ಮಂಗಳೂರು ಅಬುಧಾಬಿ ಮಧ್ಯೆ ಪ್ರತಿ ದಿನ ಸಂಚರಿಸಲಿದೆ ಏರ್ ಇಂಡಿಯಾ ಎಕ್ಸ್​ಪ್ರೆಸ್

Air India Express; ಮಂಗಳೂರಿನಿಂದ ಯುನೈಟೆಡ್ ಅರಬ್ ಎಮಿರೇಟ್ಸ್‌ನ ರಾಜಧಾನಿ ಅಬುಧಾಬಿಗೆ ತೆರಳುವವರಿಗೆ ಮತ್ತು ಮಂಗಳೂರು - ಬೆಂಗಳೂರು ಪ್ರಯಾಣಿಕರಿಗೆ ಏರ್ ಇಂಡಿಯಾ ಎಕ್ಸ್​​ಪ್ರೆಸ್ ಶುಭ ಸುದ್ದಿ ನೀಡಿದೆ. ಜುಲೈ 22ರಿಂದ ಮಂಗಳೂರು ಅಬುಧಾಬಿ ಮಧ್ಯೆ ಪ್ರತಿ ದಿನ ಏರ್ ಇಂಡಿಯಾ ಎಕ್ಸ್​​ಪ್ರೆಸ್ ವಿಮಾನ ಸಂಚಾರ ನಡೆಸಲಿದೆ. ಹಾಗೆಯೇ ಬೆಂಗಳೂರು ಮಂಗಳೂರು ವಿಮಾನಗಳ ಸಂಖ್ಯೆ ಆಗಸ್ಟ್​ನಿಂದ ಹೆಚ್ಚಾಗಲಿದೆ. ವಿವರ ಇಲ್ಲಿದೆ.

ಮಂಗಳೂರು ಅಬುಧಾಬಿ ಮಧ್ಯೆ ಪ್ರತಿ ದಿನ ಸಂಚರಿಸಲಿದೆ ಏರ್ ಇಂಡಿಯಾ ಎಕ್ಸ್​ಪ್ರೆಸ್
ಏರ್ ಇಂಡಿಯಾ ಎಕ್ಸ್​ಪ್ರೆಸ್
Follow us
Ganapathi Sharma
|

Updated on: Jun 12, 2024 | 7:34 AM

ಮಂಗಳೂರು, ಜೂನ್ 12: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ (Mangaluru International Airpor) ಯುನೈಟೆಡ್ ಅರಬ್ ಎಮಿರೇಟ್ಸ್‌ನ (UAE) ರಾಜಧಾನಿ ಅಬುಧಾಬಿಗೆ (Abu Dhabi) ಏರ್ ಇಂಡಿಯಾ ಎಕ್ಸ್‌ಪ್ರೆಸ್ (IX) (Air India Express IX) ಜುಲೈ 22 ರಿಂದ ಪ್ರತಿ ದಿನ ವಿಮಾನ ಸಂಚಾರ ಆರಂಭಿಸಲಿದೆ. ಪ್ರಸ್ತುತ, ಏರ್ ಇಂಡಿಯಾ ಎಕ್ಸ್‌ಪ್ರೆಸ್ (IX) ಮಂಗಳವಾರ, ಗುರುವಾರ, ಶನಿವಾರ ಮತ್ತು ಭಾನುವಾರದಂದು ಅಬುಧಾಬಿಗೆ ವಾರದಲ್ಲಿ 4 ವಿಮಾನಗಳ ಸಂಚಾರ ನಿರ್ವಹಿಸುತ್ತಿದೆ.

ಪ್ರಸ್ತುತ, ಇಂಡಿಗೋ (4) ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ IX (1) ಬೆಂಗಳೂರು-ಮಂಗಳೂರು ಸೆಕ್ಟರ್‌ನಲ್ಲಿ ಪ್ರತಿದಿನ ಒಟ್ಟು 5 ವಿಮಾನಗಳನ್ನು ನಿರ್ವಹಿಸುತ್ತಿವೆ. ಜುಲೈ 8 ರಿಂದ, ಈ ವಲಯದಲ್ಲಿ ದೈನಂದಿನ ವಿಮಾನಗಳ ಸಂಚಾರ 6 ಕ್ಕೆ ಹೆಚ್ಚಳವಾಗಲಿದೆ. ಅಂದಿನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ IX ತನ್ನ ಎರಡನೇ ದೈನಂದಿನ ಸಂಚಾರ ಪುನರಾರಂಭಿಸಲಿದೆ. ಈ ಸಂಖ್ಯೆಯು ಜುಲೈ 22 ರಿಂದ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು 7 ಕ್ಕೆ ಹೆಚ್ಚಾಗಲಿದೆ ಎಂದು ಮೂಲಗಳು ತಿಳಿಸಿವೆ.

