ಮಂಗಳೂರು: ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ದಿನ ರಜೆ ನೀಡುವಂತೆ ವಿಎಚ್​ಪಿ ಮನವಿ

| Updated By: ರಮೇಶ್ ಬಿ. ಜವಳಗೇರಾ

Updated on: Jan 18, 2024 | 2:46 PM

ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಸಿದ್ಧತೆಗಳು ಅಂತಿಮ ಹಂತದಲ್ಲಿವೆ. ಈ ನಡುವೆ ವಿ‌.ಎಚ್.ಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಾರ ಮಳಿಗೆಗಳು, ಹೊಟೇಲ್ ಉದ್ಯಮಿಗಳು, ಫ್ಯಾಕ್ಟರಿಗಳು, ಶಾಲಾ ಕಾಲೇಜುಗಳು, ಸಂಘ ಸಂಸ್ಥೆಗಳಿಗೆ ರಜೆ ನೀಡುವಂತೆ ಮನವಿ ಮಾಡಿದೆ.

ಮಂಗಳೂರು: ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ದಿನ ರಜೆ ನೀಡುವಂತೆ ವಿಎಚ್​ಪಿ ಮನವಿ
ರಾಮಮಂದಿರ
Follow us on

ಮಂಗಳೂರು, (ಜನವರಿ 18): ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ((Ayodhya Ram Mandir)) ಜನವರಿ 22ರಂದು ರಾಮಲಲ್ಲಾನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಜನರಿಗೆ ಭಾಗವಹಿಸಲು ಅವಕಾಶ ಕಲ್ಪಿಸುವಂತೆ ವಿಶ್ವ ಹಿಂದೂ ಪರಿಷತ್ ಮನವಿ ಮಾಡಿದೆ. ಜ.22ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯ ಅವಧಿಯಲ್ಲಿ ರಜೆ‌ ನೀಡುವಂತೆ ವ್ಯಾಪಾರ ಮಳಿಗೆಗಳು, ಹೊಟೇಲ್ ಉದ್ಯಮಿಗಳು, ಫ್ಯಾಕ್ಟರಿಗಳು, ಶಾಲಾ ಕಾಲೇಜುಗಳು, ಸಂಘ ಸಂಸ್ಥೆಗಳು, ಉದ್ಯಮಪತಿಗಳಲ್ಲಿ ವಿ‌.ಎಚ್.ಪಿ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪುವೆಲ್ ಅವರು ಮನವಿ ಮಾಡಿದ್ದಾರೆ.

ರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ಶುಭದಿನ ಕೆಲಸದ ದಿನವಾಗಿದೆ. ರಾಮಲಲ್ಲಾನ ಪ್ರಾಣಪ್ರತಿಷ್ಠೆ ದಿನವನ್ನು ಸಂಭ್ರಮದಿಂದ ಆಚರಿಸಲು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ವಿವಿಧ ಮಂದಿರಗಳಲ್ಲಿ ಹೋಮ, ಪೂಜೆ,ಪ್ರವಚನ ನಡೆಯಲಿದೆ. ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮದ ನೇರಪ್ರಸಾರದ ವ್ಯವಸ್ಥೆ ಸಹ ಇರಲಿದೆ. ಹೀಗಾಗಿ ಜನರಿಗೆ ಭಾಗವಹಿಸಲು ಅನುಕೂಲವಾಗುವಂತೆ ರಜೆ ನೀಡಬೇಕು. ಈ ಮೂಲಕ ತಮ್ಮಲ್ಲಿ ಕೆಲಸ ಮಾಡುವವರಿಗೆ, ವಿದ್ಯಾರ್ಥಿಗಳಿಗೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸುವಂತೆ ವಿ‌.ಎಚ್.ಪಿ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪುವೆಲ್ ವಿನಂತಿಸಿದ್ದಾರೆ.

ಇದನ್ನೂ ಓದಿ: ಪ್ರಭು ಶ್ರೀ ರಾಮಚಂದ್ರ ಭೇಟಿ ನೀಡಿದ ಕರ್ನಾಟಕದ ಪ್ರಸಿದ್ಧ ಸ್ಥಳಗಳು

ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಸಿದ್ಧತೆಗಳು ಭರದಿಂದ ಸಾಗಿದ್ದು, ದೇಶಾದ್ಯಂತದ ರಾಜಕಾರಣಿಗಳು, ಸಂತರು ಮತ್ತು ಗಣ್ಯರು ಸೇರಿದಂತೆ 7,000 ಕ್ಕೂ ಹೆಚ್ಚು ಜನರು ಅದ್ಧೂರಿ ಉದ್ಘಾಟನೆಗೆ ಹಾಜರಾಗುವ ನಿರೀಕ್ಷೆಯಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ದೇಶಗಳ ಸುಮಾರು 100 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