ಮಂಗಳೂರು: ಮೂವರು ಡ್ರಗ್ಸ್ ಪೆಡ್ಲರ್​​ಗಳ ಖೆಡ್ಡಾಕ್ಕೆ ಕೆಡವಿದ ಪೊಲೀಸರು, 11.90 ಲಕ್ಷ ರೂ. ಮೌಲ್ಯದ MDMA ವಶ

ಮಂಗಳೂರಿನಲ್ಲಿ ಡ್ರಗ್ಸ್ ಜಾಲದ ವಿರುದ್ಧ ಸಿಸಿಬಿ ಪೊಲೀಸ್ ಕಾರ್ಯಾಚರಣೆ ಮುಂದುವರಿದಿದ್ದು, ಬೆಂಗಳೂರಿನಿಂದ ಎಂಡಿಎಂಎ ತಂದು ಮಾರಾಟ ಮಾಡಲು ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ತಲಪಾಡಿ ಪ್ರದೇಶದಲ್ಲಿ ಡ್ರಗ್ಸ್ ಮಾರಾಟಕ್ಕೆ ಯತ್ನಿಸಲಾಗುತ್ತಿತ್ತು ಎಂಬುದು ತಿಳಿದುಬಂದಿದ್ದು, ಬಂಧಿತರಿಂದ 1.90 ಲಕ್ಷ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ.

ಮಂಗಳೂರು: ಮೂವರು ಡ್ರಗ್ಸ್ ಪೆಡ್ಲರ್​​ಗಳ ಖೆಡ್ಡಾಕ್ಕೆ ಕೆಡವಿದ ಪೊಲೀಸರು, 11.90 ಲಕ್ಷ ರೂ. ಮೌಲ್ಯದ MDMA ವಶ
ಬಂಧಿತ ಡ್ರಗ್ ಪೆಡ್ಲರ್​ಗಳು
Image Credit source: tv9
Edited By:

Updated on: Feb 14, 2026 | 6:55 AM

ಮಂಗಳೂರು, ಫೆಬ್ರವರಿ 14: ಮಂಗಳೂರು (Mangalore)  ನಗರದಲ್ಲಿ ಮಾದಕ ವಸ್ತುಗಳ ಜಾಲದ (Drugs Mafia) ವಿರುದ್ಧ ಕಠಿಣ ಕ್ರಮ ಮುಂದುವರೆದಿದ್ದು, ಮಂಗಳೂರು ಸಿಸಿಬಿ ಪೊಲೀಸರು ಮತ್ತೊಮ್ಮೆ ದೊಡ್ಡ ಕಾರ್ಯಾಚರಣೆ ನಡೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮಂಗಳೂರು ತಾಲೂಕಿನ ತಲಪಾಡಿ ಭಾಗದಲ್ಲಿ ದಾಳಿ ನಡೆಸಿ MDMA ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಉಳ್ಳಾಲದ ಮುಸ್ತಫಾ ಸೀದಿಯಬ್ಬ (34), ಮೈಯದ್ದಿ (28) ಮತ್ತು ಮೊಹಮ್ಮದ್ ಶಿಫಾನ್ (28) ಎಂದು ಗುರುತಿಸಲಾಗಿದೆ.

ಇವರು ಬೆಂಗಳೂರಿನಿಂದ ಎಂಡಿಎಂಎ ತಂದು ಮಂಗಳೂರಿನ ತಲಪಾಡಿ ಪ್ರದೇಶದಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಬಂಧಿತರಿಂದ ಸುಮಾರು 11.90 ಲಕ್ಷ ರೂ. ಮೌಲ್ಯದ 118.13 ಗ್ರಾಂ MDMA ವಶಪಡಿಸಿಕೊಳ್ಳಲಾಗಿದೆ.

ಸಿಸಿಬಿ ಎಸಿಪಿ ಮನೋಜ್ ಕುಮಾರ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಈ ಡ್ರಗ್ಸ್ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಪೊಲೀಸರು ವಿಶೇಷ ತಂಡ ರಚಿಸಿ ಶೋಧ ಮುಂದುವರೆಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಹೆಚ್ಚುತ್ತಿರುವುದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಡಿಸೆಂಬರ್‌ನಲ್ಲಿ ಮಂಗಳೂರಿನ ಮುಲ್ಕಿ ಬಳಿ 50 ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ ವಶಪಡಿಸಿಕೊಂಡು ನಾಲ್ವರನ್ನು ಸೆರೆಹಿಡಿಯಲಾಗಿತ್ತು. ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಮಾರಾಟಕ್ಕೆಂದು ಒಡಿಶಾದಿಂದ ತಂದಿದ್ದ 21 ಕೆಜಿ ಗಾಂಜಾವನ್ನು ಸುರತ್ಕಲ್ ಪೊಲೀಸರು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸುವ ಮೂಲಕ ದೊಡ್ಡ ಜಾಲವನ್ನು ಭೇದಿಸಿದ್ದರು.

ಇದನ್ನೂ ಓದಿ: ಕ್ಯಾಂಡಿ ಪ್ಯಾಕೆಟ್​ಗಳಲ್ಲಿ ಬ್ಯಾಂಕಾಕ್​ನಿಂದ ಬರುತ್ತಿತ್ತು ಡ್ರಗ್ಸ್! ಬೆಂಗಳೂರು ಏರ್​ಪೋರ್ಟಲ್ಲಿ ಇಬ್ಬರ ಬಂಧನ

ಅತ್ತ ಬೆಂಗಳೂರಿನಲ್ಲಿ ಸಹ ಜನವರಿಯಲ್ಲಿ ಪೊಲೀಸರು ಸುಮಾರು 4 ಕೋಟಿ ರೂಪಾಯಿ ಮೌಲ್ಯದ 4 ಕೆಜಿ ಎಂಡಿಎಂಎ ಪೂರೈಸುತ್ತಿದ್ದ ಉಗಾಂಡ ಮೂಲದ ಮಹಿಳೆಯನ್ನು ಬಂಧಿಸಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Loading...
Unable to load recommendations.
Follow Us