Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ದಪ್ಪ ಇದ್ದೀನಿ, ಚನ್ನಾಗಿ ಕಾಣುತ್ತಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಎಂಬಿಬಿಎಸ್ ವಿದ್ಯಾರ್ಥಿನಿ

ದಪ್ಪ ಇದ್ದೀನಿ, ನೋಡೋಕೆ ಚನ್ನಾಗಿ ಕಣ್ತಾ ಇಲ್ಲ ಎಂದು ಮನನೊಂದು ಹಲವು ಪುಟಗಳ ಡೆತ್ ನೋಟ್ ಬರೆದು ಇಂದು ಮುಂಜಾನೆ 3 ಗಂಟೆಗೆ ಪ್ರಕೃತಿ ಶೆಟ್ಟಿ(20) ಎಂಬ ಎಂಬಿಬಿಎಸ್ ವಿದ್ಯಾರ್ಥಿನಿ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೀವನದಲ್ಲಿ ಹತಾಶೆಯಿಂದ ಆತ್ಮಹತ್ಯೆ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ. ಕದ್ರಿ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.

ಮಂಗಳೂರು: ದಪ್ಪ ಇದ್ದೀನಿ, ಚನ್ನಾಗಿ ಕಾಣುತ್ತಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಎಂಬಿಬಿಎಸ್ ವಿದ್ಯಾರ್ಥಿನಿ
ಪ್ರಕೃತಿ ಶೆಟ್ಟಿ
Follow us
TV9 Web
| Updated By: ಆಯೇಷಾ ಬಾನು

Updated on:Nov 13, 2023 | 3:46 PM

ಮಂಗಳೂರು, ನ.13: ದಪ್ಪ ಇದ್ದೀನಿ, ನೋಡೋಕೆ ಚನ್ನಾಗಿ ಕಾಣ್ತಿಲ್ಲ ಎಂದು ಮನನೊಂದ ಎಂಬಿಬಿಎಸ್ ವಿದ್ಯಾರ್ಥಿನಿ (MBBS Student) ಹಾಸ್ಟೆಲ್‌ನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ‌ಎ.ಜೆ.ಮೆಡಿಕಲ್ ಕಾಲೇಜು ಆಸ್ಪತ್ರೆಯ ಹಾಸ್ಟೆಲ್‌ನಲ್ಲಿ ನಡೆದಿದೆ. ಇಂದು ಮುಂಜಾನೆ 3 ಗಂಟೆಗೆ ಪ್ರಕೃತಿ ಶೆಟ್ಟಿ(20) ಎಂಬ ಎಂಬಿಬಿಎಸ್ ವಿದ್ಯಾರ್ಥಿನಿ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೀವನದಲ್ಲಿ ಹತಾಶೆಯಿಂದ ಆತ್ಮಹತ್ಯೆ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ. ಕದ್ರಿ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.

ದಪ್ಪ ಇದ್ದೀನಿ, ನೋಡೋಕೆ ಚನ್ನಾಗಿ ಕಣ್ತಾ ಇಲ್ಲ ಎಂದು ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಾನು ತುಂಬಾ ದಪ್ಪವಾಗಿದ್ದೀನಿ. ಎಂಬಿಬಿಎಸ್ ಮುಗಿಸಬೇಕು ಅಂತ ತುಂಬಾ ಆಸೆ ಇತ್ತು. ಆದ್ರೆ ನನ್ನ ಸೌಂದರ್ಯಕ್ಕೆ ದಪ್ಪ ಅನ್ನೋದು ಅಡ್ಡಿಯಾಗಿದೆ. ತೂಕ ಇಳಿಸಲು ಸಾಕಷ್ಟು ಪ್ರಯತ್ನ ಪಟ್ಟರೂ ಆಗಲಿಲ್ಲ. ಇದ್ರಿಂದ ಜೀವನದಲ್ಲಿ ಜಿಗುಪ್ಸೆಗೊಂಡಿದ್ದೇನೆ‌ ಎಂದು ಪ್ರಕೃತಿ ಅವರು ತಮ್ಮ ಡೆತ್ ನೋಟ್​ನಲ್ಲಿ ಬರೆದಿದ್ದಾರೆ.

