ಇನ್ಸ್ಪೆಕ್ಟರ್ ಸಂದೇಶ್​ ಕಾಮಕಾಂಡ ಕೇಸ್​​ಗೆ ಬಿಗ್ ಟ್ವಿಸ್ಟ್: ಪೊಲೀಸ್ ವರದಿಯಲ್ಲಿ ಸ್ಫೋಟಕ ಸತ್ಯ ಬಯಲು

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಕಾಮಕಾಂಡ ಪ್ರಕರಣಕ್ಕೆ ಇದೀಗ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಲೈಂಗಿಕ ಕಿರುಕುಳ ಮತ್ತು ಹಲ್ಲೆ ಆರೋಪ ಮಾಡಿದ್ದ ಮಹಿಳೆಯರು ಹೇಳಿದ್ದು ಸುಳ್ಳು ಎಂದು ಪೊಲೀಸ್ ವರದಿ ಹೇಳಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ತನಿಖೆ ಮೇಲೆ ನಂಬಿಕೆ ಇಲ್ಲ, ರಾಜ್ಯಮಟ್ಟದ ಅಧಿಕಾರಿಗಳಿಂದ ತನಿಖೆ ನಡೆಯಲಿ ದೂರುದಾರೆಯರು ಆಗ್ರಹಿಸಿದ್ದಾರೆ.

ಇನ್ಸ್ಪೆಕ್ಟರ್ ಸಂದೇಶ್​ ಕಾಮಕಾಂಡ ಕೇಸ್​​ಗೆ ಬಿಗ್ ಟ್ವಿಸ್ಟ್: ಪೊಲೀಸ್ ವರದಿಯಲ್ಲಿ ಸ್ಫೋಟಕ ಸತ್ಯ ಬಯಲು
ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ.
Image Credit source: google
Edited By:

Updated on: Mar 21, 2026 | 3:40 PM

ಮಂಗಳೂರು, ಮಾರ್ಚ್​ 21: ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್ (Police inspector Sandesh) ವಿರುದ್ಧ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಇನ್ಸ್‌ಪೆಕ್ಟರ್‌ ಸಂದೇಶ್ ವಿರುದ್ಧ ಮಾಡಿರುವ ಆರೋಪ ಸುಳ್ಳು ಎಂದು ಪೊಲೀಸ್ ವರದಿ ಹೇಳಿದೆ ಎಂದು ಹೇಳಲಾಗುತ್ತಿದೆ. ಮಾಧ್ಯಮಗಳ ಮುಂದೆ ಬಂದಿದ್ದ ಆ ಮಹಿಳೆಯರಿಗೆ ಕಿರುಕುಳ ನೀಡಿಲ್ಲ. ಪ್ರಚೋದನೆಗೆ ಒಳಪಟ್ಟು ಇನ್ಸ್‌ಪೆಕ್ಟರ್ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಮಹಿಳೆಯರ ಆರೋಪ ಸುಳ್ಳು ಹಾಗೂ ಪ್ರೇರಿತ ಎಂಬುದು ಸಾಬೀತಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.

ಮಂಗಳೂರೂ ನಗರ ಕಮಿಷನರೇಟ್ ವ್ಯಾಪ್ತಿಗೆ ಬರುವ ಮೂಡಬಿದ್ರೆ ಪೊಲೀಸ್ ಇನ್ಸ್​ಪೆಕ್ಟರ್​ ಸಂದೇಶ್ ಮೇಲೆ ಲೈಂಗಿಕ ಕಿರುಕುಳ ಮತ್ತು ಹಲ್ಲೆ ಆರೋಪ ಕೇಳಿಬಂದಿತ್ತು. ಸುಮತಿ ನಾಯಕ್ ಮತ್ತು ಅವಿತಾ ಮಿನೇಜಸ್ ಸಿಎಂ, ಗೃಹ ಸಚಿವರು ಸೇರಿದಂತೆ ಮಹಿಳಾ ಆಯೋಗಕ್ಕೂ ಈ ಬಗ್ಗೆ ದೂರು ನೀಡಿದ್ದರು. ಈ ಬೆನ್ನಲ್ಲೆ ಕೆಲ ಆಡಿಯೋ ಮತ್ತು ವಿಡಿಯೋ ಕೂಡ ವೈರಲ್ ಆಗಿದ್ದವು.

