AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಮಹಾ ಅಚ್ಚರಿ: ಬಾವಿಗಳಲ್ಲಿ ಉಕ್ಕಿ ಬಂತು ಡೀಸೆಲ್, ನೀರು ಕುಡಿಯಲಾಗದೆ ಕಾವೂರು ನಿವಾಸಿಗಳು ಕಂಗಾಲು!

ಮಂಗಳೂರಿನ ಕಾವೂರಿನ ಮೂರು ಮನೆಗಳ ಬಾವಿಗಳಲ್ಲಿ ನೀರಿನ ಜತೆ ಡೀಸೆಲ್ ಉಕ್ಕಿ ಬರುತ್ತಿರುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ನೀರಿನಲ್ಲಿ 28% ಡೀಸೆಲ್ ಇರುವುದು ಪತ್ತೆಯಾಗಿದ್ದು, ಹತ್ತಿರದ ಪೆಟ್ರೋಲ್ ಬಂಕ್‌ನಿಂದ ಸೋರಿಕೆಯಾಗಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಬಂಕ್ ಮಾಲೀಕರು ನಿರಾಕರಿಸಿದ್ದಾರೆ. ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.

ಮಂಗಳೂರಿನಲ್ಲಿ ಮಹಾ ಅಚ್ಚರಿ: ಬಾವಿಗಳಲ್ಲಿ ಉಕ್ಕಿ ಬಂತು ಡೀಸೆಲ್, ನೀರು ಕುಡಿಯಲಾಗದೆ ಕಾವೂರು ನಿವಾಸಿಗಳು ಕಂಗಾಲು!
ಬಾವಿಯಲ್ಲಿ ಡೀಸೆಲ್ ಅಂಶImage Credit source: tv9
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on:May 19, 2026 | 8:33 AM

Share

ಮಂಗಳೂರು, ಮೇ 19: ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ತೈಲ ಬಿಕ್ಕಟ್ಟಿನ ಆತಂಕದ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಬಂದರು ನಗರಿ ಮಂಗಳೂರಿನಲ್ಲಿ (Mangalore) ಅತ್ಯಂತ ವಿಲಕ್ಷಣ ಹಾಗೂ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನಗರದ ಕಾವೂರು ಎಂಬ ಪ್ರದೇಶದ ಮೂರು ಮನೆಗಳ ಬಾವಿಗಳಲ್ಲಿ ದಿಢೀರನೆ ನೀರಿನೊಂದಿಗೆ ಡೀಸೆಲ್ (Diesel) ಉಕ್ಕಿ ಬರುತ್ತಿದ್ದು, ಸ್ಥಳೀಯ ನಿವಾಸಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಬಾವಿಯ ನೀರಿನಲ್ಲಿ ಬೇರೆ ಯಾವುದೇ ಕಲ್ಮಶಗಳಲ್ಲ, ಬರೋಬ್ಬರಿ ಶೇ 28 ರಷ್ಟು ಶುದ್ಧ ಡೀಸೆಲ್ ಅಂಶ ಇರುವುದು ಪ್ರಯೋಗಾಲಯದ ತಪಾಸಣೆಯಲ್ಲಿ ದೃಢಪಟ್ಟಿದ್ದು, ಈ ವಿಚಿತ್ರ ವಿದ್ಯಮಾನ ಇಡೀ ಕರಾವಳಿ ಭಾಗದಲ್ಲಿ ಭಾರೀ ಸಂಚಲನ ಮೂಡಿಸಿದೆ.

ಮುಖ್ಯಾಂಶಗಳು

  • ಬಾವಿ ನೀರಿನ ಮಾದರಿ ಪರೀಕ್ಷಿಸಿದಾಗ ಶೇಕಡಾ 28ರಷ್ಟು ಡೀಸೆಲ್ ಮಿಶ್ರಣವಾಗಿರುವುದು ದೃಢ.
  • ಬಾವಿಯಿಂದ ಮೇಲೆತ್ತಿದ ನೀರಿಗೆ ಕಾಗದವನ್ನು ಅದ್ದಿ ಬೆಂಕಿ ಹಚ್ಚಿದರೆ ಅದು ತಕ್ಷಣವೇ ಭುಗಿಲನೆ ಉರಿಯುತ್ತಿದೆ.
  • ಕಾವೂರು ಸುತ್ತಮುತ್ತಲಿನ ಅಂತರ್ಜಲ ಮೂಲಗಳು ವಿಷವಾಗುವ ಆತಂಕ.

