AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್​​ಗೆ ಬಿಗ್​​ ಶಾಕ್​​: ಅತ್ಯಾಚಾರ ಪ್ರಕರಣ ದಾಖಲು

ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅವರ ಮೇಲಿನ ಲೈಂಗಿಕ ಕಿರುಕುಳ ಆರೋಪ ಸುಳ್ಳು ಎಂದು ವರದಿ ಬಂದಿದ್ದರೂ, ಬೆಳ್ತಂಗಡಿ ವೇಣೂರು ಠಾಣೆಯಲ್ಲಿ ಶಿಕ್ಷಕಿ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ. 2018-2023ರ ಅವಧಿಯಲ್ಲಿ ಅತ್ಯಾಚಾರ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆ ಮೂಲಕ ಈ ಹಿಂದೆ ವೇಣೂರು ಪೊಲೀಸ್ ಠಾಣೆ ಸರ್ಕಲ್ ಇನ್ಸ್​ಪೆಕ್ಟರ್​​​ ಆಗಿದ್ದ ಸಂದೇಶ್​​ಗೆ ಹೊಸ ಸಂಕಷ್ಟ ಎದುರಾಗಿದೆ.

ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್​​ಗೆ ಬಿಗ್​​ ಶಾಕ್​​: ಅತ್ಯಾಚಾರ ಪ್ರಕರಣ ದಾಖಲು
ಇನ್ಸ್​ಪೆಕ್ಟರ್​ ಸಂದೇಶ್​​Image Credit source: Google
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Mar 22, 2026 | 9:34 AM

Share

ಮಂಗಳೂರು, ಮಾರ್ಚ್​​ 22: ಮಹಿಳೆಯರಿಗೆ ಲೈಂಗಿಕ ಕಿರುಕುಳ ಆರೋಪ ಸುಳ್ಳು ಎಂದು ಪೊಲೀಸ್ ವರದಿ ಹೇಳಿದ್ದ ನಡುವೆಯೇ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್​​ಗೆ  ಬಿಗ್​​ ಶಾಕ್​​ ಸಿಕ್ಕಿದೆ. ಬೆಳ್ತಂಗಡಿ ತಾಲೂಕಿನ ವೇಣೂರು ಠಾಣೆಯಲ್ಲಿ ಸಂದೇಶ್​​ ವಿರುದ್ಧ ಸಂತ್ರಸ್ತೆ ಶಿಕ್ಷಕಿ ನೀಡಿದ ದೂರಿನ ಮೇರೆಗೆ ಅತ್ಯಾಚಾರ ಆರೋಪದಡಿ ಎಫ್​ಐಆರ್​ ದಾಖಲಾಗಿದೆ. 2018 ರಿಂದ 2023ರವರೆಗೆ ಶಿಕ್ಷಕಿ ಮನೆಗೆ ಹೋಗಿ ಬೆದರಿಸಿ ಅತ್ಯಾಚಾರ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

2020ರಲ್ಲಿ ಸಂದೇಶ್​​​ ಬೆಳ್ತಂಗಡಿ ಸರ್ಕಲ್ ವ್ಯಾಪ್ತಿಯಲ್ಲಿರುವ ವೇಣೂರು ಪೊಲೀಸ್ ಠಾಣೆ ಸರ್ಕಲ್ ಇನ್ಸ್​ಪೆಕ್ಟರ್​​​ ಆಗಿದ್ದರು. ಹೀಗಾಗಿ ವೇಣೂರು ಠಾಣಾ ವ್ಯಾಪ್ತಿಯಲ್ಲೇ ಅತ್ಯಾಚಾರ ಆರೋಪದಡಿ ಸೆಕ್ಷನ್ 376(2)(a)(1), 376(2)(n), 384, 506ರಡಿ ಕೇಸ್ ದಾಖಲಾಗಿದೆ. ಸಂದೇಶ್ ವಿರುದ್ಧ ಇಬ್ಬರು ಮಹಿಳೆಯರು ಮಾಡಿದ್ದ ಲೈಂಗಿಕ ಕಿರುಕುಳ ಆರೋಪ ಸುಳ್ಳು ಎಂದು ಪೊಲೀಸ್ ವರದಿ ಹೇಳಿದೆ. ಮಾಧ್ಯಮಗಳ ಮುಂದೆ ಬಂದಿದ್ದ ಆ ಮಹಿಳೆಯರಿಗೆ ಕಿರುಕುಳ ನೀಡಿಲ್ಲ. ಪ್ರಚೋದನೆಗೆ ಒಳಪಟ್ಟು ಪಿಐ​ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಮಹಿಳೆಯರ ಆರೋಪ ಸುಳ್ಳು ಮತ್ತು ಪ್ರೇರಿತ ಎಂದು ಸಾಬೀತಾಗಿದೆ ಎಂದು ನಿನ್ನೆಯಷ್ಟೇ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದರು. ಆ ಬೆನ್ನಲ್ಲೇ ಈಗ ಸಂದೇಶ್​​ ವಿರುದ್ಧ ಅತ್ಯಾಚಾರ ದೂರು ದಾಖಲಾಗಿದೆ.

