
ಮಂಗಳೂರು, ಏಪ್ರಿಲ್ 28: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ (Belthangady) ತಾಲೂಕಿನ ಖಾಸಗಿ ಕಾಲೇಜಿನ ವಿದ್ಯಾರ್ಥಿ ಕಂ, ವಾಲಿಬಾಲ್ ಆಟಗಾರ (volleyball player) ಸೈಯದ್ ಎಂಬಾತನ ಕಾಮಕಾಂಡ ಬಯಲಾಗಿದೆ. ವಿದ್ಯಾರ್ಥಿನಿಗೆ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ಹಿನ್ನಲೆ ಹಿಂದೂ ಸಂಘಟನೆ ಕಾರ್ಯಕರ್ತರು ಆತನ ಮೇಲೆ ಹಲ್ಲೆ ಮಾಡಿದ್ದಾರೆ. ಈ ವೇಳೆ ಸೈಯದ್ ಮೊಬೈಲ್ ಕಿತ್ತುಕೊಂಡು ನೋಡಿದಾಗ ನೂರಾರು ಹುಡುಗಿಯರ ಜೊತೆಗಿನ ಸರಸ ಸಲ್ಲಾಪದ ವಿಡಿಯೋಗಳು ಪತ್ತೆಯಾಗಿವೆ. ಸದ್ಯ ಬೆಳ್ತಂಗಡಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಆತನನ್ನು ಬಂಧಿಸಿದ್ದಾರೆ.
ಸೈಯದ್ ಮೂಲತಃ ಕಾರ್ಕಳ ನಿವಾಸಿ. ಬೆಳ್ತಂಗಡಿ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದು, ವಾಲಿಬಾಲ್ ಆಟಗಾರ ಕೂಡ ಹೌದು. ಓರ್ವ ವಿದ್ಯಾರ್ಥಿನಿಗೆ ಸೈಯದ್ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ಹಿಂದೂ ಸಂಘಟನೆ ಕಾರ್ಯಕರ್ತರು ಆತನನ್ನು ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.
ಇದನ್ನೂ ಓದಿ: ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾದ ಸುಂದರಿಗೆ 25 ಲಕ್ಷ ರೂ ಕೊಟ್ಟ: ಮುಂದೇನಾಯ್ತು?
ಇನು ಈ ಘಟನೆ ವೇಳೆ ಸೈಯದ್ ಮೊಬೈಲ್ ಕಿತ್ತುಕೊಂಡು ನೋಡಿದಾಗ ಹಿಂದೂ ಸಂಘಟನೆ ಕಾರ್ಯಕರ್ತರು ಒಂದು ಕ್ಷಣ ಶಾಕ್ ಆಗಿದ್ದಾರೆ. ಏಕೆಂದರೆ ಆತನ ಮೊಬೈಲ್ ತುಂಬಾ ನೂರಾರು ಹುಡುಗಿಯರ ಜೊತೆಗಿನ ಸರಸ-ಸಲ್ಲಾಪದ ವಿಡಿಯೋಗಳನ್ನು ಕಂಡು ದಂಗಾಗಿದ್ದಾರೆ.
ಇತ್ತ ತನ್ನ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಸೈಯದ್ ಕೂಡ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಹೀಗಾಗಿ ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ಉಜಿರೆಯ ಮನೋಜ್ ಮತ್ತು ಪ್ರಜ್ವಲ್ ಗೌಡ ಎಂಬುವವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಇನ್ನು ಇತ್ತೀಚೆಗೆ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ನಿರ್ವಾಹಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಘಟನೆ ಮಂಗಳೂರಿನ ಮುಡಿಪು -ಸ್ಟೇಟ್ ಬ್ಯಾಂಕ್ ಭಾಗದಲ್ಲಿ ನಡೆದಿತ್ತು. ಈ ಬಗ್ಗೆ ಪ್ರಯಾಣಿಕರೊಬ್ಬರು ಮಾಡಿದ್ದ ವಿಡಿಯೋ ಕೂಡ ವೈರಲ್ ಆಗಿತ್ತು. ಆ ಬೆನ್ನಲ್ಲೇ ಎಚ್ಚೆತ್ತುಕೊಂಡಿದ್ದ ಪೊಲೀಸರು, ಬಾಗಲಕೋಟೆ ಮೂಲದ ಆರೋಪಿ ಪ್ರದೀಪ್ (40) ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:10 am, Mon, 28 April 25