ಡೀಮ್ಡ್​​ ಫಾರೆಸ್ಟ್​ ನಿಯಮ ಸಡಿಲಿಕೆ ಮಾಡಿ: ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಬಡವರಿಗೋಸ್ಕರ ಡೀಮ್ಡ್ ಫಾರೆಸ್ಟ್ ನಿಯಮ ಸಡಿಲಿಕೆ ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಅಲ್ಲದೆ, ಪಶು ಸಂಜೀವಿನಿ ಅಂಬ್ಯುಲೆನ್ಸ್​​ಗಳಿಗೆ ಚಾಲಕರನ್ನು ನೇಮಿಸದ್ದಕ್ಕೆ ಅಧಿಕಾರಿಗಳನ್ನು ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ತರಾಟೆಗೆ ತೆಗೆದುಕೊಂಡರು.

ಡೀಮ್ಡ್​​ ಫಾರೆಸ್ಟ್​ ನಿಯಮ ಸಡಿಲಿಕೆ ಮಾಡಿ: ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ
ದಿನೇಶ್ ಗುಂಡೂರಾವ್ ಮತ್ತು ಯುಟಿ ಖಾದರ್
Follow us
Rakesh Nayak Manchi
|

Updated on: Jun 23, 2023 | 2:22 PM

ಮಂಗಳೂರು: ಬಡವರಿಗೋಸ್ಕರ ಡೀಮ್ಡ್​​ ಫಾರೆಸ್ಟ್​ (Deemed forest) ನಿಯಮ ಸಡಿಲಿಕೆ ಮಾಡುವಂತೆ ತಹಶೀಲ್ದಾರ್​​ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ದಕ್ಷಿಣ ಕನ್ನಡ (Dakshina Kannada) ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಸೂಚಿಸಿದ್ದಾರೆ. ಜಿಲ್ಲಾಪಂಚಾಯತ್​ನ ನೇತ್ರಾವತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸೂಚನೆ ನೀಡಿದ ಅವರು, 94 ಸಿ ಅರ್ಜಿ ವಿಲೇವಾರಿ ವಿಚಾರದಲ್ಲಿ ನಿಯಮ ಸಡಿಲಿಕೆ ಮಾಡುವಂತೆ ಸೂಚಿಸಿದರು.

ಅಧಿಕಾರಿಗಳು ಮನಸ್ಸು ಮಾಡಿದರೆ ನಿಯಮ ಸಡಿಲಿಕೆ ಮಾಡಬಹುದು. ಅರಣ್ಯ ಮತ್ತು ಕಂದಾಯ ಅಧಿಕಾರಿಗಳು ಬಡವರತ್ತ ನೋಡಿ. ಆದಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಲು ಗಮನ ಕೊಡಿ. ಅಧಿಕಾರಿಗಳು ನಿಯಮ ಸಡಿಲಿಸಿದರೆ ಸುಪ್ರೀಂ ಕೋರ್ಟ್ ಕೂಡ ಒಪ್ಪುತ್ತದೆ ಎಂದು ಸಲಹೆ ನೀಡಿದರು.

ಪಶುಪಾಲನಾ ಇಲಾಖೆ ಅಧಿಕಾರಿಗೆ ಸ್ಪೀಕರ್ ತರಾಟೆ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಗೋ ಶಾಲೆ ವಿಚಾರದಲ್ಲಿ ಪಶುಪಾಲನಾ ಇಲಾಖೆ ಅಧಿಕಾರಿಗೆ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು. ಪಶು ಸಂಜೀವಿನಿ ಅಂಬ್ಯುಲೆನ್ಸ್ ಇದ್ದರೂ ಚಾಲಕ ಇಲ್ಲ. ಚಾಲಕರನ್ನು ಯಾಕೆ ನೇಮಿಸಿಲ್ಲ ಅಂತ ಪಶುಪಾಲನ ಇಲಾಖೆ ಉಪನಿರ್ದೇಶಕರನ್ನು ತರಾಟೆ ತೆಗೆದುಕೊಂಡರು.

