವನ್ನಪ್ಪಿದ್ದು, ಸಾವಿನ್ನೂ ಸಹ ಉಪನ್ಯಾಸಕಿ ಸಾರ್ಥಕತೆ ಮೆರೆದಿದ್ದಾರೆ. ಮೃತ ಉಪನ್ಯಾಸಕಿಯ ಅಂಗಾಂಗಗಳನ್ನು ದಾನ ಮಾಡಲಾಗಿದೆ. ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಅಂಗಾಂಗ ಕಸಿ ಮಾಡಿ ಬಳಿಕ ವಿವಿಧ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಅನಾಫಿಲ್ಯಾಕ್ಸಿಸ್ ರಿಯಾಕ್ಷನ್​ನಿಂದ ಉಪನ್ಯಾಸಕಿ ಸಾವು; ಸಾವಿನಲ್ಲೂ ಸಾರ್ಥಕತೆ!
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Nov 14, 2024 | 9:36 PM

ಮಂಗಳೂರು, (ನವೆಂಬರ್ 14): ಅಲರ್ಜಿಗೆ ಸಂಬಂಧಿಸಿದ ಅನಾಫಿಲ್ಯಾಕ್ಸಿಸ್ ರಿಯಾಕ್ಷನ್ ನಿಂದ ಮಂಗಳೂರಿನ 23 ವರ್ಷದ ಉಪನ್ಯಾಸಕಿ ಮೃತಪಟ್ಟಿದ್ದಾರೆ. ಸೇಂಟ್ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ ಗ್ಲೋರಿಯಾ ರೋಡ್ರಿಗಸ್ ಅವರಿಗೆ ಕೆಲವು ದಿನಗಳ ಹಿಂದೆ ಊಟ ಮಾಡಿದ ಬಳಿಕ ಅವರ ದೇಹದಲ್ಲಿ ಅಲರ್ಜಿ ಕಾಣಿಸಿಕೊಂಡಿತ್ತು. ಬಳಿಕ ಇದು ಉಲ್ಬಣಗೊಂಡ ಪರಿಣಾಮ ಮೆದುಳಿಗೆ ಹಾನಿಯಾಗಿದ್ದು, ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಯುವತಿಯ ರಕ್ಷಣೆಗೆ ಶಸ್ತ್ರಚಿಕಿತ್ಸೆಗಳನ್ನು ಮಾಡಿದರೂ ಕೂಡ ಫಲಕಾರಿಯಾಗದೇ ಅವರು ಇಂದು(ನವೆಂಬರ್ 14) ಕೊನೆಯುಸಿರೆಳೆದಿದ್ದಾರೆ. ಇನ್ನು  ಗ್ಲೋರಿಯಾ ರೋಡ್ರಿಗಸ್ ಅವರ ಅಂಗಾಂಗಗಳನ್ನು ಐದು ನಿರ್ಗತಿಕ ರೋಗಿಗಳಿಗೆ ದಾನ ಮಾಡಲಾಯಿತು.

ಬಜ್ಪೆ ಪಡು ಪೆರಾರ ನಿವಾಸಿ ಗ್ರೇಶನ್ ಅಲೆಕ್ಸ್ ರೋಡ್ರಿಗಸ್ ಮತ್ತು ಗ್ರೆಟ್ಟಾ ಫ್ಲೇವಿಯಾ ದಂಪತಿಯ ಪುತ್ರಿಯಾಗಿರುವ ಗ್ಲೋರಿಯಾ ಒಂದು ವರ್ಷದ ಹಿಂದಷ್ಟೇ ಅಲೋಶಿಯಸ್ ಕಾಲೇಜಿನಲ್ಲಿಯೇ ಸ್ನಾತಕೋತ್ತರ ಪದವಿ ಪೂರೈಸಿ ಕೆಲಸಕ್ಕೆ ಸೇರಿದ್ದರು.‌ ಕೆಲವು ದಿನಗಳ ಹಿಂದೆ ಊಟ ಮಾಡಿದ ಬಳಿಕ ಅವರ ದೇಹದಲ್ಲಿ ಅಲರ್ಜಿ ಕಾಣಿಸಿಕೊಂಡಿತ್ತು. ಬಳಿಕ ಇದು ಉಲ್ಬಣಗೊಂಡ ಪರಿಣಾಮ ಮೆದುಳಿಗೆ ಹಾನಿಯಾಗಿದ್ದು, ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಯುವತಿಯ ರಕ್ಷಣೆಗೆ ಶಸ್ತ್ರಚಿಕಿತ್ಸೆಗಳನ್ನು ಮಾಡಿದರೂ ಕೂಡ ಬದುಕುಳಿಯಲಿಲ್ಲ.

