ಮಂಗಳೂರಿಗರ ಬಹುವರ್ಷಗಳ ಬೇಡಿಕೆ ಶೀಘ್ರ ಈಡೇರಿಕೆ: ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್

ಮಂಗಳೂರು-ತಣ್ಣೀರುಬಾವಿ ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಆಗಸ್ಟ್ ಅಥವಾ ಸೆಪ್ಟೆಂಬರ್‌ನಲ್ಲಿ ಲೋಕಾರ್ಪಣೆ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಸೇತುವೆಯಿಂದಾಗಿ ಸುತ್ತಿ ಬಳಸಿ ಓಡಾಟಕ್ಕೆ ಬ್ರೇಕ್ ಬೀಳಲಿದೆ. ಹಾಗಾದರೆ ಈ ಸೇತುವೆಯ ವಿಶೇಷತೆ ಏನು, ವೆಚ್ಚ ಎಷ್ಟು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಮಂಗಳೂರಿಗರ ಬಹುವರ್ಷಗಳ ಬೇಡಿಕೆ ಶೀಘ್ರ ಈಡೇರಿಕೆ: ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್
ಮಂಗಳೂರು-ತಣ್ಣೀರುಬಾವಿ ಬ್ರಿಡ್ಜ್
Image Credit source: tv9 kannada
Edited By:

Updated on: May 08, 2026 | 7:25 PM

ಮಂಗಳೂರು, ಮೇ 08: ಮಂಗಳೂರು-ತಣ್ಣೀರುಬಾವಿ ಬ್ರಿಡ್ಜ್​​ (Mangaluru Tannirbhavi Bridge) ಮಂಗಳೂರಿನ ಬಹುವರ್ಷದ ಬೇಡಿಕೆ. ಸದ್ಯ ಬ್ರಿಡ್ಜ್ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದ್ದು, ಆಗಸ್ಟ್ ಅಥವಾ ಸೆಪ್ಟೆಂಬರ್​​ನಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ತಿಳಿಸಿದ್ದಾರೆ. ಆ ಮೂಲಕ ತಣ್ಣೀರುಬಾವಿ ಬೀಚ್‌ಗೆ ತೆರಳಲು ದಶಕಗಳಿಂದ ಇದ್ದ ಸಂಚಾರ ಸಂಕಷ್ಟಕ್ಕೆ ಶೀಘ್ರದಲ್ಲೇ ಪರಿಹಾರ ಸಿಗಲಿದೆ.

  • 64 ಕೋಟಿ ರೂ ವೆಚ್ಚದಲ್ಲಿ 285 ಮೀಟರ್ ಉದ್ದದ ಸೇತುವೆ ನಿರ್ಮಾಣ
  • 30-35 ನಿಮಿಷ ಬೇಕಾಗುವ ಪ್ರಯಾಣದ ಸಮಯ ಈ ಸೇತುವೆ ಮೂಲಕ ಕೇವಲ 10 ನಿಮಿಷಕ್ಕೆ ಕಡಿತ
  • ಆಗಸ್ಟ್ ಅಥವಾ ಸೆಪ್ಟೆಂಬರ್​​ನಲ್ಲಿ ಲೋಕಾರ್ಪಣೆ ಸಾಧ್ಯತೆ

ತಣ್ಣೀರುಬಾವಿ ಬೀಚ್‌ ಮಂಗಳೂರು ಸಿಟಿಗೆ ಹೊಂದಿಕೊಂಡಿರುವ ಬೀಚ್. ಮಂಗಳೂರು ಸಿಟಿಯ ಒಂದು ತುದಿಯಿಂದ ಸುಮಾರು ಒಂದೂವರೆ ಕಿ.ಮೀ ದೂರದಲ್ಲಿರುವ ಈ ಬೀಚ್​​ಗೆ ವಾಹನದಲ್ಲಿ ಹೋಗಬೇಕು ಅಂದರೆ 15 ರಿಂದ 20 ಕಿ.ಮೀ ಸುತ್ತಿಕೊಂಡು ಹೋಗಬೇಕಿತ್ತು. ಆದರೆ ಫೆರಿಯಲ್ಲಿ ಹೋಗೋದಾದರೆ ಕೆಲವೇ ಮೀಟರ್ ಕ್ರಮಿಸಿದರೆ ಸಾಕಿತ್ತು.