ಸದ್ಯ ಬೆಂಗಳೂರು ಹಾಗೂ ಮಂಗಳೂರು ಮಧ್ಯೆ ಸಂಚರಿಸುವ ಏರ್ ಇಂಡಿಯಾ ಎಕ್ಸ್‌ಪ್ರೆಸ್ IX ಮುಂದೆ ಸಂಪೂರ್ಣ ದೇಶೀಯ ವಿಮಾನವಾಗಿ ಬದಲಾಗಲಿದೆ. ಅಬುಧಾಬಿಗೆ ತೆರಳುವ ಪ್ರಯಾಣಿಕರು ಮಂಗಳೂರಿನಿಂದ ಪ್ರತಿ ದಿನದ ಏರ್ ಇಂಡಿಯಾ ಎಕ್ಸ್‌ಪ್ರೆಸ್ IX ವಿಮಾನ ಏರಲಿದ್ದಾರೆ.

ಬೆಂಗಳೂರು – ಮಂಗಳೂರು ವಿಮಾನಗಳ ಸಂಖ್ಯೆ ಹೆಚ್ಚಳ

ಆಗಸ್ಟ್ 1 ರಿಂದ, ಬೆಂಗಳೂರು ಹಾಗೂ ಮಂಗಳೂರು ಮಧ್ಯೆ ವಾರದಲ್ಲಿ ಮೂರು ದಿನಗಳಲ್ಲಿ (ಕ್ರಮವಾಗಿ ಸೋಮವಾರ, ಬುಧವಾರ ಮತ್ತು ಶುಕ್ರವಾರ) ಸಂಚರಿಸುವ ವಿಮಾನಗಳ ಸಂಖ್ಯೆ 8 ಕ್ಕೆ ಏರಲಿದೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್ IX ತನ್ನ ಎರಡು ದೈನಂದಿನ ವಿಮಾನಗಳೊಂದಿಗೆ ಮೂರನೇ ವಿಮಾನವನ್ನು ಆರಂಭಿಸಲಿದೆ.

ಸದ್ಯ ಮಾರ್ಚ್ 31 ರಿಂದ ಪ್ರಾರಂಭವಾಗುವ ಬೇಸಿಗೆ ವೇಳಾಪಟ್ಟಿಯಲ್ಲಿ ಘೋಷಿಸಿದ ಐದನೇ ವಿಮಾನ ಸೇರಿದಂತೆ ಇಂಡಿಗೋ 5 ದೈನಂದಿನ ವಿಮಾನಗಳನ್ನು ನಿರ್ವಹಿಸುತ್ತದೆ.

ಪ್ರಸ್ತುತ, ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನಯಾನ ಸಂಸ್ಥೆಗಳು ಮುಂಬೈ ಮತ್ತು ಬೆಂಗಳೂರಿಗೆ ಪ್ರತಿ ದಿನ 5 ವಿಮಾನಗಳು, ಚೆನ್ನೈ ಮತ್ತು ಹೈದರಾಬಾದ್‌ಗೆ ಕ್ರಮವಾಗಿ ಪ್ರತಿ ದಿನ 2 ವಿಮಾನಗಳು, ದೆಹಲಿಗೆ ಪ್ರತಿ ದಿನ ಒಂದು ವಿಮಾನ, ಪುಣೆಗೆ ವಾರಕ್ಕೆ 3 ವಿಮಾನಗಳು ಮತ್ತು ತಿರುಚಿರಾಪಳ್ಳಿಗೆ ವಾರಕ್ಕೆ 1 ವಿಮಾನ ಕಾರ್ಯಾಚರಣೆ ನಡೆಸುತ್ತಿವೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಇಬ್ಬರಿಗೆ ಚೂರಿ ಇರಿತ ಪ್ರಕರಣ; ಆರು ಮಂದಿ ಬಂಧನ, 20 ಜನ ವಶಕ್ಕೆ

ಸದ್ಯ ಮಂಗಳೂರಿನಿಂದ ಅಂತರರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆಯು ಏರ್​​ ಇಂಡಿಯಾ ಮೂಲಕ ದುಬೈಗೆ ಪ್ರತಿ ದಿನ 2 ವಿಮಾನಗಳು ಮತ್ತು ಇಂಡಿಗೋದಿಂದ ವಾರಕ್ಕೆ 4 ವಿಮಾನಗಳು, ದಮ್ಮಾಮ್‌ಗೆ ವಾರಕ್ಕೆ 4 ವಿಮಾನಗಳು, ವಾರಕ್ಕೆ 3 ಮಸ್ಕತ್‌ಗೆ, ವಾರಕ್ಕೆ 2 ವಿಮಾನ ದೋಹಾ ಮತ್ತು ಬಹ್ರೇನ್‌ಗೆ ಮತ್ತು ವಾರಕ್ಕೊಮ್ಮೆ ಏರ್ ಇಂಡಿಯಾದ 1 ವಿಮಾನ ಕುವೈತ್ ಮತ್ತು ಜೆಡ್ಡಾಕ್ಕೆ ಸಂಚಾರ ನಡೆಸುತ್ತಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