ಮಂಗಳೂರಿನಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿ ನೇಣಿಗೆ ಶರಣು
ಮೃತಳು ಮೂಲತಃ ಬೀದರ್ ನಿವಾಸಿಯಾಗಿದ್ದು, ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜಿನ ಎಂ.ಬಿ.ಬಿ.ಎಸ್ ವ್ಯಾಸಂಗ ಮಾಡುತ್ತಿದ್ದಳು. ಪ್ರೇಮ ಪ್ರಕರಣ ಸಂಬಂಧ ವಿದ್ಯಾರ್ಥಿನಿ ಆತ್ಮಹತ್ಯೆ ಮಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಮಂಗಳೂರು: ಮಂಗಳೂರಿನಲ್ಲಿ ಎಂ.ಬಿ.ಬಿ.ಎಸ್ ವಿದ್ಯಾರ್ಥಿನಿ ವೈಶಾಲಿ ಗಾಯಕ್ ವಾಡ್ (25) ನೇಣಿಗೆ ಶರಣಾಗಿದ್ದಾಳೆ. ಮಂಗಳೂರು ಹೊರವಲಯದ ಕುತ್ತಾರು ಎಂಬಲ್ಲಿನ ಸಿಲಿಕಾನಿಯಾ ಅಪಾರ್ಟ್‌ಮೆಂಟ್ ನಲ್ಲಿ ಘಟನೆ ನಡೆದಿದೆ. ಮೃತಳು ಮೂಲತಃ ಬೀದರ್ ನಿವಾಸಿಯಾಗಿದ್ದು, ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜಿನ ಎಂ.ಬಿ.ಬಿ.ಎಸ್ ವ್ಯಾಸಂಗ ಮಾಡುತ್ತಿದ್ದಳು. ಪ್ರೇಮ ಪ್ರಕರಣ ಸಂಬಂಧ ವಿದ್ಯಾರ್ಥಿನಿ ಆತ್ಮಹತ್ಯೆ ಮಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆ ಹಿನ್ನೆಲೆ ಆಕೆಯ ಗೆಳೆಯ ಕೇರಳದ ಪಾಲಕ್ಕಾಡ್ ನಿವಾಸಿ ಸುಜೀಶ್(24) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಾಲಿಕೆ ಆಯುಕ್ತ, ಅಧಿಕಾರಿಗಳು ಎಂದು ಹೇಳಿದರೂ ಹಲ್ಲೆ ಮಾಡಿದ ರೌಡಿಶೀಟರ್ ಮತ್ತವನ ಸಹಚರರು! ಕಾರಣವೇನು? ವಿಜಯಪುರ: ಪಾಲಿಕೆ ಆಯುಕ್ತರ ಮೇಲೆ ರೌಡಿಶೀಟರ್ (Rowdy sheeter) ಮತ್ತು ಸಂಗಡಿಗರು ಹಲ್ಲೆ ಮಾಡಿದ ಘಟನೆ ವಿಜಯಪುರ ನಗರದ ರಿಂಗ್ ರೋಡ್‌ನಲ್ಲಿ ನಡೆದಿದೆ. ಆಯುಕ್ತ ವಿಜಯ್ ಮೆಕ್ಕಳಕಿ ಮತ್ತು ಇಬ್ಬರು ಅಧಿಕಾರಿಗಳ ಮೇಲೆ ರೌಡಿಶೀಟರ್ ಸಮರ್ಥ್ ಸಿಂದಗಿ, ಸುರೇಶ್, ಮತ್ತಿಬ್ಬರು ಸೇರಿ ಹಲ್ಲೆ ಮಾಡಿದ್ದಾರೆ. ರಿಂಗ್ ರೋಡ್‌ನಲ್ಲಿ ತೆಗ್ಗು ಗುಂಡಿಗಳ ಪರಿಶೀಲನೆ ಮಾಡುತ್ತಿದ್ದ ಅಧಿಕಾರಿಗಳ ಕಾರಿಗೆ ರೌಡಿಶೀಟರ್ ಕಾರು ಮತ್ತು ಬೈಕ್ ಡಿಕ್ಕಿಯಾಗಿದೆ. ಇದನ್ನು ಪ್ರಶ್ನಿಸಿದ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ್ದಾರೆ. ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಪಾಲಿಕೆ ಆಯುಕ್ತ ಹಾಗೂ ಆಧಿಕಾರಿಗಳು ಎಂದು ಹೇಳಿದರೂ ಹಲ್ಲೆ ಮಾಡಿದ ನಾಲ್ವರು ಯುವಕರ ವಿರುದ್ಧ ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯ್ ಮೆಕ್ಕಳಕಿ ದೂರು ದಾಖಲಿಸಿದ್ದಾರೆ. ಸದ್ಯ ಪ್ರಮುಖ ಆರೋಪಿ ರೌಡಿಶೀಟರ್ ಸಮರ್ಥ್ ಸಿಂದಗಿಯನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ ಪರಾರಿಯಾದ ಮೂವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ
ಚಲಿಸುವ ರೈಲಿನಿಂದ ಪ್ಲಾಟ್ಫಾರಂನಲ್ಲಿ ಇಳಿಯುವ ಯತ್ನ, ಬಿಬಿಎಂಪಿ ಎಂಜಿನಿಯರ್ ಸ್ಥಳದಲ್ಲೇ ಸಾವು ಹುಬ್ಬಳ್ಳಿ: ಚಲಿಸುತ್ತಿರುವ ರೈಲಿನಿಂದ ಇಳಿಯುವಾಗ ಬಿದ್ದು, ಇಂಜಿನಿಯರ್ ಸಾವಿಗೀಡಾದ ದುರ್ಘಟನೆ ಹುಬ್ಬಳ್ಳಿಯ ರೇಲ್ವೆ ನಿಲ್ದಾಣದಲ್ಲಿ ನಿನ್ನೆ ತಡ ರಾತ್ರಿ ನಡೆದಿದೆ. ಮೃತ ದುರ್ದೈವಿಯನ್ನು ರಂಗರಾಜು ಎಸ್.ಎ (59) ಎಂದು ಗುರುತಿಸಲಾಗಿದೆ. ಬೆಂಗಳೂರಿಗೆ ಹೋಗಬೇಕಾದ ರೈಲು ಹತ್ತುವ ಬದಲು ಬೆಳಗಾವಿಯ ರೈಲು (Train) ಹತ್ತಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಸೂಪರಿಟೆಂಡೆಂಟ್ ಇಂಜಿನಿಯರ್ ತಕ್ಷಣವೇ ರೈಲಿನಿಂದ ಇಳಿಯಲು ಹೋಗಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಬಿಬಿಎಂಪಿಯ ಕೆಆರ್ಐಡಿಎಲ್ ವಿಭಾಗದಲ್ಲಿ ಸೂಪರಿಂಟೆಂಡೆಂಟ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ರಂಗರಾಜು ಎಸ್.ಎ ಸಾವನ್ನಪ್ಪಿದ್ದಾರೆ. ಚಲಿಸುತ್ತಿರುವಾಗ ರೈಲಿನಿಂದ ಇಳಿಯುವ ಸಂದರ್ಭದಲ್ಲಿ ಪ್ಲಾಟ್ಫಾರಂನಲ್ಲಿ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ರಂಗರಾಜು, ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಹುಬ್ಬಳ್ಳಿಯ ರೈಲ್ವೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
Published On - 7:26 am, Mon, 20 December 21