AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಯುಸಿ ವಿದ್ಯಾರ್ಥಿ ನಿಗೂಢ ನಾಪತ್ತೆ: ಸಿಗದ ಸುಳಿವು, ಪೊಲೀಸರಿಗೆ ಹೈಕೋರ್ಟ್ ಖಡಕ್ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ಫೆಬ್ರವರಿ 25ರಿಂದ ನಾಪತ್ತೆಯಾಗಿದ್ದ. ಹಲವು ದಿನಗಳ ಹುಡುಕಾಟದ ನಂತರವೂ ಸುಳಿವು ಸಿಗದ ಕಾರಣ, ಅವರ ಪೋಷಕರು ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯವು ಪೊಲೀಸರಿಗೆ ತನಿಖೆ ನಡೆಸಿ ಮಾರ್ಚ್ 12ರೊಳಗೆ ವರದಿ ಸಲ್ಲಿಸುವಂತೆ ಆದೇಶಿಸಿದೆ.

ಪಿಯುಸಿ ವಿದ್ಯಾರ್ಥಿ ನಿಗೂಢ ನಾಪತ್ತೆ: ಸಿಗದ ಸುಳಿವು, ಪೊಲೀಸರಿಗೆ ಹೈಕೋರ್ಟ್ ಖಡಕ್ ಸೂಚನೆ
ಪಿಯುಸಿ ವಿದ್ಯಾರ್ಥಿ ನಿಗೂಢ ನಾಪತ್ತೆ: ಸಿಗದ ಸುಳಿವು, ಪೊಲೀಸರಿಗೆ ಹೈಕೋರ್ಟ್  ಖಡಕ್ ಸೂಚನೆ
ಅಶೋಕ್​ ಪೂಜಾರಿ, ಮಂಗಳೂರು
| Updated By: ಗಂಗಾಧರ​ ಬ. ಸಾಬೋಜಿ|

Updated on: Mar 06, 2025 | 4:15 PM

Share

ಮಂಗಳೂರು, ಮಾರ್ಚ್​​ 06: ನಿಗೂಢ ರೀತಿಯಲ್ಲಿ ವಿದ್ಯಾರ್ಥಿ (student) ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿ 10 ದಿನವಾದರೂ ವಿದ್ಯಾರ್ಥಿಯ ಸುಳಿವು ಸಿಕ್ಕಿಲ್ಲ. ಹೀಗಾಗಿ ವಿದ್ಯಾರ್ಥಿ ದಿಗಂತ್ ಪೋಷಕರು (parents) ಹೈಕೋರ್ಟ್ ಮೊರೆ ಹೋಗಿದ್ದರು. ಮಗನನ್ನು ಪತ್ತೆ ಮಾಡಿಕೊಡಲು ಪೊಲೀಸರಿಗೆ (police) ನಿರ್ದೇಶಿಸುವಂತೆ ಕೋರಿ ದಿಗಂತ್ ತಂದೆ ಪದ್ಮನಾಭ್ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಜಸ್ಟೀಸ್ ವಿ.ಕಾಮೇಶ್ವರ್ ರಾವ್, ಜಸ್ಟೀಸ್ ಟಿ.ಎಂ ನಡಾಫ್​​ರಿಂದ ಹೈಕೋರ್ಟ್​ ದ್ವಿಸದಸ್ಯ ವಿಭಾಗೀಯ ಪೀಠದಲ್ಲಿ ಅರ್ಜಿಯ ವಿಚಾರಣೆ ಮಾಡಲಾಗಿದ್ದು, ಮಾರ್ಚ್ 12 ರ ಒಳಗೆ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಪೊಲೀಸರಿಗೆ ಆದೇಶಿಸಲಾಗಿದೆ. ಮಾರ್ಚ್ 13ಕ್ಕೆ ವಿಚಾರಣೆ ಮುಂದೂಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ‌ ದಿಗಂತ್, ಫೆ.25ರ‌ ಸಂಜೆಯಿಂದ ನಾಪತ್ತೆಯಾಗಿದ್ದ. ಫರಂಗಿಪೇಟೆ ಆಂಜನೇಯ ವ್ಯಾಯಾಮ ಶಾಲೆಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ದಿಗಂತ್, ದೇವಸ್ಥಾನಕ್ಕೂ ಹೋಗದೆ ಮನೆಗೂ ಬಾರದೆ ನಾಪತ್ತೆಯಾಗಿದ್ದ.