ಇದನ್ನೂ ಓದಿ: ಮಂಗಳೂರು: ನಾಗರ ಹಾವಿನ ಹೊಟ್ಟೆಯಿಂದ ಪ್ಲಾಸ್ಟಿಕ್ ಡಬ್ಬಿ ಹೊರತೆಗೆದ ಪಶುವೈದ್ಯರ ತಂಡ

ಪ್ರತೀ ಗೋವಿಗೆ ಸರ್ಕಾರದಿಂದ ಎಷ್ಟು ಹಣ ಬರುತ್ತೆ ಅಂತ ಲೆಕ್ಕ ಕೇಳಿದ ಖಾದರ್, ಎಷ್ಟು ಹಣ ಬರಲು ಬಾಕಿಯಿದೆ ಅಂತ ಪ್ರಶ್ನಿಸಿದ್ದಾರೆ. ಆದರೆ ‌ಲೆಕ್ಕ ಕೊಡಲು ತಡವರಿಸಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸ್ಪೀಕರ್, ಒಬ್ಬ ಜಿಲ್ಲಾ ಮಟ್ಟದ ಅಧಿಕಾರಿ ಬಳಿ ಲೆಕ್ಕ ಇಲ್ವಾ? ಕೊಟ್ಟ ಹಣವನ್ನ ಲೂಟಿ ಮಾಡುತ್ತೀರಾ? ಅದಕ್ಕೆ ಲೆಕ್ಕ ಇಲ್ವಾ ಅಂತ ಆಕ್ರೋಶ ಹೊರಹಾಕಿದರು.

ಇಲ್ಲಿ ನಿಮ್ಮನ್ನ ಕೇಳಲು ಜನ ಇಲ್ವಾ? ಎಲ್ಲವೂ ಸರಿಯಿದೆಯಾ? ಅಂಬ್ಯುಲೆನ್ಸ್ ಏಜೆನ್ಸಿಯವನು ಅದನ್ನ ಓಡಿಸುತ್ತಾನಾ ಅಂತ ನೀವು ನೋಡುವುದಿಲ್ಲವೇ? ಅವನಿಗೆ ಸುಮ್ಮನೆ ಬಿಲ್ ಮಾಡಿ ಕೊಡುತ್ತೀರಾ? ಇಲ್ಲಿ ಕೇಳುವವರೇ ಇಲ್ವಾ? ಎಲ್ಲದರ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಮಗ್ರ ವರದಿ ಕೊಡಿ. ಆ ವರದಿ ಬಗ್ಗೆ ಸದನದಲ್ಲಿ ಚರ್ಚೆ ನಡೆಸಲಾಗುವುದು. ಮನುಷ್ಯನಿಗೆ ಎಷ್ಟು ಬದುಕಲು ಹಕ್ಕಿದ್ಯೋ ಅಷ್ಟೇ ಪ್ರಾಣಿಗಳಿಗೂ ಇದೆ ಎಂದರು. ಖಾದರ್ ಮಾತಿಗೆ ದಿನೇಶ್ ಗುಂಡೂರಾವ್ ಕೂಡ ದನಿಗೂಡಿಸಿದರು.

