ಪ್ರತಿಕೂಲ ಹವಾಮಾನ; ಸಚಿವ ದಿನೇಶ್ ಗುಂಡೂರಾವ್ ಪ್ರಯಾಣಿಸುತ್ತಿದ್ದ ವಿಮಾನ ಮಂಗಳೂರಿನ ಬದಲು ಕಣ್ಣೂರಲ್ಲಿ ಲ್ಯಾಂಡಿಂಗ್

ಆರೋಗ್ಯ ಸಚಿವ, ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರಯಾಣಿಸುತ್ತಿದ್ದ ಬೆಂಗಳೂರು-ಮಂಗಳೂರು ವಿಮಾನ ಮಂಗಳೂರಿನಲ್ಲಿ ಲ್ಯಾಂಡ್ ಆಗದೆ ಕೇರಳದ ಕಣ್ಣೂರು ಏರ್ಪೋರ್ಟ್ ನಲ್ಲಿ ಲ್ಯಾಂಡ್ ಆಗಿದೆ.

ಪ್ರತಿಕೂಲ ಹವಾಮಾನ; ಸಚಿವ ದಿನೇಶ್ ಗುಂಡೂರಾವ್ ಪ್ರಯಾಣಿಸುತ್ತಿದ್ದ ವಿಮಾನ ಮಂಗಳೂರಿನ ಬದಲು ಕಣ್ಣೂರಲ್ಲಿ ಲ್ಯಾಂಡಿಂಗ್
ಸಾಂದರ್ಭಿಕ ಚಿತ್ರ
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: ಆಯೇಷಾ ಬಾನು

Updated on:Jul 22, 2023 | 1:49 PM

ಮಂಗಳೂರು, ಜುಲೈ 22: ಪ್ರತಿಕೂಲ ಹವಾಮಾನ ಹಿನ್ನೆಲೆ ಬೆಂಗಳೂರು-ಮಂಗಳೂರು ವಿಮಾನ(Bengaluru To Mangaluru Flight) ಸಂಚಾರ ವ್ಯತ್ಯಯವಾಗಿದೆ. ಮಂಗಳೂರು ಏರ್ಪೋರ್ಟ್ ನಲ್ಲಿ(Mangaluru Airport) ಲ್ಯಾಂಡ್ ಆಗಬೇಕಿದ್ದ ವಿಮಾನ ಕಣ್ಣೂರಿಗೆ ಡೈವರ್ಟ್ ಆಗಿದೆ(Kannur Airport). ಈ ವಿಮಾನದಲ್ಲಿ ಆರೋಗ್ಯ ಸಚಿವರು ಪ್ರಯಾಣಿಸುತ್ತಿದ್ದರು(Dinesh Gundu Rao) ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ.  ಬೆಂಗಳೂರಿನಿಂದ ಬೆಳಗ್ಗೆ 9.55ಕ್ಕೆ ಹೊರಟಿದ್ದ ಇಂಡಿಗೋ ವಿಮಾನ ಬೆ.11 ಗಂಟೆಗೆ ಮಂಗಳೂರು ಏರ್ಪೋರ್ಟ್ ನಲ್ಲಿ‌ ಲ್ಯಾಂಡ್ ಆಗಬೇಕಿತ್ತು. ಆದ್ರೆ ಪ್ರತಿಕೂಲ ಹವಾಮಾನ ಹಿನ್ನೆಲೆ ಕೇರಳದ ಕಣ್ಣೂರು ಏರ್ಪೋರ್ಟ್ ನಲ್ಲಿ ಲ್ಯಾಂಡ್ ಆಗಿದೆ.