ವೈದ್ಯಕೀಯ ಹಿನ್ನೆಲೆ ಹೊಂದಿರುವ ಪ್ರಕೃತಿ

ಇನ್ನು ಮೃತ ಪ್ರಕೃತಿ ಶೆಟ್ಟಿ, ವೈದ್ಯಕೀಯ ಕುಟುಂಬದಿಂದ ಬಂದಿದ್ದವರು. ಇವರ ತಂದೆ ಅಥಣಿಯ ಡಾ‌.ಪ್ರಶಾಂತ್ ಶೆಟ್ಟಿ. ಪ್ರಕೃತಿ, ಪಿಯುಸಿಯನ್ನು ಮಂಗಳೂರಿ‌ನ ಎಕ್ಸ್ ಪರ್ಟ್ ಕಾಲೇಜಿನಲ್ಲಿ ಮುಗಿಸಿದ್ದು, ಎಂಬಿಬಿಎಸ್ ಗೆ ಎ.ಜೆ ಮೆಡಿಕಲ್ ಕಾಲೇಜಿಗೆ ಸೇರಿಕೊಂಡಿದ್ದರು. ಹಾಸ್ಟೆಲ್ ನ ಒಂದನೇ ಮಹಡಿಯಲ್ಲಿ ಪ್ರಕೃತಿ ಶೆಟ್ಟಿ ರೂಂ ಇತ್ತು. ಆರನೇ ಮಹಡಿಯಲ್ಲಿ ತನ್ನ ಸ್ನೇಹಿತರ ರೂಂಗೆ ಎಂದು ಹೋಗಿದ್ದು ತನ್ನ ಮೊಬೈಲ್ ಮತ್ತು ಚಪ್ಪಲಿಯನ್ನು ಸ್ನೇಹಿತೆಯರ ರೂಂನಲ್ಲಿ ಬಿಟ್ಟು ಮಧ್ಯರಾತ್ರಿ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದವರ ಮೇಲೆ ಸಿಸಿಬಿ ದಾಳಿ; ಭರ್ಜರಿ ಬೇಟೆ

ನೆಲಮಂಗಲದಲ್ಲಿ ಭೀಕರ ಅಪಘಾತ

ನೆಲಮಂಗಲದಲ್ಲಿ ಇವತ್ತು ಭೀಕರ ಅಪಘಾತ ಸಂಭವಿಸಿದೆ. ರಸ್ತೆ ಕ್ರಾಸ್ ಮಾಡ್ತಿದ್ದ ಐಷಾರಾಮಿ ಕಾರಿಗೆ ಬಸ್​ವೊಂದು ಡಿಕ್ಕಿ ಹೊಡೆದಿದೆ. ರಸ್ತೆ ಕ್ರಾಸ್ ಮಾಡ್ತಿದ್ದ ಕಾರಿಗೆ ವೇಗವಾಗಿ ನುಗ್ಗಿದ KSRTC ಬಸ್​, ಡಿಕ್ಕಿ ಹೊಡೆದಿದೆ. ಕ್ಷಣಮಾತ್ರದಲ್ಲಿ ಕಾರು ನಜ್ಜುಗುಜ್ಜಾದ್ರೆ, ಬಸ್ ಹೋಗಿ ಡಿವೈಡರ್​​ಗೆ ಡಿಕ್ಕಿ ಹೊಡೆದಿದೆ.

ಇಂದು ಬೆಳಗ್ಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೇಗೂರಿನ ಪಾಕಶಾಲ ಹೋಟೆಲ್ ಮುಂದೆ KSRTC ಬಸ್ ಮತ್ತು ಬೆನ್ಜ್​​​ ಕಾರು ನಡುವೆ ಡಿಕ್ಕಿಯಾಗಿದೆ. ಪೀಣ್ಯಾದ HHV ಕಂಪನಿ ಮಾಲೀಕ ಶ್ರೀಧರ್ ಹಾಗೂ ಪತ್ನಿ ರಾಜೇಶ್ವರಿ ಜೊತೆ ಕಾರಿನಲ್ಲಿ ಬರ್ತಿದ್ರು. ಈ ವೇಳೆ ರಸ್ತೆ ದಾಡುತ್ತಿದ್ದಾಗ ವೇಗವಾಗಿ ಬಂದ ಬಸ್​, ಕಾರಿಗೆ ಡಿಕ್ಕಿ ಹೊಡೆದಿದೆ. ನಂತ್ರ ಡಿವೈಡರ್​​ಹೆ ಹೋಗಿ ಬಸ್ ಗುದ್ದಿದೆ. ಅತ್ತ ಬಸ್​​​ ಡಿಕ್ಕಿಯಾಗಿದ್ರಿಂದ ಕಾರು ರಸ್ತೆ ಪಕ್ಕಕ್ಕೆ ಬಿದ್ದಿದೆ.. ಅಪಘಾತದ ರಭಸಕ್ಕೆ ಕಾರಿನಲ್ಲಿ ಏರ್​ಬ್ಯಾಗ್ ಓಪನ್ ಆಗಿದೆ. ಅದೃಷ್ಟವಶಾತ್ ಕಾರಿನಲ್ಲಿ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:59 pm, Mon, 13 November 23

ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್