ಶಿಷ್ಟಾಚಾರ ಉಲ್ಲಂಘನೆ ವಿರುದ್ದ ಬಿಜೆಪಿ ಶಾಸಕರು ಗರಂ

ಹಾಲಿ ಶಾಸಕರು ಇರುವಾಗ ಮಾಜಿ ಶಾಸಕರು ವೇದಿಕೆ ಮೇಲೆ ಕುಳಿತುಕೊಂಡು ಸಭೆ ಉದ್ಘಾಟಿಸುವುದು ಎಷ್ಟು ಸರಿ ಅಂತಾ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಬಿಜೆಪಿ ಶಾಸಕರು ಗರಂ ಆಗಿದ್ದಾರೆ. ನಾನು ಶಾಸಕ ಇದ್ದರೂ ಕೆಲವು ಮಾಜಿ ಶಾಸಕರು ಅಧಿಕಾರಿಗಳಿಗೆ ಮುಜುಗರ ಆಗುವ ರೀತಿ ಮಾಡುತ್ತಾರೆ. ಇದರಿಂದ ಅಧಿಕಾರಿಗಳಿಗೆ ‌ಕೆಲಸ ಮಾಡಲು‌ ಆಗದ ಸ್ಥಿತಿ ಇದೆ. ಉಸ್ತುವಾರಿ ಸಚಿವರು ಇಂತಹ ವಿಚಾರಗಳನ್ನು ಕೂಡಲೇ ನಿಲ್ಲಿಸಬೇಕು ಅಂತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಿಡಿಕಾರಿದ್ದಾರೆ.

ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರು ಕೂಡ ಅಸಮಾಧಾನ ಹೊರಹಾಕಿದ್ದು, ಸಭೆಗಳಿಗೆ ನಮ್ಮನ್ನ ಕರೆಯದೇ ಯಾರನ್ನೋ ಕರೆಯುತ್ತಾರೆ. ನಾಳೆ ಹೀಗೇ ಆದರೆ ನಾನು ಕೂಡ 25 ಜನರನ್ನ ತಂದು ಕೂರಿಸುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್ ಅವರು ಕೂಡ ಆಕ್ರೋಶ ಹೊರಹಾಕಿದರು. ಶಿಷ್ಟಾಚಾರ ಪ್ರಕಾರ ಎಲ್ಲರೂ ಕಾರ್ಯಕ್ರಮಕ್ಕೆ ಬರಬೇಕು ಎಂದ ಗುಂಡೂರಾವ್, ಶಾಸಕರನ್ನ ಅಗತ್ಯವಾಗಿ ಆಹ್ವಾನಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮೊದಲ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ನಗರ ಪೊಲೀಸ್ ಆಯುಕ್ತ ಕುಲದೀಪ್ ಜೈನ್, ಎಸ್​ಪಿ ರಿಷ್ಯಂತ್ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ದರು.

