AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರತ್ಕಲ್​ನಲ್ಲಿ ಭಾರೀ ಬೆಂಕಿ ಅವಘಡ: ಹೊತ್ತಿ ಉರಿದ ಸ್ಪೋರ್ಟ್ಸ್, ಹಾಸಿಗೆ ಮಾರಾಟ ಅಂಗಡಿ

ಸುರತ್ಕಲ್​ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಸ್ಪೋರ್ಟ್ಸ್ ಮತ್ತು ಹಾಸಿಗೆ ಮಾರಾಟ ಅಂಗಡಿ ಹೊತ್ತಿ ಉರಿದಿರುವಂತಹ ಘಟನೆ ನಡೆದಿದೆ.

ಸುರತ್ಕಲ್​ನಲ್ಲಿ ಭಾರೀ ಬೆಂಕಿ ಅವಘಡ: ಹೊತ್ತಿ ಉರಿದ ಸ್ಪೋರ್ಟ್ಸ್, ಹಾಸಿಗೆ ಮಾರಾಟ ಅಂಗಡಿ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: May 13, 2023 | 4:51 PM

Share

ಮಂಗಳೂರು: ಸುರತ್ಕಲ್​ನಲ್ಲಿ ಭಾರೀ ಬೆಂಕಿ ಅವಘಡ (Fire Accident) ಸಂಭವಿಸಿದ್ದು, ಸ್ಪೋರ್ಟ್ಸ್ ಮತ್ತು ಹಾಸಿಗೆ ಮಾರಾಟ ಅಂಗಡಿ ಹೊತ್ತಿ ಉರಿದಿರುವಂತಹ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್​​ನಿಂದ ಅವಘಡ ಸಂಭವಿಸಿದೆ ಎನ್ನಲಾಗುತ್ತಿದ್ದು, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಎರಡು ಅಗ್ನಿಶಾಮಕ ದಳ ಸಿಬ್ಬಂದಿಗಳಿಂದ ಬೆಂಕಿ‌ನಂದಿಸಲಾಗಿದೆ. ಮತ ಎಣಿಕಾ ಕೇಂದ್ರದಿಂದ ಒಂದು ಕಿಲೋಮೀಟರ್ ಅಂತರದಲ್ಲಿ ಘಟನೆ ಸಂಭವಿಸಿದೆ.

ಗುಜರಿ ಗೋಡೌನ್‌ಗಳಲ್ಲಿ  ಅಗ್ನಿ ಅವಘಡ

ಬೆಂಗಳೂರು: ತಡರಾತ್ರಿ 5 ರಿಂದ 6 ಗುಜರಿ ಗೋಡೌನ್‌ಗಳಲ್ಲಿ  ಅಗ್ನಿ ಅವಘಡ ಸಂಭವಿಸಿ ಹಲವು ವಾಹನಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ನಗರದ ನಾಯಂಡಹಳ್ಳಿ ಬಳಿಯ ಪ್ರಮೋದ್ ಲೇಔಟ್‌ನಲ್ಲಿ ನಡೆದಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ 10 ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಆಗಮಿಸಿದ್ದು, ಬೆಂಕಿಯನ್ನು ನಂದಿಸಿಸುವಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ಮೊತ್ತೊಂದು ಅಗ್ನಿ ಅವಘಡ: ಐದಾರು ಗುಜರಿ ಗೋಡೌನ್‌ಗಳಿಗೆ ಹೊತ್ತಿಕೊಂಡ ಬೆಂಕಿ

ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸುಮಾರು 3-4 ಎಕರೆ ಜಾಗಕ್ಕೆ ಬೆಂಕಿ ವ್ಯಾಪಿಸಿತ್ತು. ತಡರಾತ್ರಿ ಗೋಡೌನ್​ಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ, ಪಕ್ಕದಲ್ಲೆ ಕಾರ್ಯನಿರ್ವಹಿಸುತ್ತಿದ್ದ ಮಾರ್ಷಲ್​ಗಳು ಸ್ಥಳಕ್ಕೆ ದೌಡಾಯಿಸಿ, ಗೌಡೌನಲ್ಲಿ ಮಲಗಿದ್ದ ಹಲವರನ್ನು ಎಬ್ಬಿಸಿ ಆಚೆ ಕಳುಹಿಸಿದ್ದಾರೆ. ಇದರಿಂದ ಭಾರಿ ಅನಾಹುತ ತಪ್ಪಿದೆ.

