ಮಂಗಳೂರು ವೈದ್ಯರ ಎಡವಟ್ಟು: ಸರ್ಜರಿ ವೇಳೆ ಯುವಕ ಸಾವು, ಪೋಷಕರ ಆಕ್ರೋಶ

ಎದೆ ಭಾಗ ಉಬ್ಬಿದ ಹಿನ್ನಲೆಯಲ್ಲಿ ಗೈನ್ ಇಕೋಮಸ್ಟಿಯಾ ಸರ್ಜರಿಗಾಗಿ ಉಳ್ಳಾಲದ ಅಕ್ಕರೆಕೆರೆ ನಿವಾಸಿ ಮುಹಮ್ಮದ್ ಮಾಝಿನ್ (32) ಅವರು ಮಂಗಳೂರು ನಗರದ ಕಂಕನಾಡಿಯ ಬೆಂದೂರ್ ವೆಲ್ ನಲ್ಲಿರುವ ಕ್ಲಿನಿಕ್​ನಲ್ಲಿ ದಾಖಲಾಗಿದ್ದರು. ಮುಂದೇನಾಯ್ತು? ಈ ಸುದ್ದಿ ಓದಿ.

ಮಂಗಳೂರು ವೈದ್ಯರ ಎಡವಟ್ಟು: ಸರ್ಜರಿ ವೇಳೆ ಯುವಕ ಸಾವು, ಪೋಷಕರ ಆಕ್ರೋಶ
ಕ್ಲಿನಿಕ್​, ಮೃತ ಯುವಕ
Follow us
| Updated By: ವಿವೇಕ ಬಿರಾದಾರ

Updated on: Sep 25, 2024 | 1:13 PM

ಮಂಗಳೂರು, ಸೆಪ್ಟೆಂಬರ್​ 25: ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃತಪಟ್ಟ ಪ್ರಕರಣವನ್ನು ದ‌ಕ್ಷಿಣ ಕನ್ನಡ (Dakshina Kannada) ಜಿಲ್ಲಾ ಆರೋಗ್ಯ ಇಲಾಖೆ (Health Department) ಗಂಭೀರವಾಗಿ ಪರಿಗಣಿಸಿದೆ. ಸರ್ಜರಿ ನಡೆದ ಬೆಂದೂರ್​ ವೆಲ್​ನಲ್ಲಿರುವ ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್​​ಪ್ಲಾಂಟ್ ಕ್ಲಿನಿಕ್​ಗೆ ಜಿಲ್ಲಾ ಆರೋಗ್ಯ ಅಧಿಕಾರಿ ಓ ಡಾ.ತಿಮ್ಮಯ್ಯ ಭೇಟಿ ನೀಡಿ, ಮಾಹಿತಿ ಸಂಗ್ರಹಿಸಿದರು.

ಎದೆ ಭಾಗ ಉಬ್ಬಿದ ಹಿನ್ನೆಲೆಯಲ್ಲಿ ಗೈನ್ ಇಕೋಮಸ್ಟಿಯಾ ಸರ್ಜರಿಗಾಗಿ ಉಳ್ಳಾಲದ ಅಕ್ಕರೆಕೆರೆ ನಿವಾಸಿ ಮುಹಮ್ಮದ್ ಮಾಝಿನ್ (32) ಅವರು ಮಂಗಳೂರು ನಗರದ ಕಂಕನಾಡಿಯ ಬೆಂದೂರ್ ವೆಲ್ ನಲ್ಲಿರುವ ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್​​ಪ್ಲಾಂಟ್ ಕ್ಲಿನಿಕ್​ನಲ್ಲಿ ದಾಖಲಾಗಿದ್ದರು. ಅರ್ಧ ಗಂಟೆಯಲ್ಲಿ ಮುಗಿಯಬಹುದಾಗಿದ್ದ ಸಣ್ಣ ಶಸ್ತ್ರಚಿಕಿತ್ಸೆ, ಸಂಜೆಯಾದರು ಮುಗಿಯದ ಹಿನ್ನೆಲೆಯಲ್ಲಿ ಅನುಮಾನಗೊಂಡ ಮಾಝಿನ್ ಪೋಷಕರು ಅನುಮಾನಗೊಂಡಿದ್ದಾರೆ.

ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಲರಾ ಆತಂಕ! ಆಹಾರ ಗುಣಮಟ್ಟದ ಬಗ್ಗೆ ಎಚ್ಚರವಹಿಸಲು ಸೂಚನೆ

ಸಂಶಯಗೊಂಡು‌ ವಿಚಾರಿಸಿದಾಗ ಮುಹಮ್ಮದ್ ಮಾಝಿನ್ ಆರೋಗ್ಯದಲ್ಲಿ ಏರುಪೇರು ಆಗಿರುವ ಮಾಹಿತಿ ಬೆಳಕಿಗೆ ಬಂದಿದೆ. ಕೂಡಲೆ ಪೋಷಕರು ಮುಹಮ್ಮದ್ ಮಾಝಿನ್​ನನ್ನು ತಕ್ಷಣ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಖಾಸಗಿ ಆಸ್ಪತ್ರೆ ವೈದ್ಯರು ಪರೀಕ್ಷಿಸಿದಾಗ ಮುಹಮ್ಮದ್ ಮಾಝಿನ್ ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ. ಸರ್ಜರಿಯ ವೇಳೆ ವೈದ್ಯರು ಎಡವಟ್ಟು ಮಾಡಿದ್ದಾರೆ ಎಂದು ಪೋಷಕರು ಆರೋಪ ಮಾಡಿದ್ದಾರೆ. ಕದ್ರಿ‌ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ತನಿಖೆಗೆ ಸಮಿತಿ ರಚನೆ

ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಮಾತನಾಡಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕ್ಲಿನಿಕ್​ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ. ಕ್ಲಿನಿಕ್​ನ ವೈದ್ಯರು ಹಾಗೂ ಮುಖ್ಯಸ್ಥರಿಂದ ಪ್ರಕರಣ ಸಂಬಂಧ ಮಾಹಿತಿ ಪಡೆಯಲಾಗಿದೆ. ಸದ್ಯ ಪ್ರಾಥಮಿಕ ತನಿಖೆ ನಡೆಸಿ ಜಿಲ್ಲಾಧಿಕಾರಿಗೆ ವರದಿ ಸಲ್ಲಿಕೆ ಮಾಡುತ್ತೇವೆ ಎಂದು ಹೇಳಿದರು.

ಈ ಘಟನೆಯ ಸಮಗ್ರ ತನಿಖೆಗೆ ಆರೋಗ್ಯ ಇಲಾಖೆಯಿಂದ ಸಮಿತಿ ರಚಿಸಲಾಗುವುದು. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್​ ಅವರಿಗೆ ವರದಿ ಸಲ್ಲಿಕೆ ಮಾಡುತ್ತೇವೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್​ನಲ್ಲಿ ಆ್ಯಪಲ್ ಐಫೋನ್ ಆಫರ್
ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್​ನಲ್ಲಿ ಆ್ಯಪಲ್ ಐಫೋನ್ ಆಫರ್
ಎಲೆಕ್ಟ್ರಾನಿಕ್ ಸಿಟಿಯಲ್ಲಿ ಓಡಾಡುತ್ತ ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ
ಎಲೆಕ್ಟ್ರಾನಿಕ್ ಸಿಟಿಯಲ್ಲಿ ಓಡಾಡುತ್ತ ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ
ಕ್ಷಣಾರ್ಧದಲ್ಲೇ ಜಲ ಸಮಾಧಿಯಾದ ಎರಡಂತಸ್ತಿನ ಮನೆ
ಕ್ಷಣಾರ್ಧದಲ್ಲೇ ಜಲ ಸಮಾಧಿಯಾದ ಎರಡಂತಸ್ತಿನ ಮನೆ
ಕೋಲಾರದಲ್ಲಿ ಅನುಮಾನಾಸ್ಪದ ಸೂಟ್​ಕೇಸ್​ ಪತ್ತೆ, ಸ್ಥಳೀಯರಿಗೆ ಆತಂಕ
ಕೋಲಾರದಲ್ಲಿ ಅನುಮಾನಾಸ್ಪದ ಸೂಟ್​ಕೇಸ್​ ಪತ್ತೆ, ಸ್ಥಳೀಯರಿಗೆ ಆತಂಕ
ಯುವ ದಸರಾ ವೇದಿಕೆ ಮೇಲೆ ನಕ್ಕ ರುಕ್ಮಿಣಿ ವಸಂತ್; ವಿಡಿಯೋ ನೋಡಿ
ಯುವ ದಸರಾ ವೇದಿಕೆ ಮೇಲೆ ನಕ್ಕ ರುಕ್ಮಿಣಿ ವಸಂತ್; ವಿಡಿಯೋ ನೋಡಿ
Daily Devotional: ಯಾವ ಗ್ರಹ ಪೂಜಿಸಿದರೆ ಏನೇನು ಫಲ ಸಿಗುತ್ತೆ?
Daily Devotional: ಯಾವ ಗ್ರಹ ಪೂಜಿಸಿದರೆ ಏನೇನು ಫಲ ಸಿಗುತ್ತೆ?
Nithya Bhavishya: ಈ ರಾಶಿಯ ಮಹಿಳೆಯರು ಇಂದು ಉದ್ಯಮದಲ್ಲಿ ಪ್ರಗತಿ ಕಾಣುವರು
Nithya Bhavishya: ಈ ರಾಶಿಯ ಮಹಿಳೆಯರು ಇಂದು ಉದ್ಯಮದಲ್ಲಿ ಪ್ರಗತಿ ಕಾಣುವರು
ರಸ್ತೆಯಲ್ಲಿ ಬಿದ್ದ ಮೀನುಗಳನ್ನು ಕವರ್​ನಲ್ಲಿ ತುಂಬಿಕೊಳ್ಳಲು ಮುಗಿಬಿದ್ದ ಜನ
ರಸ್ತೆಯಲ್ಲಿ ಬಿದ್ದ ಮೀನುಗಳನ್ನು ಕವರ್​ನಲ್ಲಿ ತುಂಬಿಕೊಳ್ಳಲು ಮುಗಿಬಿದ್ದ ಜನ
ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್