ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಭೀಷ್ಮ ಎಂದೇ ಖ್ಯಾತರಾಗಿದ್ದ ಉರಿಮಜಲು ರಾಮ್ ಭಟ್ ನಿಧನ
ಬಿಜೆಪಿ ವಿರುದ್ಧ ಸ್ವಾಭಿಮಾನಿ ವೇದಿಕೆ ಹುಟ್ಟುಹಾಕಿದ್ದ ರಾಮ್ ಭಟ್ 2009ರಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ವಿರುದ್ಧ ಸ್ಪರ್ಧೆ ಮಾಡಿದ್ದರು. ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದರು. ಬಳಿಕ, ನರೇಂದ್ರ ಮೋದಿ ಪ್ರಧಾನಿಯಾದ ನಂತರ ಮತ್ತೆ ಬಿಜೆಪಿ ಬೆಂಬಲಿಸಿದ್ದರು.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಭೀಷ್ಮ ಎಂದೇ ಖ್ಯಾತರಾಗಿದ್ದ ಉರಿಮಜಲು ರಾಮ್ ಭಟ್ (92) ವಯೋಸಹಜ ಅನಾರೋಗ್ಯದಿಂದ ಇಂದು (ಡಿಸೆಂಬರ್ 6) ನಿಧನರಾಗಿದ್ದಾರೆ. ಬಿಜೆಪಿ, ಜನಸಂಘದ ಪ್ರಭಾವಿ ನಾಯಕರಾಗಿದ್ದ ರಾಮ್ ಭಟ್ ಪುತ್ತೂರು ಕ್ಷೇತ್ರದಿಂದ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1957 ರಲ್ಲಿ ಜನಸಂಘದಿಂದ ಮೊದಲ ಬಾರಿ ಸ್ಪರ್ಧಿಸಿದ್ದ ರಾಮ್ ಭಟ್, 2008ರಲ್ಲಿ ಶಿಷ್ಯೆ ಶಕುಂತಲಾ ಶೆಟ್ಟಿಗೆ ಬಿಜೆಪಿ ಟಿಕೆಟ್ ನಿರಾಕರಣೆ ಮಾಡಿದಾಗ ಬಂಡಾಯಕ್ಕೆ ಬೆಂಬಲ ನೀಡಿದ್ದರು.
ಬಿಜೆಪಿ ವಿರುದ್ಧ ಸ್ವಾಭಿಮಾನಿ ವೇದಿಕೆ ಹುಟ್ಟುಹಾಕಿದ್ದ ರಾಮ್ ಭಟ್ 2009ರಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ವಿರುದ್ಧ ಸ್ಪರ್ಧೆ ಮಾಡಿದ್ದರು. ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದರು. ಬಳಿಕ, ನರೇಂದ್ರ ಮೋದಿ ಪ್ರಧಾನಿಯಾದ ನಂತರ ಮತ್ತೆ ಬಿಜೆಪಿ ಬೆಂಬಲಿಸಿದ್ದರು. 2019ರಲ್ಲಿ ರಾಮ್ ಭಟ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸ್ವತಃ ಕರೆ ಮಾಡಿ, ಆರೋಗ್ಯ ವಿಚಾರಿಸಿದ್ದನ್ನು ಸ್ಮರಿಸಿಕೊಳ್ಳಬಹುದು.
ತಮ್ಮ ಪ್ರೌಢ ಶಿಕ್ಷಣದ ಸಮಯದಲ್ಲಿ ರಾಮ್ ಭಟ್ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿದ್ದರು. ಜನಸಂಘದ ಮೂಲಕ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿ, ಮುರಳಿ ಮನೋಹರ ಜೋಶಿ ಅವರಂಥ ನಾಯಕರ ನಿಕಟ ಸಂಪರ್ಕ ಹೊಂದಿದ್ದರು. ವೃತ್ತಿಯಲ್ಲಿ ವಕೀಲರಾಗಿ, ಧಾರ್ಮಿಕ, ಶೈಕ್ಷಣಿಕ ಕಾರ್ಯಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದರು.
ಇದನ್ನೂ ಓದಿ: ಬಿಜೆಪಿಯೊಂದಿಗೆ ಪಂಜಾಬ್ ಚುನಾವಣೆಯಲ್ಲಿ ಸ್ಪರ್ಧೆ, ಶೀಘ್ರದಲ್ಲೇ ಮೈತ್ರಿ ಘೋಷಣೆ: ಅಮರಿಂದರ್ ಸಿಂಗ್
Published On - 8:37 pm, Mon, 6 December 21