ಬಂಕ್‌ನಿಂದ ಸೋರಿಕೆ ಶಂಕೆ: ಅಧಿಕಾರಿಗಳ ನಿರ್ಲಕ್ಷ್ಯ

ಬಾವಿಯ ನೀರನ್ನು ಎಷ್ಟು ಬಾರಿ ಮೋಟಾರ್ ಹಾಕಿ ಪೂರ್ತಿ ಖಾಲಿ ಮಾಡಿದರೂ ಸಹ, ಮತ್ತೆ ಜಿನುಗುವ ನೀರಿನೊಂದಿಗೆ ಡೀಸೆಲ್‌ನ ದಪ್ಪನೆಯ ಪದರ ಮೇಲೇಳುತ್ತಲೇ ಇದೆ. ಇದರಿಂದಾಗಿ ಕಾವೂರಿನ ಈ ಕುಟುಂಬಗಳಿಗೆ ಕುಡಿಯುವ ನೀರು ಇರಲಿ, ಕನಿಷ್ಠ ಮನೆ ಬಳಕೆ ಅಥವಾ ಪಾತ್ರೆ ತೊಳೆಯಲೂ ನೀರಿಲ್ಲದಂತಾಗಿದೆ. ಮನೆಗಳ ಅತ್ಯಂತ ಸಮೀಪದಲ್ಲೇ ಪೆಟ್ರೋಲ್ ಬಂಕ್‌ ಒಂದಿದ್ದು, ಅದರ ಅಂಡರ್‌ಗ್ರೌಂಡ್ ಟ್ಯಾಂಕ್‌ನಿಂದಲೇ ಡೀಸೆಲ್ ಲೀಕ್ ಆಗಿ ಅಂತರ್ಜಲ ಸೇರಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ. ಆದರೆ, ಈ ಆರೋಪವನ್ನು ತಳ್ಳಿಹಾಕಿರುವ ಪೆಟ್ರೋಲ್ ಬಂಕ್ ಮಾಲೀಕರು ಮತ್ತು ಸಿಬ್ಬಂದಿ, ‘ನಮ್ಮ ಡೀಸೆಲ್ ಸ್ಟಾಕ್‌ನಲ್ಲಿ ಯಾವುದೇ ವ್ಯತ್ಯಾಸ ಬಂದಿಲ್ಲ, ಸೋರಿಕೆಯೂ ಆಗುತ್ತಿಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ. ಇತ್ತ ಬಾವಿ ನೀರು ಬಳಕೆಗೆ ಯೋಗ್ಯವಲ್ಲ ಎಂದು ವರದಿ ಬಂದಿದ್ದರೂ, ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲಿಸುವ ಸೌಜನ್ಯ ತೋರಿಲ್ಲ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಈ ರಹಸ್ಯ ಸೋರಿಕೆ ಹೇಗೆ ಆಗುತ್ತಿದೆ ಎಂಬುದನ್ನು ತಕ್ಷಣವೇ ಪತ್ತೆ ಹಚ್ಚಿ, ಇಡೀ ಪ್ರದೇಶದ ಅಂತರ್ಜಲ ಕಲುಷಿತಗೊಳ್ಳುವುದನ್ನು ತಡೆಯಬೇಕೆಂದು ಕಾವೂರು ನಿವಾಸಿಗಳು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

‘ಟ್ಯಾಂಕರ್ ನೀರೇ ನಮಗೆ ಆಸರೆ, ದಯವಿಟ್ಟು ನೆರವಿಗೆ ಬನ್ನಿ’: ಸಂತ್ರಸ್ತ ಸದಾಶಿವ ಅಳಲು

ಬಾವಿ ನೀರಿನಲ್ಲಿ ಡೀಸೆಲ್ ಪತ್ತೆಯಾಗಿರುವ ಕುರಿತು ಕಾವೂರಿನ ಸಂತ್ರಸ್ತರಾದ ಸದಾಶಿವ ಎಂಬವರು ‘ಟಿವಿ9’ ಜತೆ ಮಾತನಾಡಿ ಅಸಹಾಯಕತೆ ಮತ್ತು ಆಕ್ರೋಶ ಹೊರಹಾಕಿದ್ದಾರೆ. ‘ಬಾವಿಯಿಂದ ನೀರು ಸೇದುವಾಗಲೇ ಅದರಲ್ಲಿ ಡೀಸೆಲ್ ಮಿಕ್ಸ್ ಆಗಿರುವುದು ನಮಗೆ ಮೊದಲ ಬಾರಿಗೆ ಗೊತ್ತಾಯಿತು. ಬಳಸುವಾಗ ತೀವ್ರವಾದ ವಾಸನೆ ಬರುತ್ತಿತ್ತು. ಬಾವಿಯ ನೀರನ್ನು ಪೂರ್ತಿಯಾಗಿ ಖಾಲಿ ಮಾಡಿಸಿ ಕ್ಲೀನ್ ಮಾಡಿಸಿದರೂ ಸಹ ಮತ್ತೆ ಡೀಸೆಲ್ ಬರುತ್ತಲೇ ಇದೆ. ಈ ಆಯಿಲ್ ಭೂಮಿಯ ಒಳಗಿನಿಂದ ಎಲ್ಲಿಂದ ಜಿನುಗುತ್ತಿದೆ ಎಂಬುದು ನಮಗೆ ತಿಳಿಯುತ್ತಿಲ್ಲ. ಇದರಿಂದಾಗಿ ನಮಗೆ ದಿನಬಳಕೆಯ ನೀರಿಗೂ ಭಾರಿ ತೊಂದರೆಯಾಗಿದೆ. ಈಗ ಅನಿವಾರ್ಯವಾಗಿ ಹೊರಗಿನಿಂದ ಟ್ಯಾಂಕರ್ ಮೂಲಕ ನೀರು ತರಿಸಿ ಬಕೆಟ್‌ಗಳಲ್ಲಿ ತುಂಬಿಸಿಟ್ಟುಕೊಳ್ಳಬೇಕಾದ ದುಸ್ಥಿತಿ ಬಂದೊದಗಿದೆ’ ಎಂದು ಸದಾಶಿವ ಬೇಸರ ವ್ಯಕ್ತಪಡಿಸಿದ್ದಾರೆ.

