ಬೆಳ್ತಂಗಡಿಯ ಐತಿಹಾಸಿಕ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ತಡರಾತ್ರಿ ನುಗ್ಗಿದ ವ್ಯಕ್ತಿಯೋರ್ವ ದೇವರ ಮೂರ್ತಿ ಭಗ್ನಗೊಳಿಸಿ ವಿಕೃತಿ ಮೆರೆದಿರುವಂತಹ ಘಟನೆ ನಡೆದಿದೆ. ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ವ್ಯಕ್ತಿಯ ವಿಕೃತಿಗೆ ಆಕ್ರೋಶ ವ್ಯಕ್ತವಾಗುತ್ತಿದೆ.

ಬೆಳ್ತಂಗಡಿಯ ಐತಿಹಾಸಿಕ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ
ದೇವರ ಮೂರ್ತಿ ಭಗ್ನ
Image Credit source: tv9 kannada
Edited By:

Updated on: Apr 23, 2026 | 6:18 PM

ಮಂಗಳೂರು, ಏಪ್ರಿಲ್​​ 23: ಜಿಲ್ಲೆಯ ಬೆಳ್ತಂಗಡಿ (Belthangady) ತಾಲೂಕಿನ ಐತಿಹಾಸಿಕ ಪ್ರಸಿದ್ಧ ಬಳಂಜ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ (Balanja Temple) ತಡರಾತ್ರಿ ಅಮಾನವೀಯ ಘಟನೆಯೊಂದು ನಡೆದಿದೆ. ವ್ಯಕ್ತಿಯೋರ್ವ ದೇಗುಲಕ್ಕೆ ನುಗ್ಗಿ ದಾಂಧಲೆ ಮಾಡಿದ್ದಲ್ಲದೇ ದೇವರ ಮೂರ್ತಿ ಭಗ್ನಗೊಳಿಸಿ ವಿಕೃತಿ ಮೆರೆದಿರುವಂತಹ ಘಟನೆ ನಡೆದಿದೆ. ಸ್ಥಳೀಯ ನಿವಾಸಿ ಅಜೇಯ್ ಎಂಬಾತನಿಂದ ಕೃತ್ಯವೆಸಗಲಾಗಿದೆ. ಮಾನಸಿಕ ಅಸ್ವಸ್ಥತೆಯಿಂದ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು? 

ಮೊದಲು ದೇಗುಲದ ಕೆರೆಗೆ ಹಾರಿದ ಅಜೇಯ್, ಬಳಿಕ ದೇವಸ್ಥಾನದ ಹೆಂಚುಗಳನ್ನು ತೆಗೆದು ಒಳನುಗ್ಗಿದ್ದಾನೆ. ದೇಗುಲದ ಒಳಗಿದ್ದ ಪೂಜಾ ಪರಿಕರಗಳು ಹಾಗೂ ದೈವದ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಲ್ಲದೆ, ದೇವರ ಮೂರ್ತಿಯನ್ನು ಭಗ್ನಗೊಳಿಸಿ ವಿಕೃತಿ ಮೆರೆದಿದ್ದಾನೆ.

ಇದನ್ನೂ ಓದಿ: ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ! ಮೈ ಜುಮ್ ಎನ್ನಿಸುವ ದೃಶ್ಯ

ಇನ್ನು ಅಜೇಯ್ ಇಂಜಿನಿಯರಿಂಗ್ ಪದವೀಧರನಾಗಿದ್ದು, ಈ ಕೃತ್ಯದ ಹಿಂದೆ ಮಾನಸಿಕ ಅಸ್ವಸ್ಥತೆಯ ಶಂಕೆ ವ್ಯಕ್ತವಾಗಿದೆ. ಸದ್ಯ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.

ಕಾಲೇಜು ವಿದ್ಯಾರ್ಥಿಗೆ ಗುಂಪೊಂದರಿಂದ ಮಾರಣಾಂತಿಕ ಹಲ್ಲೆ

ಕಾಲೇಜು ವಿದ್ಯಾರ್ಥಿಗೆ ಐವರ ತಂಡದಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಸ್ ನಿಲ್ದಾಣದ ಬಳಿ ನಡೆದಿದೆ. ಆದಿಲ್ ಹುಸೈನ್(21) ಹಲ್ಲೆಗೊಳಗಾದ ಬಿಕಾಂ ವಿದ್ಯಾರ್ಥಿ. ತಲೆ ಹಾಗೂ ಮುಖದ ಭಾಗಕ್ಕೆ ತಂಡದಿಂದ ದಾಳಿ ಮಾಡಲಾಗಿದ್ದು, ಮೊಹಿಯುದ್ದೀನ್, ಮೋಹದ್ ಸೇರಿ ಐವರ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ.

ನಡೆದಿದ್ದೇನು?

ಪುತ್ತೂರು ಖಾಸಗಿ ಕಾಲೇಜಿನ ಅಂತಿಮ ಬಿಕಾಂ ವಿದ್ಯಾರ್ಥಿ ಆದಿಲ್ ಹುಸೈನ್, ಬಸ್ ನಿಲ್ದಾಣದ ಬಳಿಯ ಅಂಗಡಿಯೊಂದರಲ್ಲಿ ಚಹಾ ಕುಡುಯುತ್ತ ನಿಂತಿದ್ದ ವೇಳೆ ಕಲ್ಲಿನಿಂದ ದಾಳಿ ಮಾಡಲಾಗಿದೆ. ಇತ್ತೀಚೆಗೆ ಕಾಲೇಜಿನಲ್ಲಿ ಮೊಹಿಯುದ್ದೀನ್ ತಂಡದಿಂದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಲಾಗಿತ್ತು. ಹಳೇ ದ್ವೇಷ ಹಿನ್ನೆಲೆಯಲ್ಲಿ ಹಲ್ಲೆ ಮಾಡಿದ್ದಾರೆಂದು ಪುತ್ತೂರು ನಗರ ಪೊಲೀಸ್ ಠಾಣೆಗೆ ವಿದ್ಯಾರ್ಥಿ ಆದಿಲ್ ದೂರು ನೀಡಿದ್ದಾನೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us