AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru Traffic Advisory: ಮಂಗಳೂರು ಬೆಂಗಳೂರು ಸಂಚಾರ ಮಾರ್ಗದಲ್ಲಿ ಮಹತ್ವದ ಬದಲಾವಣೆ, ಪರ್ಯಾಯ ರಸ್ತೆಗಳ ವಿವರ ಇಲ್ಲಿದೆ

ಮಂಗಳೂರು ಬೆಂಗಳೂರು ರಸ್ತೆ ಸಂಚಾರ ಬದಲಾವಣೆ: ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿರುವುದರಿಂದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 73 ಸೇರಿದಂತೆ ಮಂಗಳೂರು ಸುತ್ತಮುತ್ತ ಸಂಚಾರ ಬದಲಾವಣೆ ಮಾಡಲಾಗಿದೆ. ಪ್ರತಿಭಟನೆಯಿಂದ ಸಂಚಾರ ದಟ್ಟಣೆ ತಪ್ಪಿಸಲು ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ. ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗಗಳ ಬಗ್ಗೆ ಇಲ್ಲಿದೆ ವಿವರ.

Mangaluru Traffic Advisory: ಮಂಗಳೂರು ಬೆಂಗಳೂರು ಸಂಚಾರ ಮಾರ್ಗದಲ್ಲಿ ಮಹತ್ವದ ಬದಲಾವಣೆ, ಪರ್ಯಾಯ ರಸ್ತೆಗಳ ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: Ganapathi Sharma|

Updated on: Apr 17, 2025 | 9:32 AM

Share

ಮಂಗಳೂರು, ಏಪ್ರಿಲ್ 17: ವಕ್ಫ್ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಯಲಿರುವ ಕಾರಣ ಮಂಗಳೂರು ಬೆಂಗಳೂರು ಸಂಚಾರ (Mangaluru Bengaluru Road) ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ಪ್ರತಿಭಟನೆಯ ಕಾರಣ ಸಂಚಾರ ದಟ್ಟಣೆ ಉಂಟಾಗುವುದನ್ನು ತಪ್ಪಿಸುವುದಕ್ಕಾಗಿ ಮಂಗಳೂರು ಸಂಚಾರ ಪೊಲೀಸರು (Mangaluru Traffic Police) ಈ ಕ್ರಮ ಕೈಗೊಂಡಿದ್ದಾರೆ. ನಗರ ಹೊರವಲಯದ ಅಡ್ಯಾರ್ ಕಣ್ಣೂರು ಬಳಿಯ ಷಾ ಗಾರ್ಡನ್ ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಈ ಮೈದಾನ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 73 ರ ಪಕ್ಕದಲ್ಲೇ ಇದೆ. ಹೀಗಾಗಿ ಪೊಲೀಸರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸಲಹೆ ನೀಡಿದ್ದಾರೆ.

ಶುಕ್ರವಾರ ಮಧ್ಯಾಹ್ನ 12 ರಿಂದ ರಾತ್ರಿ 9 ರವರೆಗೆ ಪರ್ಯಾಯ ಮಾರ್ಗ ಬಳಸುವಂತೆ ಮಂಗಳೂರು ಪೊಲೀಸರು ಸೂಚನೆ ನೀಡಿದ್ದಾರೆ.

ಮಂಗಳೂರು ಬೆಂಗಳೂರು ಸಂಚಾರ: ಪರ್ಯಾಯ ಮಾರ್ಗಗಳು ಯಾವುವು?