Mangaluru Kavoor Well Diesel Leak Fire

ಬಾವಿಯಿಂದ ತೆಗೆದ ನೀರಿಗೆ ಪೇಪರ್ ಮುಳುಗಿಸಿ ಬೆಂಕಿ ಹಚ್ಚಿದಾಗ ಉರಿಯುತ್ತಿರುವುದು!

ಪೆಟ್ರೋಲ್ ಬಂಕ್ ಮಾಲೀಕರ ನಡೆಯ ಬಗ್ಗೆಯೂ ಮಾತನಾಡಿದ ಅವರು, ‘ನಾವು ಈ ಬಗ್ಗೆ ಪಕ್ಕದ ಪೆಟ್ರೋಲ್ ಬಂಕ್‌ನವರ ಗಮನಕ್ಕೆ ತಂದಿದ್ದೆವು. ಆದರೆ ಇದು ನಮ್ಮಿಂದ ಆಗಿರುವ ಸಮಸ್ಯೆಯಲ್ಲ; ನಮ್ಮ ಟ್ಯಾಂಕ್‌ನಿಂದ ಲೀಕ್ ಆಗಿದ್ದರೆ ಸ್ಟಾಕ್‌ನಲ್ಲಿ ವ್ಯತ್ಯಾಸ ಬರುತ್ತಿತ್ತು ಎಂದು ಅವರು ಹಾರಿಕೆ ಉತ್ತರ ನೀಡುತ್ತಿದ್ದಾರೆ. ಆದರೆ ಈಗಾಗಲೇ ಆರೋಗ್ಯ ಇಲಾಖೆಯ ಅಧಿಕಾರಿಗಳು ಬಂದು ನೀರಿನ ಮಾದರಿಯನ್ನು ತಪಾಸಣೆಗೆ ಕೊಂಡೊಯ್ದಿದ್ದು, ಇದರಲ್ಲಿ ಬರೋಬ್ಬರಿ ಶೇ 28 ರಷ್ಟು ಆಯಿಲ್ ಅಂಶ ಇರುವುದು ವರದಿಯಲ್ಲಿ ದೃಢಪಟ್ಟಿದೆ. ಅಲ್ಲದೆ ಈ ನೀರು ಕುಡಿಯಲು ಯೋಗ್ಯವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಬಾವಿ ನೀರಿನಲ್ಲಿ ಡೀಸೆಲ್, ಸ್ಥಳೀಯರು ಹೇಳೋದೇನು ನೋಡಿ

ಬಾವಿಯಿಂದ ತೆಗೆದ ನೀರಿಗೆ ಪೇಪರ್ ಮುಳುಗಿಸಿ ಬೆಂಕಿ ಹಚ್ಚಿದರೆ ಅದು ಉರಿಯುತ್ತಿದೆ. ಇಂತಹ ಅಪಾಯಕಾರಿ ಪರಿಸ್ಥಿತಿಯಲ್ಲಿ ನಾವಿದ್ದೇವೆ, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕೇವಲ ವರದಿ ಪಡೆದು ಸುಮ್ಮನಾಗದೆ ತಕ್ಷಣವೇ ಸ್ಥಳಕ್ಕೆ ಬಂದು ನಮ್ಮ ನೆರವಿಗೆ ಧಾವಿಸಬೇಕು’ ಎಂದು ಸದಾಶಿವ ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:59 am, Tue, 19 May 26

Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!