ಗೋಧಿ ಜಮೀನಿಗೆ ಬೆಂಕಿ, 1.50 ಲಕ್ಷ ರೂ. ಮೌಲ್ಯದ ಗೋಧಿ ಭಸ್ಮ

ಗದಗ: ಗೋಧಿ ಜಮೀನಿಗೆ ಬೆಂಕಿ ಬಿದ್ದ ಪರಿಣಾಮ ಕಟಾವಿಗೆ ಬಂದಿದ್ದ 3 ಎಕರೆ ಗೋಧಿ ಭಸ್ಮವಾಗಿರುವ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ರಡ್ಡೆರನಾಗನೂರ ಗ್ರಾಮದಲ್ಲಿ ನಡೆದಿದೆ. ರೈತ ವೆಂಕನಗೌಡ್ರ ಗದ್ದಿಗೌಡ್ರ ಎಂಬುವರಿಗೆ ಸೇರಿದ 3 ಎಕರೆ ಜಮೀನಿಗೆ ವಿದ್ಯುತ್ ಶಾಟ್ ಸರ್ಕಿಟ್​​ನಿಂದ ಬೆಂಕಿ ತಗುಲಿರುವ ಆರೋಪ ಕೇಳಿ ಬಂದಿದೆ. ಬೆಂಕಿ ನಂದಿಸಲು ಎಷ್ಟೇ ಪ್ರಯತ್ನ ಪಟ್ಟರು ಪ್ರಯೋಜನವಾಗಲಿಲ್ಲ. ಇದರಿಂದ ಸುಮಾರು 1.50 ಲಕ್ಷ ರೂ. ಮೌಲ್ಯದ 40 ಕ್ವಿಂಟಾಲ್ ನಷ್ಟು ಗೋಧಿ ಸುಟ್ಟು ಹೋಗಿದೆ. ರೈತ ಕಂಗಾಲಾಗಿದ್ದು, ಪರಿಹಾರಕ್ಕಾಗಿ ಸರ್ಕಾರಕ್ಕೆ ಒತ್ತಾಯಿಸಿದ್ದಾನೆ. ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಚಾರ್ಮಾಡಿಘಾಟ್​ನ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ಅಪಾರ ಪ್ರಮಾಣದ ವನ್ಯಸಂಪತ್ತು ಬೆಂಕಿಗಾಹುತಿ

ಹೆಚ್​.ಡಿ ಕೋಟೆ ಮೈದಾನದಲ್ಲಿ ಆಕಸ್ಮಿಕ ಬೆಂಕಿ

ಮೈಸೂರು: ಜಿಲ್ಲೆಯ ಹೆಚ್​.ಡಿ ಕೋಟೆ ಮೈದಾನದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿರುವಂತಹ ಘಟನೆ ನಡೆದಿತ್ತು. ಕಿಡಿಗೇಡಿಗಳು ಸಿಗರೇಟು ಸೇದುವ ವೇಳೆ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿತ್ತು. ಪಕ್ಕದಲ್ಲೇ ಇದ್ದ ವಿದ್ಯುತ್ ಘಟಕ, ವಾಲ್ಮೀಕಿ ಭವನ ಮತ್ತು ಜೆಎಸ್​.ಎಸ್ ಮಂಗಳ ಮಂಟಪದ ಆವರಣಕ್ಕೆ ಬೆಂಕಿ ವ್ಯಾಪಿಸುವ ಭೀತಿ ಎದುರಾಗಿತ್ತು. ಸಮಯಕ್ಕೆ ಸರಿಯಾಗಿ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ‌ ನಂದಿಸಿದ್ದು, ಭಾರಿ ಅನಾಹುತ ತಪ್ಪಿದೆ. ಹೆಚ್​​.ಡಿ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