ಇದನ್ನೂ ಓದಿ: ಮಂಗಳೂರು: ವಿದ್ಯಾರ್ಥಿ ದಿಗಂತ್​ ನಾಪತ್ತೆ, ವಿಹೆಚ್​ಪಿ​​ ಪ್ರತಿಭಟನೆ, ಗಾಂಜಾ ವ್ಯಸನಿಗಳ ಕೈವಾಡ ಶಂಕೆ

ಇದನ್ನೂ ಓದಿ
Image
ಮಂಗಳೂರು ಜೈಲಿನಲ್ಲಿ 40ಕ್ಕೂ ಹೆಚ್ಚು ಕೈದಿಗಳಿಗೆ ಫುಡ್ ಪಾಯಿಸನ್
Image
ಮಂಗಳೂರು: ವಿದ್ಯಾರ್ಥಿ ದಿಗಂತ್​ ನಾಪತ್ತೆ, VHP​​ ಪ್ರತಿಭಟನೆ
Image
ಕೋಟೆಕಾರು ದರೋಡೆ: ಪ್ರಮುಖ ಸೂತ್ರಧಾರ ಭಾಸ್ಕರ್ ಬೆಳ್ಚಪಾಡನ ಹಿನ್ನೆಲೆಯೇ ರೋಚಕ
Image
ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆಯ ಮಾಸ್ಟರ್ ಮೈಂಡ್​​ಗಳಿಬ್ಬರ ಸೆರೆ!

ಬಳಿಕ ಫರಂಗಿಪೇಟೆಯಲ್ಲಿ ರೈಲ್ವೆ ಹಳಿಯಲ್ಲಿ ದಿಗಂತ್ ಚಪ್ಪಲಿ ಹಾಗೂ ಮೊಬೈಲ್ ಪತ್ತೆಯಾಗಿತ್ತು. ಒಂದು ಚಪ್ಪಲಿಯಲ್ಲಿ ರಕ್ತದ ಕಲೆ ಕಂಡುಬಂದಿತ್ತು. ಸದ್ಯ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

ನಾಪತ್ತೆಯಾದ ಸಂದರ್ಭದಲ್ಲಿ ಪೊಲೀಸರು ದೂರು ಸ್ವೀಕರಿಸಿ ತಕ್ಷಣವೇ ಕ್ರಮಕೈಗೊಳ್ಳದ ಬಗ್ಗೆ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಆರಂಭದಲ್ಲೇ ಸರಿಯಾದ ನಿಟ್ಟಿನಲ್ಲಿ ತನಿಖೆ ಆರಂಭಿಸದ ಪೊಲೀಸರು ದಿಗಂತ್ ಪತ್ತೆಗೆ ಅವಕಾಶ ಇದ್ದ ಅಮೂಲ್ಯ ಸಮಯವನ್ನು ಹಾಳು ಮಾಡಿದ್ದಾರೆ. ಮಾರ್ಚ್ 1 ರಂದು ಫರಂಗಿಪೇಟೆ ಬಂದ್ ಮಾಡಿದ ಬಳಿಕ ಏಳು ತನಿಖಾ ತಂಡಗಳನ್ನು ರಚಿಸಿ ತನಿಖೆಯನ್ನು ಆರಂಭಿಸಿದ್ದಾಗಿ ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ.

ಈ ನಾಪತ್ತೆ ಪ್ರಕರಣದ ಹಿಂದೆ ಗಾಂಜಾ ಗ್ಯಾಂಗ್ ಕೈವಾಡ ಇರುವ ಅನುಮಾನ ವ್ಯಕ್ತಪಡಿಸಿ, ಪೊಲೀಸರು ಈ ಪ್ರಕರಣದ ತನಿಖೆಯಲ್ಲಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಿ ಹಿಂದೂಪರ ಸಂಘಟನೆ ವಿ.ಎಚ್.ಪಿ, ಬಜರಂಗದಳ, ಬಿಜೆಪಿ ಇತ್ತೀಚೆಗೆ ಫರಂಗಿಪೇಟೆ ಬಂದ್ ನಡೆಸಿ ಪೊಲೀಸ್ ಇಲಾಖೆ ವಿರುದ್ದ ಪ್ರತಿಭಟಿನೆ ಮಾಡಲಾಗಿತ್ತು.

ಇದನ್ನೂ ಓದಿ: ಕೋಟೆಕಾರು ಬ್ಯಾಂಕ್ ದರೋಡೆ: ಪ್ರಮುಖ ಸೂತ್ರಧಾರ ಭಾಸ್ಕರ್ ಬೆಳ್ಚಪಾಡನ ಹಿನ್ನೆಲೆಯೇ ರೋಚಕ!

ದಿಗಂತ್ ಪತ್ತೆ ಮಾಡದಿದ್ದಲ್ಲಿ ಜಿಲ್ಲೆಯ ಕಾರ್ಯಕರ್ತರು ಒಟ್ಟು ಸೇರಿ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ನೀಡಲಾಗಿದೆ. ಮಂಗಳವಾರ ಕರಾವಳಿಯ ಬಿಜೆಪಿ ಶಾಸಕರು ಸೇರಿ ವಿಧಾನಸೌಧದ ಹೊರಗಡೆ ಧರಣಿ ನಡೆಸುವ ಎಚ್ಚರಿಕೆಯನ್ನು ಶಾಸಕ ಹರೀಶ್ ಪೂಂಜಾ ನೀಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.