ಮಂಗಳೂರಿನ MRPLನಲ್ಲಿ ಸ್ಫೋಟ: ಓರ್ವ ಸಾವು, 9 ಕಾರ್ಮಿಕರಿಗೆ ಗಾಯ; ಸ್ಫೋಟದ ಶಬ್ಧಕ್ಕೆ ಬೆಚ್ಚಿಬಿದ್ದ ಜನ

ಮಂಗಳೂರಿನ ಜೋಕಟ್ಟೆಯ ಎಂಆರ್​ಪಿಎಲ್‌ನ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, 9 ಮಂದಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಜಿಲ್ಲಾಧಿಕಾರಿ ಸೇರಿದಂತೆ ಹಲವು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಂಗಳೂರಿನ MRPLನಲ್ಲಿ ಸ್ಫೋಟ: ಓರ್ವ ಸಾವು, 9 ಕಾರ್ಮಿಕರಿಗೆ ಗಾಯ; ಸ್ಫೋಟದ ಶಬ್ಧಕ್ಕೆ ಬೆಚ್ಚಿಬಿದ್ದ ಜನ
MRPLನಲ್ಲಿ ಸ್ಪೋಟ
Image Credit source: tv9 kannada
Edited By:

Updated on: Sep 30, 2026 | 4:37 PM

ಮುಖ್ಯಾಂಶಗಳು

  • ಮಂಗಳೂರಿ‌ನ ಜೋಕಟ್ಟೆ ಬಳಿಯಿರುವ MRPLನಲ್ಲಿ ಸ್ಫೋಟ
  • ಓರ್ವ ಸಾವು, 9 ಕಾರ್ಮಿಕರಿಗೆ ಗಾಯ, ಆಸ್ಪತ್ರೆಗೆ ದಾಖಲು
  • ಸ್ಫೋಟದ ತೀವ್ರತೆಗೆ ನಡುಗಿದ ಮನೆಗಳು

ಮಂಗಳೂರು, ಸೆಪ್ಟೆಂಬರ್​ 30: ಇಲ್ಲಿನ ಜೋಕಟ್ಟೆ ಬಳಿಯಿರುವ ಮಂಗಳೂರು ರಿಫೈನರಿ ಆ್ಯಂಡ್​ ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್‌ (ಎಂಆರ್‌ಪಿಎಲ್)ನ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಟೆಸ್ಟಿಂಗ್​​ ಮಾಡುವ ಸಂದರ್ಭದಲ್ಲಿ ಭಾರೀ ಸ್ಫೋಟ ಸಂಭವಿಸಿರುವ ಘಟನೆ ನಡೆದಿದೆ. ‘ಅವಘಡದಲ್ಲಿ ಓರ್ವ ಸಾವನ್ನಪ್ಪಿದ್ದು, 9 ಕಾರ್ಮಿಕರಿಗೆ  ಗಾಯಗಳಾಗಿವೆ. ಪ್ರಸ್ತುತ ಬೆಂಕಿ ನಿಯಂತ್ರಣಕ್ಕೆ ಬಂದಿದೆ’ ಎಂದು ಮಂಗಳೂರು ಜಿಲ್ಲಾಧಿಕಾರಿ ದರ್ಶನ್​​ ಹೆಚ್​ವಿ ಟಿವಿ9ಗೆ ಮಾಹಿತಿ ನೀಡಿದ್ದಾರೆ.