  • ಪಂಪುವೆಲ್ / ನಂತೂರು – ಪಡೀಲ್ – ಕಣ್ಣೂರು – ಅಡ್ಯಾರ್ – ಸಹ್ಯಾದ್ರಿ – ಅರ್ಕುಳ – ಪರಂಗಿಪೇಟೆ – ತುಂಬೆ – ಬಿ.ಸಿ.ರೋಡ್ ರಸ್ತೆಯಲ್ಲಿ ಮಂಗಳೂರು ನಗರಕ್ಕೆ ಬರುವ ಹಾಗೂ ಹೋಗುವ ಘನ ವಾಹನಗಳು, ಎಲ್ಲಾ ತರಹದ ಸರಕು ವಾಹನಗಳು ಹಾಗೂ ಬಸ್ಸುಗಳ ಸಂಚಾರಕ್ಕಾಗಿ ಬದಲಿ ಮಾರ್ಗ ಉಪಯೋಗಿಸಬೇಕು.
  • ಪಡೀಲ್ – ಕಣ್ಣೂರು – ಅಡ್ಯಾರ್ ಕಟ್ಟೆ ರಸ್ತೆಯಲ್ಲಿ ಮಂಗಳೂರು ನಗರಕ್ಕೆ ಬರುವ ಹಾಗೂ ಹೊರಡುವ ಎಲ್ಲಾ ತರಹದ ಲಘು ವಾಹನಗಳು ಮತ್ತು ದ್ವಿ-ಚಕ್ರ ವಾಹನಗಳ ಚಾಲಕರು / ಸವಾರರು ಬದಲಿ ಮಾರ್ಗ ಉಪಯೋಗಿಸಬೇಕು.
  • ಪಂಪುವೆಲ್ / ನಂತೂರು – ಪಡೀಲ್ – ಕಣ್ಣೂರು – ಅಡ್ಯಾರ್ – ಸಹ್ಯಾದ್ರಿ – ಅರ್ಕುಳ – ಪರಂಗಿಪೇಟೆ – ತುಂಬೆ – ಬಿ.ಸಿ.ರೋಡ್ ರಸ್ತೆಯ ಎರಡು ಬದಿಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡಬಾರದು.
  • ಮೆಲ್ಕಾರು ಜಂಕ್ಷನ್- ಪುತ್ತೂರು/ಬಂಟ್ವಾಳ/ಬೆಳ್ತಂಗಡಿ ಕಡೆಯಿಂದ ಮಂಗಳೂರು ನಗರ/ ಕಾಸರಗೋಡು ಕಡೆಗೆ ಬರುವ ವಾಹನಗಳು ಮೆಲ್ಕಾರ್ ಜಂಕ್ಷನ್ – ಬೊಳಿಯಾರ್ – ಮುಡಿಪು – ದೇರಳಕಟ್ಟೆ – ತೊಕ್ಕೊಟ್ಟು ಮೂಲಕ ಸಂಚರಿಸುವುದು.
  • ಬಿ.ಸಿ. ರೋಡ್ ಪೊಳಲಿ ದ್ವಾರ-ಬಿ.ಸಿ.ರೋಡ್ ಕಡೆಯಿಂದ ಮಂಗಳೂರು/ಉಡುಪಿ ಕಡೆಗೆ ಸಂಚರಿಸುವ ವಾಹನಗಳು ಪೊಳಲಿ ದ್ವಾರದ ಮೂಲಕ ಕಲ್ಪನೆ ಜಂಕ್ಷನ್ – ನೀರುಮಾರ್ಗ – ಬೈತುರ್ಲಿ – ಕುಲಶೇಖರ – ನಂತೂರು ಮೂಲಕ ಸಂಚರಿಸುವುದು.
  • ವಳಚ್ಚಿಲ್ ಜಂಕ್ಷನ್-ಬಿ.ಸಿ.ರೋಡ್ / ತುಂಬೆ / ಫರಂಗಿಪೇಟೆ ಕಡೆಯಿಂದ ಮಂಗಳೂರು ನಗರದ ಕಡೆಗೆ ಸಂಚರಿಸುವ ಲಘು ವಾಹನಗಳು ವಳಚ್ಚಿಲ್‌ನಲ್ಲಿ ಬಲಕ್ಕೆ ತಿರುಗಿ ಮೇರ್ಲಪದವು – ನೀರುಮಾರ್ಗ – ಬೈತುರ್ಲಿ – ನಂತೂರು ಮೂಲಕ ಸಂಚರಿಸುವುದು.
  • ಅಡ್ಯಾರ್ ಕಟ್ಟೆ-ಬಿ.ಸಿ.ರೋಡ್ / ತುಂಬೆ / ಫರಂಗಿಪೇಟೆ ಕಡೆಯಿಂದ ಮಂಗಳೂರು ನಗರದ ಕಡೆಗೆ ಸಂಚರಿಸುವ ಲಘು ವಾಹನಗಳು ಅಡ್ಯಾರ್ ಕಟ್ಟೆ ಬಳಿ ಎಡಕ್ಕೆ ತಿರುಗಿ ಹರೇಕಳ ಬ್ರಿಡ್ಜ್ – ಕೊಣಾಜೆ – ದೇರಳಕಟ್ಟೆ – ತೊಕ್ಕೊಟ್ಟು ಮೂಲಕ ಸಂಚರಿಸುವುದು.
  • ಪಂಪ್‌ವೆಲ್ ಜಂಕ್ಷನ್- ಮಂಗಳೂರು ನಗರದ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ತೊಕ್ಕೊಟ್ಟು – ದೇರಳಕಟ್ಟೆ – ಮುಡಿಪು – ಬೊಳಿಯಾರ್ – ಮೆಲ್ಕಾರ್ ಮೂಲಕ ಸಂಚರಿಸುವುದು.
  • ನಂತೂರು ವೃತ್ತ- ಮಂಗಳೂರು ನಗರ / ಸುರತ್ಕಲ್ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಬಿಕರ್ನಕಟ್ಟೆ – ಕುಲಶೇಖರ – ಬೈತುರ್ಲಿ ಜಂಕ್ಷನ್ – ನೀರುಮಾರ್ಗ – ಕಲ್ಪನೆ ಜಂಕ್ಷನ್- ಬಿ.ಸಿ ರೋಡ್ ಕೈಕಂಬದ ಪೊಳಲಿ ದ್ವಾರದ ಮೂಲಕ ಸಂಚರಿಸುವುದು.
  • ಕೆ.ಪಿ.ಟಿ. ವೃತ್ತ- ಮಂಗಳೂರು ನಗರ / ಸುರತ್ಕಲ್ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಪದವಿನಂಗಡಿ – ಪಚ್ಚನಾಡಿ – ವಾಮಂಜೂರು – ಬೈತುರ್ಲಿ ಜಂಕ್ಷನ್ – ನೀರುಮಾರ್ಗ – ಕಲ್ಪನೆ ಮೂಲಕ ಅಥವಾ ಬೋಂದೆಲ್ – ಕಾವೂರು – ಬಜಪೆ – ಕೈಕಂಬ – ಮೂಡಬಿದ್ರೆ ಮೂಲಕ ಸಂಚರಿಸುವುದು.
  • ಮುಲ್ಕಿ ವಿಜಯಸನ್ನಿಧಿ- ಉಡುಪಿ / ಮುಲ್ಕಿ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಕಿನ್ನಿಗೊಳಿ – ಮೂಡಬಿದ್ರೆ – ಸಿದ್ದಕಟ್ಟೆ – ಬಂಟ್ವಾಳ ಮೂಲಕ ಸಂಚರಿಸುವುದು.
  • ಪಡುಬಿದ್ರೆ -ಉಡುಪಿ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಕಾರ್ಕಳ – ಮೂಡಬಿದ್ರೆ – ಸಿದ್ದಕಟ್ಟೆ – ಬಂಟ್ವಾಳ ಮೂಲಕ ಸಂಚರಿಸುವುದು.

ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯ ಆದಾಯದಲ್ಲಿ ಭಾರಿ ಏರಿಕೆ: ವಾರ್ಷಿಕ ಆದಾಯ 155.95 ಕೋಟಿ ರೂ

ಇದನ್ನೂ ಓದಿ
Image
ವಿಜಯಪುರ-ಬೆಂಗಳೂರು ಪ್ರಯಾಣ 10 ಗಂಟೆಗೆ ತಗ್ಗಿಸಲು ಸಚಿವ ಎಂಬಿ ಪಾಟೀಲ್ ಸೂಚನೆ
Image
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
Image
ಗುಡ್ ಫ್ರೈಡೇ, ವಾರಾಂತ್ಯ ರಜೆ ಹಿನ್ನೆಲೆ ಗಗನಕ್ಕೇರಿದ ಖಾಸಗಿ ಬಸ್ ಟಿಕೆಟ್ ದರ
Image
ಲಾರಿ ಮುಷ್ಕರ ತೀವ್ರ: ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುವ ಸಾಧ್ಯತೆ

ವಕ್ಫ್ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ಬೃಹತ್ ಪ್ರತಿಭಟನೆಗೆ ಕರ್ನಾಟಕ ಉಲಮಾ ಒಕ್ಕೂಟದ ವತಿಯಿಂದ ತಯಾರಿ ನಡೆದಿದೆ. ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಕರ್ನಾಟಕದಲ್ಲಿ ನಡೆಯುತ್ತಿರುವ ಮೊದಲ ಬೃಹತ್ ಹೋರಾಟ ಇದಾಗಿರಲಿದ್ದು, ಲಕ್ಷಾಂತರ ಜನ ಸೇರುವ ಸಾಧ್ಯತೆ ಇದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