ಐವರಿಗೆ ಅಂಗಾಂಗ ದಾನ

ಮೃತ ಉಪನ್ಯಾಸಕಿ ಗ್ಲೋರಿಯಾ ರೋಡ್ರಿಗಸ್ ಅವರ ಅಂಗಾಂಗಗಳನ್ನು ದಾನಮಾಡಲಾಗಿದೆ. ಗ್ಲೋರಿಯಾ ಅವರ ಮೆದುಳು ನಿಷ್ಕ್ರೀಯಗೊಂಡ ಕಾರಣ ಅವರ ಮನೆಯವರು ಅಂಗಾಂಗ ದಾನಕ್ಕೆ ಒಪ್ಪಿಗೆ ಸೂಚಿಸಿದ್ದು,ಅದರಂತೆ ಇಂದು(ಬುಧವಾರ) ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಕುಟುಂಬ ಮತ್ತು ಸ್ನೇಹಿತರ ಸಮ್ಮುಖದಲ್ಲೇ ಅಂಗಾಂಗ ಕಸಿ ಮಾಡಲಾಗಿದ್ದು, ರೋಡ್ರಿಗಸ್ ಅವರ ಯಕೃತ್ತನ್ನು ಎಜೆ ಆಸ್ಪತ್ರೆಗೆ, ಶ್ವಾಸಕೋಶವನ್ನು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಸಾಗಿಸಲಾಯಿತು.

ಇನ್ನು ಹೃದಯವನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ, ಮೂತ್ರಪಿಂಡವನ್ನು ಕೆಎಂಸಿ ಮಣಿಪಾಲಕ್ಕೆ ಮತ್ತು ಚರ್ಮ ಮತ್ತು ಕಾರ್ನಿಯಾವನ್ನು ಫಾದರ್ ಮುಲ್ಲರ್ ಆಸ್ಪತ್ರೆಗೆ ನೀಡಲಾಗಿದೆ. ಇನ್ನು ಉಪನ್ಯಾಸಕಿಯ ಅಕಾಲಿಕ ನಿಧನಕ್ಕೆ ಕಾಲೇಜು ಆಡಳಿತ ಮಂಡಳಿ, ಸಹೋದ್ಯೋಗಿಗಳು ಮತ್ತು ವಿದ್ಯಾರ್ಥಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ. ಉಪನ್ಯಾಸಕಿ ಗ್ಲೋರಿಯಾ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:32 pm, Thu, 14 November 24

ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್
ಜಮೀರ್ ಅಹ್ಮದ್ ಮಾಡಿದ ಕಾಮೆಂಟ್​​ಗೆ ನಾವ್ಯಾರೂ ಪ್ರತಿಕ್ರಿಯಿಸಿಲ್ಲ: ನಿಖಿಲ್
ಜಮೀರ್ ಅಹ್ಮದ್ ಮಾಡಿದ ಕಾಮೆಂಟ್​​ಗೆ ನಾವ್ಯಾರೂ ಪ್ರತಿಕ್ರಿಯಿಸಿಲ್ಲ: ನಿಖಿಲ್
ವಿಡಿಯೋ: ಬಿಗ್​ಬಾಸ್​ ಮನೆಯಲ್ಲಿ ಬಿಚ್ಚಿಕೊಂಡ ಬಾಲ್ಯದ ನೆನಪುಗಳು
ವಿಡಿಯೋ: ಬಿಗ್​ಬಾಸ್​ ಮನೆಯಲ್ಲಿ ಬಿಚ್ಚಿಕೊಂಡ ಬಾಲ್ಯದ ನೆನಪುಗಳು