ಈ ವಿಮಾನದಲ್ಲಿ ಆರೋಗ್ಯ ಸಚಿವ, ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರಯಾಣಿಸುತ್ತಿದ್ದರು. ಸದ್ಯ ಹವಾಮಾನ ಬದಲಾವಣೆ ಬೆನ್ನಲ್ಲೇ ಮಂಗಳೂರು ಏರ್ಪೋರ್ಟ್ ನಲ್ಲಿ ವಿಮಾನ ಲ್ಯಾಂಡಿಂಗ್​ಗೆ ಅನುಮತಿ ನೀಡಲಾಗಿದೆ. ಹೀಗಾಗಿ ಇದೀಗ ಮತ್ತೆ ಮಂಗಳೂರು ಏರ್ಪೋರ್ಟ್ ನತ್ತ ವಿಮಾನ ಟೇಕಾಫ್ ಆಗಿದೆ. ಕೆಲವೇ ಕ್ಷಣಗಳಲ್ಲಿ ಇಂಡಿಗೋ ವಿಮಾನ ಮಂಗಳೂರು ಏರ್ಪೋರ್ಟ್ ತಲುಪಲಿದೆ ಎಂಬ ಮಾಹಿತಿ ಸಿಕ್ಕಿದೆ.

Bengaluru to Mangaluru flight

ಬೆಂಗಳೂರು-ಮಂಗಳೂರು ವಿಮಾನ ಸಂಚಾರ ವ್ಯತ್ಯಯ

ಇದನ್ನೂ ಓದಿ: Bengaluru: ಪ್ರಯಾಣದ ವೇಳೆ ಏರ್ ಫ್ರಾನ್ಸ್ ವಿಮಾನದ ಬಾಗಿಲು ತೆಗೆಯಲು ಯತ್ನಿಸಿದ ಆಂಧ್ರ ಮೂಲದ ವ್ಯಕ್ತಿ ಬೆಂಗಳೂರಲ್ಲಿ ಅರೆಸ್ಟ್

ಕೆಲ ದಿನಗಳ ಹಿಂದಷ್ಟೇ ಇಂಜಿನ್ ಹಾಳಾಗಿ ದುಬೈಗೆ ಹೊರಡಬೇಕಾದ ವಿಮಾನ ವಿಳಂಬವಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಗಲಾಟೆ ಗದ್ದಲ ಉಂಟಾಗಿತ್ತು. ಜುಲೈ 10ರಂದು ರಾತ್ರಿ 11‌ಕ್ಕೆ ದುಬೈಗೆ ಹೊರಡಬೇಕಿದ್ದ ಏರ್ ಇಂಡಿಯಾ ಫ್ಲೈಟ್ ವಿಳಂಬವಾಗಿತ್ತು. ಈ ಹಿನ್ನೆಲೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ಕಾಲ ಕಳೆದಿದ್ದರು. ಆದ್ರೆ ಅಧಿಕಾರಿಗಳು ಪ್ರಯಾಣಿಕರಿಗೆ ಬದಲಿ ಫ್ಲೈಟ್ ವ್ಯವಸ್ಥೆ ಮಾಡದೆ ಸತಾಯಿಸಿದ್ದರು. ಕಾದು ಕಾದು ಸುಸ್ತಾದ ಪ್ರಯಾಣಿಕರು ಅಧಿಕಾರಿಗಳೊಂದಿಗೆ ವಾಗ್ವಾದಕ್ಕೆ ಇಳಿದು ಗಲಾಟೆ ಎಬ್ಬಿಸಿದ್ದರು. ಕೊನೆಗೆ ಇದರಿಂದ ಎಚ್ಚೆತ್ತ ಅಧಿಕಾರಿಗಳು ಬದಲಿ ವಿಮಾನದ ವ್ಯವಸ್ಥೆ ಮಾಡಿ ಪ್ರಯಾಣಿಕರನ್ನು ದುಬೈಗೆ ಕಳಿಸಿದರು. ರಾತ್ರಿ ಪೂರ್ತಿ ಮಂಗಳೂರು ವಿಮಾನದಲ್ಲೇ ಕಾಲ ಕಳೆದ ಪ್ರಯಾಣಿಕರು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹೊರ ಹಾಕಿದ್ರು.

ಮಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:41 pm, Sat, 22 July 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