AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ನಾಪತ್ತೆಯಾಗಿದ್ದ ಹಿಂದೂ ಯುವತಿ ನಟೋರಿಯಸ್ ಮುಸ್ಲಿಂ ಯುವಕನ ಜತೆ ಪತ್ತೆ

ಕೋಮು ಸೂಕ್ಷ್ಮ ಪ್ರದೇಶ ಎಂದೇ ಕರೆಯುವ ಮಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಹೌದು..ನಾಪತ್ತೆಯಾಗಿದ್ದ ಹಿಂದೂ ಯುವತಿಯ ನಟೋರಿಯಸ್ ಮುಸ್ಲಿಂ ಯುವಕನ ಜೊತೆ ಇರುವುದು ಪತ್ತೆಯಾಗಿದೆ. ಪಾಂಡೇಶ್ವರ ಠಾಣೆ ಪೊಲೀಸರು ಪತ್ತೆ ಮಾಡಿದ್ದು, ಇದೀಗ ಆಕೆಯ ಪೋಷಕರು ಇದೊಂದು ಲವ್​ ಜಿಹಾದ್ ಎಂದು ಆರೋಪಿಸಿದ್ದಾರೆ.

ಮಂಗಳೂರು: ನಾಪತ್ತೆಯಾಗಿದ್ದ ಹಿಂದೂ ಯುವತಿ ನಟೋರಿಯಸ್ ಮುಸ್ಲಿಂ ಯುವಕನ ಜತೆ ಪತ್ತೆ
ಮಹಮ್ಮದ್ ಅಶ್ಪಕ್
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Jul 10, 2024 | 5:14 PM

Share

ಮಂಗಳೂರು, (ಜುಲೈ 10): ನಾಪತ್ತೆಯಾಗಿದ್ದ ಹಿಂದೂ ಯುವತಿ ನಟೋರಿಯಸ್ ಮುಸ್ಲಿಂ ಯುವಕನ ಜತೆ ಇರುವುದು ಪತ್ತೆಯಾಗಿದೆ. ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಹಿಂದೂ ಯುವತಿ ಕಾಣೆಯಾಗಿರುವ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ  ದೂರು ದಾಖಲಾಗಿತ್ತು. ಈ ಪ್ರಕರಣದ ಕಾರ್ಯಚರಣೆ ನಡೆಸಿದ ಪಾಂಡೇಶ್ವರ ಠಾಣಾ ಪೊಲೀಸರು, ನಾಪತ್ತೆಯಾಗಿದ್ದ ಯುವತಿಯನ್ನು ಪತ್ತೆ ಮಾಡಿದ್ದಾರೆ. ಆದ್ರೆ, ಆಕೆ ನಟೋರಿಯಸ್ ಮುಸ್ಲಿಂ ಯುವಕ ಮಹಮ್ಮದ್ ಅಶ್ಪಕ್ ಜೊತೆ ಇದ್ದಾಳೆ. ಮಹಮ್ಮದ್ ಅಶ್ಪಕ್ ನಟೋರಿಯಸ್ ಹಿನ್ನಲೆ ಹೊಂದಿದವನು ಎಂದು ತಿಳಿದುಬಂದಿದೆ. ಮಹಮ್ಮದ್ ಅಶ್ಪಕ್ ಈಗಾಗಲೇ ಒಂದು ಮದುವೆಯಾಗಿದ್ದು, ಈತನ ವಿರುದ್ಧ ಕಾಸರಗೋಡು ವಿದ್ಯಾನಗರ ಠಾಣೆಯಲ್ಲಿ 8 ಕ್ರಿಮಿನಲ್ ಪ್ರಕರಣಗಳು ಇವೆ.

ಮಂಗಳೂರಿನ ಕಾಲೇಜಿನಲ್ಲಿ ಕಲಿಯುತ್ತಿದ್ದ ನನ್ನ ಮಗಳನ್ನು ಅಪಹರಣ ಮಾಡಿ ಇಸ್ಲಾಂಗೆ ಮತಾಂತರ ಮಾಡಿದ್ದಾನೆಂದು ಹುಡುಗಿಯ ತಂದೆ ಮಂಗಳೂರು ಪೊಲೀಸ್ ಕಮೀಷನರ್​ಗೆ ದೂರು ನೀಡಿದ್ದಾರೆ. ಇನ್ನು ಇದೊಂದು ಲವ್ ಜಿಹಾದ್ ಎಂದು ವಿಶ್ವ ಹಿಂದೂ ಪರಿಷತ್​ ಆರೋಪಿಸುತ್ತಿದೆ.

ಇದನ್ನೂ ಓದಿ: ಗಡಿನಾಡು ಕಾಸರಗೋಡಿನಲ್ಲಿ ಮತ್ತೆ ಲವ್ ಜಿಹಾದ್ ಸದ್ದು; ಮುಸ್ಲಿಂ ಯುವಕನ ಜತೆ ಮದುವೆಯಾಗಿ ಠಾಣೆಗೆ ಬಂದ ಯುವತಿ

ಲವ್ ಜಿಹಾದ್ ಕರಾವಳಿಯಲ್ಲಿ ಹೆಚ್ಚುತ್ತಿದೆ. ಇದರ ವಿರುದ್ಧ ಹಿಂದೂ ಸಮಾಜ ಎಚ್ಚೆತ್ತುಕೊಳ್ಳಬೇಕಾಗಿದೆ. ಪ್ರೀತಿ , ಮದುವೆ ಹೆಸರಲ್ಲಿ ಹಿಂದೂ ಯುವತಿಯರ ಮತಾಂತರ ‘ಲವ್ ಜಿಹಾದ್’ ಗೆ ಕಡಿವಾಣ ಹಾಕಲು ಪ್ರಬಲ ಕಾನೂನು ದೇಶದಲ್ಲಿ ಬರಬೇಕಾಗಿದೆ ಎಂದು ವಿಶ್ವಹಿಂದೂ ಪರಿಷದ್‌ ಶರಣ್ ಪಂಪ್ವೆಲ್‌ ಹೇಳಿದ್ದಾರೆ.

ಈ ಸಂಬಂಧ ಯುವತಿ ತಂದೆ ಮತಾಂತರ ಮಾಡಲಾಗಿದೆ ಎಂದು ದೂರು ನೀಡಿದ್ದು, ಈ ಬಗ್ಗೆ ಪೊಲಿಸರು ಏನೆಲ್ಲಾ ಕ್ರಮಕೈಗೊಳ್ಳುತ್ತಾರೆ ಎಂದು ಕಾದುನೋಡಬೇಕಿದೆ. ಇನ್ನು ಹಿಂದೂ ಯುವತಿ ಸ್ವಇಚ್ಛೆಯಿಂದ ಮಹಮ್ಮದ್ ಅಶ್ಪಕ್ ಜೊತೆ ಹೋಗಿದ್ದಾಳಾ? ಅಥವಾ ಅಶ್ಪಕನೇ ಯುವತಿಯನ್ನು ಮನವೊಲಿಸಿ ಕರೆದುಕೊಂಡು ಹೋಗಿದ್ದಾ? ಎನ್ನುವುದು ಪೊಲೀಸ್ ತನಿಖೆ  ನಂತರ ತಿಳಿದುಬರಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