ಬಿಜೆಪಿ ಸಾಮಾಜಿಕ ಜಾಲತಾಣದ ಮುಖ್ಯಸ್ಥನ ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಿದ ಶಾಸಕನ ಬೆಂಬಲಿಗರು, ಪುತ್ತೂರಲ್ಲಿ ಕೇಸ್ ದಾಖಲು

ಅನುದಾನ ಹಂಚಿಕೆ ವಿಚಾರಕ್ಕೆ ಸಂಬಂಧಿಸಿ ಶಾಸಕನ ವಿರುದ್ಧ ಹಾಕಿದ್ದ ಪೋಸ್ಟ್​ ಸಂಬಂಧ ಶಾಸಕನ ಬೆಂಬಲಿಗರು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಸಾಮಾಜಿಕ ಜಾಲತಾಣದ ಮುಖ್ಯಸ್ಥನ ಮನೆಗೆ ನುಗ್ಗಿ ದಾಂಧಲೆ ಮಾಡಿದ್ದಾರೆ. ಜೊತೆಗೆ ಜೀವ ಬೆದರಿಕೆ ಕೂಡ ಹಾಕಿದ್ದಾರೆ. ಸದ್ಯ ಘಟನೆ ಸಂಬಂಧ ಪುತ್ತೂರು ನಗರ ಠಾಣೆಯಲ್ಲಿ ಮೊಕದ್ದಮೆ‌ ದಾಖಲಾಗಿದೆ.

ಬಿಜೆಪಿ ಸಾಮಾಜಿಕ ಜಾಲತಾಣದ ಮುಖ್ಯಸ್ಥನ ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಿದ ಶಾಸಕನ ಬೆಂಬಲಿಗರು, ಪುತ್ತೂರಲ್ಲಿ ಕೇಸ್ ದಾಖಲು
ಪುತ್ತೂರು ನಗರ ಠಾಣೆ
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಆಯೇಷಾ ಬಾನು

Updated on: Mar 18, 2024 | 7:05 AM

ಮಂಗಳೂರು, ಮಾರ್ಚ್​.18: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಜಯಾನಂದ ಕೆ. ಅವರ ಮನೆಗೆ ಶಾಸಕ ಅಶೋಕ್ ರೈ (Ashok Rai) ಬೆಂಬಲಿಗರು ನುಗ್ಗಿ ಪುಂಡಾಟ ಮೆರೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ತಾರಿಗುಡ್ಡೆಯಲ್ಲಿರುವ ಜಯಾನಂದ ಮನೆಗೆ ರೌಡಿಶೀಟರ್ ಪ್ರಜ್ವಲ್ ರೈ ಮತ್ತು ಕಾಂಗ್ರೆಸ್ ಬೆಂಬಲಿಗರು ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಿದ್ದಾರೆ. ಘಟನೆ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಮೊಕದ್ದಮೆ‌ ದಾಖಲಾಗಿದೆ.

ಅನುದಾನ ಹಂಚಿಕೆ ವಿಚಾರದಲ್ಲಿ ಕಿರಿಕ್ ನಡೆದಿದ್ದು ಪುತ್ತೂರು ಶಾಸಕರು ಅತೀ ಹೆಚ್ಚು ಅನುದಾನ ತಂದಿದ್ದಾರೆ ಅನ್ನೋ ಕುರಿತು ಸ್ಪಷ್ಟನೆ ನೀಡುವಂತೆ ಬಿಜೆಪಿ ಕಾರ್ಯಕರ್ತರು ಪೋಸ್ಟ್ ಹಾಕಿದ್ದರು. ಇದೇ ವಿಚಾರಕ್ಕೆ ಶಾಸಕ ಅಶೋಕ್ ರೈ ಬೆಂಬಲಿಗರೆನ್ನಲಾದ ತಂಡವೊಂದು ಮನೆಗೆ ನುಗ್ಗಿ ದಾಂಧಲೆ ಮಾಡಿದೆ. ಚುನಾವಣೆ ಹೊಸ್ತಿಲಲ್ಲೇ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ವಾರ್ ಶುರುವಾಗಿದೆ. ಚೆಂಡೆ ವಾಳಗದ ಮೂಲಕ ಕಾಂಗ್ರೆಸ್ ನ ಅನುದಾನದ ಬ್ಯಾನರ್ ಹಿಡಿದು ಬಿಜೆಪಿಯ ಜಯಾನಂದ ಅವರ ಮನೆಗೆ ನುಗ್ಗಿ ಪುಂಡಾಟ ಮೆರೆಯಲಾಗಿದೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ ಮುಗಿದ ಆರೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ; ತಯಾರಾಗಿ ಎಂದು ಕಾರ್ಯಕರ್ತರಿಗೆ ನಳಿನ್ ಸೂಚನೆ

ವಿದ್ಯುತ್ ತಂತಿ ತಗುಲಿ ಬಾಲಕ ಸಾವು

ವಿದ್ಯುತ್​ ತಂತಿ ತಗುಲಿ 12 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ, ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಅಚೇಪಲ್ಲಿ ಬಳಿ ನಡೆದಿದೆ. ದಿಬ್ಬೂರುಹಳ್ಳಿ ಮೂಲದ 12 ವರ್ಷದ ಬಾಲಕ ದೇವಪ್ಪ ಮೃತಪಟ್ಟಿದ್ದಾನೆ. ಮೇಕೆಗಳ ಮೇವಿಗಾಗಿ ಮರದಲ್ಲಿ ರೆಂಬೆ ಕಡಿಯುವಾಗ ದುರಂತ ನಡೆದಿದೆ. ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಲ್ಮೆಟ್​ ಧರಿಸದೆ ASI ಸಾವು.. ಪಿಎಸ್​ಐ ಅಮಾನತು

ಕರ್ತವ್ಯ ಮುಗಿಸಿ ಮನೆಗೆ ತೆರಳುವಾಗ ಬೈಕ್ ಸ್ಕಿಡ್ ಆಗಿ ಬಿದ್ದು ASI ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಅಪಘಾತ ಸಂಭವಿಸಿದೆ. ದೊಡವಾಡ ಠಾಣೆ ASI ವಿಜಯಕಾಂತ ಮಿಕಲಿ ಸಾವಿಗೀಡಾಗಿದ್ದಾರೆ. ಎಸ್​ಪಿ ಪೊಲೀಸರಿಗೆ ಹೆಲ್ಮೆಟ್ ಕಡ್ಡಾಯ ಮಾಡಿದ್ರು. ಆದ್ರೆ ASI ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸಿದ್ದು, ಆದೇಶ ಸಮರ್ಪಕವಾಗಿ ಅನುಷ್ಠಾನಗೊಳಿಸ ದಿದ್ದಕ್ಕೆ, ದೊಡವಾಡ ‌ಪಿಎಸ್ಐ ನಂದೀಶ್ ಅಮಾನತು ಮಾಡಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