ಇದನ್ನೂ ಓದಿ: ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಕೊಟ್ಟ ಸಂತ್ರಸ್ತೆ ಸಹೋದರಿ

ಮಹಿಳಾ ಆಯೋಗ, ಮಕ್ಕಳ ರಕ್ಷಣಾ ಆಯೋಗ ಸೇರಿದಂತೆ ಸರ್ಕಾರದಿಂದ ತನಿಖೆ ಮಾಡಲು ಪೊಲೀಸ್ ಕಮಿಷನರ್​ಗೆ ಸೂಚನೆ ಸಿಕ್ಕಿತ್ತು. ಮಂಗಳೂರು ಉತ್ತರ ಎಸಿಪಿ ಶ್ರೀಕಾಂತ್​ರಿಂದ ತನಿಖೆಯನ್ನು ಮಾಡಿಸಲಾಯ್ತು. ಇನ್ಸ್​ಪೆಕ್ಟರ್ ಸಂದೇಶ್​​ರನ್ನ ಅಮಾನತ್ತುಗೊಳಿಸಿ ತನಿಖೆ ಮುಂದುವೆರೆಸಿದ್ದರು. ಈಗ ಪ್ರಾಥಮಿಕ ತನಿಖೆ ವರದಿ ಬಂದಿದ್ದು, ಸುಮತಿ ನಾಯಕ್ ಮತ್ತು ಅವಿತಾ ಮಿನೇಜಸ್ ಮಾಡಿದ್ದ ಆರೋಪಗಳು ಸುಳ್ಳು ಎಂಬುವುದುಸಾಬೀತಾಗಿದೆ ಅಂತಾ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಹಲ್ಲೆ, ಕಿರುಕುಳ ಸುಳ್ಳು 

ಸುಮತಿ ನಾಯಕ್ ಮತ್ತು ಅವಿತಾ ಮಿನೇಜಸ್ ಅವರ ಮೇಲೆ ಹಲ್ಲೆ, ಕಿರುಕುಳ ನಡೆದಿದೆ ಎಂಬ ಆರೋಪಗಳು ಸುಳ್ಳು ಮತ್ತು ಪ್ರೇರಿತ ಎಂದು ಸಾಬೀತಾಗಿದೆ. ಆಡಿಯೋ, ವಿಡಿಯೋದಲ್ಲಿರುವ ಮಹಿಳೆಯರು ಅದು ತಮ್ಮದೇ ಎಂದು ಒಪ್ಪಿಕೊಂಡಿದ್ದಾರೆ. ಆದರೆ ದೂರು ನೀಡಲು ಇಷ್ಟವಿಲ್ಲ ಎಂದು ಹೇಳಿದ್ದಾರೆ. ಹಾಗಾದರೆ ಆ ಆಡಿಯೋ, ವಿಡಿಯೋವನ್ನು ವಿನೋದ್ ಪಿಂಟೋ, ಅವಿತಾ ಅವರಿಗೆ ಯಾರು ಕೊಟ್ಟರು?

ಆಡಿಯೋ ತುಂಬಾ ಹಳೆಯದು, ಅದರಲ್ಲಿ ಏನು ಮಾತನಾಡಿದ, ಹೇಗೆ ಮಾತನಾಡಿದ ಅನ್ನೋದು ಸ್ಪಷ್ಟವಾಗಿದೆ. ಆಗಲೇ ಕ್ರಮಕೈಗೊಳ್ಳಬೇಕಾಗಿತ್ತು, ಆದರೆ ಆಗ ತೆಗೆದುಕೊಳ್ಳಲಿಲ್ಲ. ಅದರಿಂದಲೇ ಅದು ಈಗ ಹೊರಬಂದಿದೆ. ಆ ವಿಡಿಯೋ ಕೂಡ ಅಷ್ಟೇ ಲಜ್ಜಾಸ್ಪದವಾಗಿದೆ. ಆ ಆಡಿಯೋ ಮತ್ತು ವಿಡಿಯೋ ಮಟ್ಟಿಗೆ ನೋಡಿದರೆ, ಅಸಭ್ಯ ವರ್ತನೆ ನಡೆದಿದೆ ಎಂಬುದು ಸ್ಪಷ್ಟ. ಮಹಿಳೆಯರು PI ವಿರುದ್ಧ ದೂರು ಕೊಡಲಿಲ್ಲ ಅನ್ನೋದರಿಂದ ಅದು ಸತ್ಯ ಅಲ್ಲ ಅನ್ನೋದಕ್ಕೆ ಆಗುವುದಿಲ್ಲ.