ಇದನ್ನೂ ಓದಿ: ಸಮುದ್ರ ಇದ್ರೂ ಮಂಗಳೂರಿನಲ್ಲಿ ನೀರಿಗೆ ಬರ: ವಾಹನಗಳನ್ನ ತೊಳೆಯದಂತೆ ಸೂಚನೆ

ಇನ್ನು ತಣ್ಣೀರುಬಾವಿ ಸುತ್ತಾಮುತ್ತಾ 4 ಸಾವಿರಕ್ಕೂ ಹೆಚ್ಚು ಕುಟುಂಬಗಳು ವಾಸವಿದ್ದು, ಅವರು ಮಂಗಳೂರಿಗೆ ಬರಬೇಕು ಅಂದರೆ ಫೆರಿಯಲ್ಲಿ ಬರಬೇಕಿತ್ತು. ರಸ್ತೆ ಮೂಲಕ ಬರಬೇಕು ಅಂದರೆ ಮತ್ತೆದೇ 15 ಕಿ.ಮೀ ಸುತ್ತಾಟ. ಆದ್ದರಿಂದ ಮೆಡಿಕಲ್ ಎಮರ್ಜೆನ್ಸಿ ಸೇರಿದಂತೆ ವಿವಿಧ ರೀತಿಯಲ್ಲಿ ಜನರಿಗೆ ತೊಂದರೆ ಆಗುತ್ತಿತ್ತು. ಆದರೆ ಇದೀಗ ಫಲ್ಗುಣಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮಾಡುತ್ತಿರುವುದರಿಂದ ಇದಕ್ಕೆ ಮುಕ್ತಿ ಸಿಗಲಿದೆ.

ವೆಚ್ಚ ಮತ್ತು ವಿನ್ಯಾಸ

64 ಕೋಟಿ ರೂ ವೆಚ್ಚದಲ್ಲಿ ಒಟ್ಟು 285 ಮೀಟರ್ ಸೇತುವೆ ಇದಾಗಿದ್ದು, 100 ಮೀಟರ್ ಬೋ-ಸ್ಟ್ರಿಂಗ್ ಸೇತುವೆ ನಿರ್ಮಾಣ ಮಾಡುಲಾಗುತ್ತಿದೆ. ಆ ಮೂಲಕ 30 ರಿಂದ 35 ನಿಮಿಷ ಸಾಗುವ ದಾರಿಯನ್ನು 8 ರಿಂದ 10 ನಿಮಿಷಕ್ಕೆ ಇಳಿಸುವಲ್ಲಿ ಈ ಸೇತುವೆ ಉಪಯೋಗಕಾರಿಯಾಗಿದೆ. ಈ ಸೇತುವೆ ಎಲ್ಲಾ ಮಾದರಿಯ ವಾಹನಗಳು ಸಂಚಾರ ಮಾಡುವ ಸಾಮರ್ಥ್ಯ ಹೊಂದಿದೆ. ಈ ಬ್ರಿಡ್ಜ್ ಆಗಸ್ಟ್ ಅಥವಾ ಸೆಪ್ಟೆಂಬರ್​ನಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ದೇಶದಲ್ಲೇ ಮೊದಲ ಬಾರಿಗೆ ‘ಧಾರ್ಮಿಕ ತ್ಯಾಜ್ಯ ವಿಲೇವಾರಿ’ ಅಭಿಯಾನಕ್ಕೆ ಸಾಕ್ಷಿಯಾದ ಮಂಗಳೂರು

ಇನ್ನೇನು ಮಳೆಗಾಲ ಆರಂಭವಾಗುತ್ತಿದೆ. ಹೀಗಾಗಿ ಕಾಮಗಾರಿ ಅದೆಷ್ಟು ವೇಗವಾಗಿ ಸಾಗುತ್ತದೆ ಎನ್ನುವುದು ಮುಂದಿರುವ ಪ್ರಶ್ನೆ. ಇನ್ನು ಸಚಿವರು ಲೋಕಾರ್ಪಣೆ ತಿಂಗಳು ಫಿಕ್ಸ್ ಮಾಡಿ ಹೋಗಿದ್ದಾರೆ. ಅಧಿಕಾರಿಗಳು ಮತ್ತು ಗುತ್ತಿಗೆದಾರರು ಅದಕ್ಕೆ ಬದ್ಧರಾಗಿರುತ್ತಾರಾ ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:23 pm, Fri, 8 May 26

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us