AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳ ಬಂಧನ

ಮಂಗಳೂರಿನ ಬಜ್ಪೆಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಅಜರುದ್ದೀನ್, ಅಬ್ದುಲ್ ಖಾದರ್ ಮತ್ತು ನೌಷದ್ ಅವರನ್ನು ಬಂಧಿಸಲಾಗಿದ್ದು, ಅವರ ವಿರುದ್ಧ ಹಲವು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು.ಪೊಲೀಸರ ತನಿಖೆಯಲ್ಲಿ ಆರೋಪಿಗಳು ಕೊಲೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಒಟ್ಟು ಎಂಟು ಜನರನ್ನು ಈಗಾಗಲೇ ಬಂಧಿಸಲಾಗಿದೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳ ಬಂಧನ
ಕೊಲೆ ಆರೋಪಿಗಳು, ಸುಹಾಸ್​ ಶೆಟ್ಟಿ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:May 20, 2025 | 4:58 PM

Share

ಮಂಗಳೂರು, ಮೇ 14: ಮಂಗಳೂರು (Mangaluru) ನಗರದ ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಕಳವಾರು ನಿವಾಸಿ ಅಜರುದ್ದೀನ್ ಅಲಿಯಾಸ್​ ಅಜರ್ ಅಲಿಯಾಸ್​ ಅಜ್ಜು(29), ಬಜಪೆ ನಿವಾಸಿ ಅಬ್ದುಲ್ ಖಾದರ್ ಅಲಿಯಾಸ್​ ನೌಫಲ್(24), ವಾಮಂಜೂರು ನಿವಾಸಿ ನೌಷದ್ ಅಲಿಯಾಸ್​ ವಾಮಂಜೂರು ನೌಷದ್ ಅಲಿಯಾಸ್​ ಚೊಟ್ಟೆ ನೌಷದ್(39) ಬಂಧಿತರು. ಮೂವರು ಆರೋಪಿಗಳು ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದರು.

ಅಜರುದ್ದೀನ್ ವಿರುದ್ಧ ಈ ಹಿಂದೆ ಪಣಂಬೂರು, ಸುರತ್ಕಲ್, ಮುಲ್ಕಿ ಪೊಲೀಸ್ ರಾಣೆಗಳಲ್ಲಿ ಮೂರು ಕಳವು ಪ್ರಕರಣ ದಾಖಲಾಗಿದ್ದವು. ಈತ ಕೊಲೆಯಾದ ಸುಹಾಸ್ ಶೆಟ್ಟಿಯ ಚಲನವಲನದ ಬಗ್ಗೆ ಮಾಹಿತಿ ನೀಡಿ, ಕೊಲೆಗೆ ಸಹಕರಿಸಿದ್ದಾನೆ. ಆರೋಪಿಗಳು ಕೊಲೆ ಮಾಡಿದ ನಂತರ ಕಾರಿನಲ್ಲಿ ಪರಾರಿಯಾಗಲು ಆರೋಪಿ ಅಬ್ದುಲ್ ಖಾದರ್ ಸಹಕರಿಸಿದ್ದನು. ಇನ್ನೋರ್ವ ಆರೋಪಿ ನೌಷದ್ ಉಳಿದ ಆರೋಪಿಗಳ ಜೊತೆ ಸೇರಿ ಕೊಲೆಗೆ ಸಂಚು ರೂಪಿಸಿದ್ದನು ಎಂದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ.

ಆರೋಪಿ ನೌಷದ್ ವಿರುದ್ಧ ಈ ಹಿಂದೆ ಸುರತ್ಕಲ್, ಬಜ್ಪೆ, ಮೂಡಬಿದ್ರಿ, ಮಂಗಳೂರು ಉತ್ತರ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ದರೋಡೆಗೆ ಸಂಚು ಸೇರಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿದ್ದವು.

ಇದನ್ನೂ ಓದಿ
Image
ಸುಹಾಸ್ ಶೆಟ್ಟಿ ಕೊಲೆಗೆ ವಿದೇಶದಿಂದ ಹಣ ಸಂದಾಯವಾಗಿರುವ ಶಂಕೆ
Image
ಸುಹಾಸ್ ಶೆಟ್ಟಿ ಕೊಲೆ: ಇಲ್ಲಿದೆ ಆರೋಪಿಗಳ ಪ್ಲ್ಯಾನ್​​ನ ಇನ್​ಸೈಡ್ ಡಿಟೇಲ್ಸ್
Image
ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಮಂಗಳೂರಿನ 3 ಕಡೆ ಚಾಕು ಇರಿತ: 7 ಜನರ ಬಂಧನ
Image
ಸುಹಾಸ್ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿರುವ ಇಬ್ಬರು ಹಿಂದೂಗಳು ಯಾರು?