ಓರ್ವ ಸಾವು; 9 ಜನರಿಗೆ ಗಾಯ

ಮನೀಶ್​(30) ಮೃತ ವ್ಯಕ್ತಿ. ಸುರತ್ಕಲ್ ನಿವಾಸಿ ರಾಜೇಶ್​​​ಗೆ ಶೇಕಡಾ 35ರಷ್ಟು ಗಾಯಗಳಾಗಿದ್ದು, ಶ್ರೀನಿವಾಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಪ್ರಸಾದ್​, ಇಂದ್ರಜೀತ್​, ರಾಮನ್​ಗೆ ಎಜಿ ಆಸ್ಪತ್ರೆಗೆ ಮತ್ತು ಗಾಯಾಳುಗಳಾದ ಜೆರೋಮ್​, ಜಯರಾಮ್​, ಅವಿನಾಶ್, ಅಕ್ಷಯ್ ಹಾಗೂ​ ಮತ್ತೋರ್ವನಿಗೆ MRPL ಆಸ್ಪತ್ರೆಗೆ ದಾಖಲಿಸಲಾಗಿದೆ.

ನಡೆದಿದ್ದೇನು?

ಇಂದು ಮಧ್ಯಾಹ್ನ 12.15 ಗಂಟೆಗೆ ಎಂಆರ್‌ಪಿಎಲ್​​ನ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಟೆಸ್ಟಿಂಗ್​​ ಮಾಡುವ ಸಂದರ್ಭದಲ್ಲಿ ಭಾರೀ ಸ್ಫೋಟ ಸಂಭವಿಸಿದೆ. 11.30 ಗಂಟೆಗೆ ಶಿಫ್ಟ್ ಬದಲಾವಣೆ ಹಿನ್ನೆಲೆ ಘಟಕದಿಂದ ಕಾರ್ಮಿಕರು ಹೊರ ಹೋಗಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದೆ. ಆದರೆ 9 ಕಾರ್ಮಿಕರು ಗಾಯಗೊಂಡಿದ್ದಾರೆ. ಒಂದೆ ವೇಳೆ ಕಾರ್ಮಿಕರು ಒಳಗೆ ಇದ್ದಿದ್ದರೆ ಭಾರೀ ಸಾವು ನೋವು ಸಾಧ್ಯತೆ ಇತ್ತು ಎನ್ನಲಾಗಿದೆ.

ಜಿಲ್ಲಾಧಿಕಾರಿ ದರ್ಶನ್ ಹೇಳಿದ್ದಿಷ್ಟು 

ಸದ್ಯ ಸ್ಥಳಕ್ಕೆ ಐದು ಅಗ್ನಿಶಾಮಕ ದಳ ವಾಹನ, ಎಸ್​​​ಡಿಆರ್​ಎಫ್​ ಮತ್ತು ಆಂಬ್ಯುಲೆನ್ಸ್​​​ಗಳು ಬಂದಿದ್ದು, ಪೊಲೀಸ್ ಕಮಿಷನರ್ ಸುದೀರ್ ಕುಮಾರ್ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಓ ನರ್ವಡೆ ವಿನಾಯಕ್ ಕಾರ್ಬಾರಿ ಕೂಡ ಭೇಟಿ ನೀಡಿದ್ದಾರೆ. ಈ ವೇಳೆ ಮಂಗಳೂರು ಜಿಲ್ಲಾಧಿಕಾರಿ ದರ್ಶನ್ ಟಿವಿ9ಗೆ ಪ್ರತಿಕ್ರಿಯಿಸಿದ್ದು, ‘ಇಂದು ಮಧ್ಯಾಹ್ನ 12.15 ಗಂಟೆಗೆ ಎಂಆರ್‌ಪಿಎಲ್​​ನ ಕೋಕರ್​​ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಸ್ಫೋಟ ಸಂಭವಿಸಿದೆ. ಈ ಅವಘಡದಲ್ಲಿ 9 ಜನರಿಗೆ ಗಾಯಗಳಾಗಿವೆ. ಪ್ರಸ್ತುತ ಬೆಂಕಿ ನಿಯಂತ್ರಣಕ್ಕೆ ಬಂದಿದೆ’ ಎಂದು ಹೇಳಿದ್ದಾರೆ.

ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದ ಯುಟಿ ಖಾದರ್​​ 

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯುಟಿ ಖಾದರ್​ ಪ್ರತಿಕ್ರಿಯಿಸಿದ್ದು, ‘MRPLನಲ್ಲಿ ಟೆಸ್ಟಿಂಗ್​​ ಮಾಡುವ ಸಂದರ್ಭದಲ್ಲಿ ಸ್ಫೋಟ ಆಗಿದೆ. ಘಟನೆಯಲ್ಲಿ ಗಾಯಗೊಂಡಿರುವವರನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಎಲ್ಲವೂ ನಿಯಂತ್ರಣಕ್ಕೆ ಬಂದಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ’ ಎಂದು ಮಾಹಿತಿ ನೀಡಿದ್ದಾರೆ. ಇನ್ನು ಟಿವಿ9ಗೆ ಆಂಬ್ಯುಲೆನ್ಸ್ ಚಾಲಕ ನವಾಜ್ ಪ್ರತಿಕ್ರಿಯಿಸಿದ್ದು, ‘ಕಾರ್ಯಾಚರಣೆ ಮುಂದುವರೆದಿದೆ. ಘಟನಾ ಸ್ಥಳದಲ್ಲಿ ಇನ್ನು ಕೂಡ ಬೆಂಕಿ ಆರಿಲ್ಲ’ ಎಂದು  ಮಾಹಿತಿ ನೀಡಿದ್ದಾರೆ.

ಸ್ಫೋಟದ ಶಬ್ಧಕ್ಕೆ ಬೆಚ್ಚಿಬಿದ್ದ ಜನರು 

ಇನ್ನು ಭೀಕರ ಸ್ಫೋಟದಿಂದ ಪಣಂಬೂರು, ಕಾವೂರು, ಸುರತ್ಕಲ್, ಜೋಕಟ್ಟೆ ಭಾಗದ ಸುತ್ತಮುತ್ತಲಿನ ಕೆಲವೆಡೆ ಮನೆಗಳು ಕಂಪಿಸಿದೆ. ಸ್ಪೋಟದ ತೀರ್ವತೆ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಅಷ್ಟೇ ಅಲ್ಲದೆ ಭಾರೀ ಸ್ಟೋಟದ ಶಬ್ಧಕ್ಕೆ ಗ್ರಾಮದ ಜನರು ಬೆಚ್ಚಿಬಿದ್ದಾರೆ.

ವಿಮಾನನಿಲ್ದಾಣಕ್ಕೆ ಯಾವುದೇ ಹಾನಿ ಆಗಿಲ್ಲ

ಮಂಗಳೂರು ವಿಮಾನ ನಿಲ್ದಾಣದ ಮೂಲಸೌಕರ್ಯಕ್ಕೆ ಯಾವುದೇ ಹಾನಿಯಾಗಿಲ್ಲ ಹಾಗೂ ಇಲ್ಲಿನ ಗಾಜು ಒಡೆದಿಲ್ಲ. ಆದರೆ, MRPL ಸುತ್ತಮುತ್ತಲಿನ ಇತರ ಪ್ರದೇಶಗಳಂತೆ ಮಂಗಳೂರು ವಿಮಾನ ನಿಲ್ದಾಣದಲ್ಲೂ ಸ್ಫೋಟದ ಪರಿಣಾಮದ ಅನುಭವ ಆಗಿರುವುದು ಸತ್ಯ ಎಂದು ಏರ್‌ಪೋರ್ಟ್​ನಿಂದ ಮಾಹಿತಿ ನೀಡಲಾಗಿದೆ.

Mangaluru MRPL Blast: ಸ್ಫೋಟದ ತೀವ್ರತೆಗೆ ನಡುಗಿದ ಮನೆಗಳು! ಗ್ರಾಮ ಪಂಚಾಯತಿ ಗ್ರಂಥಾಲಯಕ್ಕೆ ಹಾನಿ!

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:24 pm, Wed, 30 September 26

ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Loading...
Unable to load recommendations.
Follow Us