ಸಭೆಗೆ ಬಿಜೆಪಿ ಸದಸ್ಯರು ಗೈರು

ಆರಂಭದಲ್ಲಿ ಸಭೆಗೆ ಸುಳ್ಯ ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ ಅವರು ಮಾತ್ರ ಹಾಜರಾಗಿದ್ದರು. ನಂತರ ಶಾಸಕರಾದ ಹರೀಶ್ ಪೂಂಜಾ, ಉಮನಾಥ್ ಕೋಟ್ಯಾನ್, ವೇದವ್ಯಾಸ್ ಕಾಮತ್, ರಾಜೇಶ್ ನಾಯ್ಕ್ ಅವರು ತಡವಾಗಿ ಸಭೆಗೆ ಆಗಮಿಸಿದ್ದಾರೆ. ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ರೈ, ಪರಿಷತ್ ಸದಸ್ಯ ಹರೀಶ್ ಕುಮಾರ್ ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜಾಗೃತಿ ಅಭಿಯಾನಕ್ಕಾಗಿ ವಿಜಯೇಂದ್ರ 3 ತಂಡಗಳನ್ನು ರಚಿಸಿದ್ದಾರೆ: ಯಡಿಯೂರಪ್ಪ
ಜಾಗೃತಿ ಅಭಿಯಾನಕ್ಕಾಗಿ ವಿಜಯೇಂದ್ರ 3 ತಂಡಗಳನ್ನು ರಚಿಸಿದ್ದಾರೆ: ಯಡಿಯೂರಪ್ಪ
ನಂಬಿಕೆಗಳ ಮಹಾ ತರ್ಕ, ಲೆಕ್ಕಚಾರ ಮಾಡಲು ಬಂದ ಸುದೀಪ್
ನಂಬಿಕೆಗಳ ಮಹಾ ತರ್ಕ, ಲೆಕ್ಕಚಾರ ಮಾಡಲು ಬಂದ ಸುದೀಪ್
ವಕ್ಫ್ ಭೂವಿವಾದ; ಬಿಜೆಪಿಯ ಪ್ರಸ್ತಾಪಿತ ಜಾಗೃತಿ ಜಾಥಾಗೆ ಸಮನ್ವಯತೆಯ ಕೊರತೆ
ವಕ್ಫ್ ಭೂವಿವಾದ; ಬಿಜೆಪಿಯ ಪ್ರಸ್ತಾಪಿತ ಜಾಗೃತಿ ಜಾಥಾಗೆ ಸಮನ್ವಯತೆಯ ಕೊರತೆ
ರೌಡಿಶೀಟರ್ ಸ್ನೇಹಮಯಿ ಕೃಷ್ಣರನ್ನು ಗಡಿಪಾರು ಮಾಡುವಂತೆ ದೂರಿನಲ್ಲಿ ಕೋರಿಕೆ
ರೌಡಿಶೀಟರ್ ಸ್ನೇಹಮಯಿ ಕೃಷ್ಣರನ್ನು ಗಡಿಪಾರು ಮಾಡುವಂತೆ ದೂರಿನಲ್ಲಿ ಕೋರಿಕೆ
ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ, ಪರಿಸ್ಥಿತಿ ಗಂಭೀರ
ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ, ಪರಿಸ್ಥಿತಿ ಗಂಭೀರ
ಕುಮಾರಸ್ವಾಮಿ ತಮ್ಮ ಹೇಳಿಕೆಗಳನ್ನು ತಿರುಚುವುದು ಹೊಸದೇನಲ್ಲ: ಜಮೀರ್ ಅಹ್ಮದ್
ಕುಮಾರಸ್ವಾಮಿ ತಮ್ಮ ಹೇಳಿಕೆಗಳನ್ನು ತಿರುಚುವುದು ಹೊಸದೇನಲ್ಲ: ಜಮೀರ್ ಅಹ್ಮದ್
ಜಮೀರ್ ಪದಬಳಕೆ ವಿಷಯವನ್ನು ಶಿವಕುಮಾರ್ ನೋಡಿಕೊಳ್ಳುತ್ತಾರೆ: ಪರಮೇಶ್ವರ್
ಜಮೀರ್ ಪದಬಳಕೆ ವಿಷಯವನ್ನು ಶಿವಕುಮಾರ್ ನೋಡಿಕೊಳ್ಳುತ್ತಾರೆ: ಪರಮೇಶ್ವರ್
ಸಂಜು ಸಿಕ್ಸರ್​ಗೆ ಮಹಿಳೆ ಕಣ್ಣೀರು: ಕ್ಷಮೆ ಕೇಳಿದ ಸ್ಯಾಮ್ಸನ್
ಸಂಜು ಸಿಕ್ಸರ್​ಗೆ ಮಹಿಳೆ ಕಣ್ಣೀರು: ಕ್ಷಮೆ ಕೇಳಿದ ಸ್ಯಾಮ್ಸನ್
ಜಮೀರ್ ಮಾತಾಡಿದ್ದು ತಪ್ಪು ಎಂದು ಕೊನೆಗೂ ಅಂಗೀಕರಿಸಿದ ಡಿಕೆ ಶಿವಕುಮಾರ್
ಜಮೀರ್ ಮಾತಾಡಿದ್ದು ತಪ್ಪು ಎಂದು ಕೊನೆಗೂ ಅಂಗೀಕರಿಸಿದ ಡಿಕೆ ಶಿವಕುಮಾರ್
ಧೋನಿ ಸಂಪ್ರದಾಯ ಮುಂದುವರಿಸಿದ ಸೂರ್ಯಕುಮಾರ್ ಯಾದವ್
ಧೋನಿ ಸಂಪ್ರದಾಯ ಮುಂದುವರಿಸಿದ ಸೂರ್ಯಕುಮಾರ್ ಯಾದವ್