ಹುಟ್ಟುಹಬ್ಬದ ಪಾರ್ಟಿಗೆಂದು ಮನ್ಮಿತ್ ರೈ ಭಾರತದಿಂದ ಥೈಲ್ಯಾಂಡ್ಗೆ ತನ್ನ ಸ್ನೇಹಿತರನ್ನು ಕರೆಸಿಕೊಂಡಿದ್ದಾನೆ. ಈ ವೇಳೆ ಸ್ನೇಹಿತರ ಜೊತೆ ಸೇರಿ ಮೋಜು ಮಸ್ತಿ ಮಾಡಿದ್ದಾನೆ. ನೃತ್ಯ ಮಾಡುವ ಹುಡುಗಿಯರ ಮೇಲ ದುಡ್ಡು ಎಸಿದಿದ್ದು, ವಿಡಿಯೋ ಟಿವಿ9ಗೆ ಲಭ್ಯವಾಗಿದೆ.
ಮನ್ಮಿತ್ ರೈ ಮುತ್ತಪ್ಪಾ ರೈ ಸಂಬಂಧಿ. ಈ ಹಿಂದೆ ಗುಣ ರಂಜನ್ ಮತ್ತು ಮನ್ಮಿತ್ ಒಟ್ಟಿಗೆ ಇದ್ದರು. ಬಳಿಕೆ ಬೇರೆ ಬೇರೆಯಾಗಿದ್ದಾರೆ. ಸದ್ಯ ಮನ್ಮಿತ್ ರೈ ವಿರುದ್ಧ ಕೊಲೆಗೆ ಸಂಚು ರೂಪಿಸಿರುವ ಆರೋಪ ಕೇಳಿಬಂದಿದ್ದು. ಜಯಕರ್ನಾಟಕ ಸಂಘಟನೆ ಗೃಹ ಸಚಿವ ಆರಗ ಜ್ಞಾನೇಂದ್ರಗೆ ದೂರು ನೀಡಿದ್ದಾರೆ.
ಇದನ್ನೂ ಓದಿ: ರಾಹುಲ್ ಗಾಂಧಿಗೆ ಸಮನ್ಸ್: ಕಾಂಗ್ರೆಸ್ ಪ್ರತಿಭಟನೆ, ಹಲವು ಮಂದಿ ಪೊಲೀಸ್ ವಶಕ್ಕೆ
ಆರೋಪದ ಬಗ್ಗೆ ಮಾತನಾಡಿರುವ ಮನ್ಮಿತ್ ರೈ, ಇದು ಎಷ್ಟು ಸತ್ಯ ಎಂಬುವುದನ್ನ ಪೊಲೀಸರು ತನಿಖೆ ಮಾಡುತ್ತಾರೆ. ಆದ್ರೆ ಈ ವಿಚಾರದಲ್ಲಿ ನನ್ನ ಹೆಸರು ಏಕೆ ಬರುತ್ತಿದೆಯೋ ಗೊತ್ತಿಲ್ಲ. ನಾನು ವ್ಯವಹಾರದ ಕಾರಣ ವಿದೇಶಕ್ಕೆ ಬಂದಿದ್ದೇನೆ. ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ನನ್ನ ಮೇಲೆ ಇದುವೆರಗೂ ಯಾವುದೇ ಕ್ರಿಮಿನಲ್ ಪ್ರಕರಣಗಳು ಇಲ್ಲ. ಯಾವ ಸ್ಟೇಷನ್ನಲ್ಲೂ ಎಫ್ಐಆರ್ ದಾಖಲಾಗಿಲ್ಲ. ಯಾವುದೇ ಅಪರಾಧ ಪ್ರಕರಣಗಳಿಲ್ಲದಿದ್ದರೂ ಯಾಕೆ ನನ್ನ ವಿರುದ್ದ ಆರೋಪ ಬರುತ್ತಿದೆ ಗೊತ್ತಿಲ್ಲ ಎಂದಿದ್ದಾರೆ.
ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