ಉನ್ನತ ಮಟ್ಟದ ಅಧಿಕಾರಿಗಳಿಂದ ತನಿಖೆ ಮಾಡಿಸಿದರೆ ಸತ್ಯ ಹೊರಬರುತ್ತೆ: ಸುಮತಿ ನಾಯಕ್

ಆಡಿಯೋದ ಸಂಭಾಷಣೆ ಆಧಾರದ ಮೇಲೆ ಅಮಾನತು ಮಾಡಿದ್ದಾಗಿ ವರದಿ ಹೇಳಿದೆ. ಆರೋಪ ಮಾಡಿದ ಮಹಿಳೆಯರು ಯಾರದ್ದೋ ಪ್ರೇರಣೆಯಿಂದ ಸುಳ್ಳು ಆರೋಪ ಮಾಡಿದ್ದಾರೆ ಅಂತಾ ವರದಿ ಬಂದಿದೆ. ಆದರೆ ಈ ವರದಿಯನ್ನು ದೂರುದಾರೆ ಸುಮತಿ ನಾಯಕ್​​ ಅಲ್ಲಗಳೆದಿದ್ದಾರೆ. ಎಸಿಪಿ ಶ್ರೀಕಾಂತ್ ಕೂಡ ಈ ಪ್ರಕರಣದಲ್ಲಿ ಆರೋಪಿ. ಆದರಿಂದ ಅವರನ್ನು ಅಮಾನತಿನಲ್ಲಿ ಇಡಬೇಕಿತ್ತು. ಆದರೆ ಕಮಿಷನರ್ ಸುಧೀರ್ ಕುಮಾರ್​ ಅವರ ಬಳಿ ತನಿಖೆ ಮಾಡಿಸಿದ್ದಾರೆ. ಇವರು ಮೂವರದ್ದು ಚೈನ್ ಲಿಂಕ್. ಸಂದೇಶ್ ಮೇಲೆ ಎಫ್ಐಆರ್ ಹಾಕಿ, ಎಸಿಪಿ ಶ್ರೀಕಾಂತ್​​ರನ್ನು ಸಸ್ಪೆಂಡ್ ಮಾಡಿ ಬೆಂಗಳೂರು ಮಟ್ಟದ ಅಧಿಕಾರಿಗಳಿಂದ ತನಿಖೆ ಮಾಡಿಸಿದರೆ ಸತ್ಯ ಹೊರಬರುತ್ತೆ ಅಂತಾ ಸುಮತಿ ನಾಯಕ್ ಹೇಳಿದ್ದಾರೆ.

ಇದನ್ನೂ ಓದಿ: ಕಾಮಕಾಂಡ ಪ್ರಕರಣ: ಮೂಡುಬಿದಿರೆ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್​​ಗೆ ಬಿಗ್ ಶಾಕ್

ಸದ್ಯ ಈ ಪ್ರಕರಣ ಪೊಲೀಸ್ ಇಲಾಖೆ ಮತ್ತು ದೂರುದಾರರ ನಡುವೆ ತಿಕ್ಕಾಟಕ್ಕೆ ಕಾರಣವಾಗಿದೆ. ಸಂದೇಶ್ ಮೇಲೆ ತನಿಖೆ ಇಲ್ಲಿಗೆ ಮುಗಿಯುತ್ತಾ ಅಥವಾ ಮುಂದುವೆರೆಯುತ್ತಾ ಎಂದು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us