ಆರೋಪಿಗಳ ಪೈಕಿ ಅಜರುದ್ದೀನ್​ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅಬ್ದುಲ್ ಖಾದರ್ ಹಾಗೂ ನೌಷದ್ ಗೆ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ಈಗಾಗಲೇ ಎಂಟು ಜನರ ಬಂಧಿಸಿದ್ದಾರೆ.

ಸುಹಾಸ್ ಶೆಟ್ಟಿ ಕೊಲೆ

ಕಳೆದ ಗುರುವಾರ (ಮೇ.01) ದಂದು ರಾತ್ರಿ ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್​ ಶೆಟ್ಟಿಯವರನ್ನು ಬರ್ಬರವಾಗಿ ತಲ್ವಾರಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಮಂಗಳೂರು ಪೊಲೀಸರು ಈಗಾಗಲೇ ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

3 ತಿಂಗಳ ಹಿಂದೆಯೇ ಸುಹಾಸ್ ಕೊಲೆಗೆ ಸಿದ್ಧವಾಗಿತ್ತು ಸ್ಕೆಚ್

ಸುಹಾಸ್ ಶೆಟ್ಟಿ ಕೊಲೆಗೆ ಮೂರು ತಿಂಗಳ ಹಿಂದೆಯೇ ಸಂಚು ಹೂಡಲಾಗಿತ್ತು. ಜನವರಿಯಲ್ಲೇ ಸಫ್ವಾನ್ ತಂಡಕ್ಕೆ ಫಾಜಿಲ್ (ಪ್ರವೀಣ್ ನೆಟ್ಟಾರು ಕೊಲೆಗೆ ಪ್ರತೀಕಾರವಾಗಿ ಹತ್ಯೆಗೊಳಗಾಗಿದ್ದ ಯುವಕ) ತಮ್ಮ ಆದಿಲ್ 3 ಲಕ್ಷ ರೂಪಾಯಿ ಹಣ ಕೊಟ್ಟಿದ್ದನು. ಕೃತ್ಯಕ್ಕಾಗಿ ಒಂದು ಪಿಕ್ ಅಪ್ ವಾಹನ, ಸ್ವಿಫ್ಟ್ ಕಾರ್ ಬಳಕೆ ಮಾಡಿದ್ದನು. ಅಕಸ್ಮಾತ್ ಸುಹಾಸ್ ಶೆಟ್ಟಿ ತಪ್ಪಿಸಿಕೊಂಡರೆ ಪ್ಲಾನ್ ಬಿಯನ್ನೂ ರೆಡಿ ಮಾಡಿಕೊಳ್ಳಲಾಗಿತ್ತು ಎಂಬುದು ಪೊಲೀಸ್​ ತನಿಖೆ ವೇಳೆ ತಿಳಿದುಬಂದಿದೆ.

ಇದನ್ನೂ ಓದಿ: ಸುಹಾಸ್​ ಕೊಲೆ: ಹಿಂದೂ ಕಾರ್ಯಕರ್ತರ ವಿರುದ್ಧ ಹೆಡ್​ ಕಾನ್ಸ್ಟೇಬಲ್ ರಶೀದ್ ದೂರು

PFI ಕೈವಾಡ ಶಂಕೆ

ಸುಹಾಸ್ ಶೆಟ್ಟಿ ಹತ್ಯೆ ಹಿಂದೆ ಪಿಎಫ್​ಐ ನೇರ ಕೈವಾಡವಿದೆ ಎಂದ ವಿ‌ಎಚ್​ಪಿ ಮುಖಂಡ ಶರಣ್ ಪಂಪ್ವೆಲ್ ಕೂಡ ಆರೋಪಿಸಿದ್ದರು. ಮಂಗಳೂರಿನಲ್ಲಿ ‘ಟಿವಿ9’ ಜತೆ ಮಾತನಾಡಿದ ಅವರು, ಈ ಹಿಂದೆ ನಡೆದ ಹಿಂದೂ ನಾಯಕರ ಹತ್ಯೆಗೂ ಇದಕ್ಕೂ ಸಾಮ್ಯತೆ ಇದೆ. ತರಬೇತಿ ಪಡೆದುಕೊಂಡು ಈ ಹತ್ಯೆ ಮಾಡಿದ್ದಾರೆ. ಆರೋಪಿ ಸಫ್ವಾನ್ ಪಿಎಎಫ್​​​ಐ ಕಾರ್ಯಕರ್ತನ ಮನೆಯಲ್ಲಿದ್ದ ಎಂದಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:46 pm, Wed, 14 May 25

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!