ಇದನ್ನೂ ಓದಿ: ಇನ್ಸ್ಪೆಕ್ಟರ್ ಸಂದೇಶ್​ ಕಾಮಕಾಂಡ ಕೇಸ್​​ಗೆ ಬಿಗ್ ಟ್ವಿಸ್ಟ್; ಪೊಲೀಸ್ ವರದಿಯಲ್ಲಿ ಸ್ಫೋಟಕ ಸತ್ಯ ಬಯಲು

ಸಂತ್ರಸ್ತೆ ಮಹಿಳೆ ಆರೋಪ ಸಂಬಂಧ ಕೆಲ ಆಡಿಯೋ ವಿಡಿಯೋಗಳ ಬಯಲಿಗೆ ಬರುತ್ತಿದ್ದಂತೆಯೇ ಇನ್ಸ್​ಪೆಕ್ಟರ್​ ವಿರುದ್ಧದ ಪ್ರಕರಣದ ತನಿಖೆ ನಡೆಸಿ ವರದಿ ನೀಡುವ ಹೊಣೆಯನ್ನು ಎಸಿಪಿ ಶ್ರೀಕಾಂತ್‌ಗೆ ನೀಡಲಾಗಿತ್ತು. ಪ್ರಕರಣ ಸಂಬಂಧ ಶಾಸಕ ಉಮಾನಾಥ್ ಕೋಟ್ಯಾನ್ ಗೃಹ ಸಚಿವರನ್ನ ಭೇಟಿ ಮಾಡಿ ಮಾಡಿ ಸಂದೇಶ್​​ರನ್ನು ಅಮಾನತ್ತಿನಲ್ಲಿಟ್ಟು ತನಿಖೆ ಮಾಡುವಂತೆ ಮನವಿ ಮಾಡಿದ್ದರು. ಅಲ್ಲದೇ ಈ ಬಗ್ಗೆ ಮಹಿಳಾ ಆಯೋಗ ಸಹ ಸುಮಟೋ ಕೇಸ್ ದಾಖಲಿಸಿಕೊಂಡು, ಪ್ರಕರಣದ ವರದಿ ನೀಡುವಂತೆ ಮಂಗಳೂರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿತ್ತು. ಈ ಎಲ್ಲಾ ಬೆಳವಣಿಗೆ ಬಳಿಕ ಇನ್ಸ್​ಪೆಕ್ಟರ್​ ಸಂದೇಶ ಅವರನ್ನು ಅಮಾನತು ಕೂಡ ಮಾಡಲಾಗಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ
ಸಕಲೇಶಪುರದ ಆನೆಮಹಲ್ ಬಳಿ ಭೂಕುಸಿತದ ಆತಂಕ
ಸಕಲೇಶಪುರದ ಆನೆಮಹಲ್ ಬಳಿ ಭೂಕುಸಿತದ ಆತಂಕ
ಪಾತಾಳ ಕಂಡ ಟೊಮ್ಯಾಟೋ ಬೆಲೆ: ರಸ್ತೆ ಬದಿ ತಂದು ಬೆಳೆ ಸುರಿದ ರೈತರು
ಪಾತಾಳ ಕಂಡ ಟೊಮ್ಯಾಟೋ ಬೆಲೆ: ರಸ್ತೆ ಬದಿ ತಂದು ಬೆಳೆ ಸುರಿದ ರೈತರು
ಮಳೆ ವಿಚಾರವಾಗಿ ಪ್ರಧಾನಿ ಮೋದಿ ಎಚ್ಚರಿಕೆ ಗಂಟೆ ಕೊಟ್ಟಿದ್ದಾರೆ: ಸಿಎಂ
ಮಳೆ ವಿಚಾರವಾಗಿ ಪ್ರಧಾನಿ ಮೋದಿ ಎಚ್ಚರಿಕೆ ಗಂಟೆ ಕೊಟ್ಟಿದ್ದಾರೆ: ಸಿಎಂ
ಮೊಮ್ಮಗನಿಗಾಗಿ ತಾವೇ ಪೂರಿ ಮಾಡಿಕೊಟ್ಟ ಸಿಎಂ; ವಿಡಿಯೋ ವೈರಲ್
ಮೊಮ್ಮಗನಿಗಾಗಿ ತಾವೇ ಪೂರಿ ಮಾಡಿಕೊಟ್ಟ ಸಿಎಂ; ವಿಡಿಯೋ ವೈರಲ್
ಇರಾನ್​ನ ಬುಶೆಹರ್ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ಅಮೆರಿಕ ದಾಳಿ
ಇರಾನ್​ನ ಬುಶೆಹರ್ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ಅಮೆರಿಕ ದಾಳಿ
RSS ವಿರುದ್ಧ ಮಾತಾಡಿದ್ರೆ ಕಾಂಗ್ರೆಸ್​​ನಲ್ಲಿ ಬಡ್ತಿ: ಯತ್ನಾಳ್​​ ಆರೋಪ
RSS ವಿರುದ್ಧ ಮಾತಾಡಿದ್ರೆ ಕಾಂಗ್ರೆಸ್​​ನಲ್ಲಿ ಬಡ್ತಿ: ಯತ್ನಾಳ್​​ ಆರೋಪ
ಫುಟ್​ಪಾತ್​ ತೆರವು ಬೆನ್ನಲ್ಲೇ ವಾಹನ ಟೋಯಿಂಗ್ ಬಗ್ಗೆ ಕೃಷ್ಣಬೈರೇಗೌಡ ಸುಳಿವು
ಫುಟ್​ಪಾತ್​ ತೆರವು ಬೆನ್ನಲ್ಲೇ ವಾಹನ ಟೋಯಿಂಗ್ ಬಗ್ಗೆ ಕೃಷ್ಣಬೈರೇಗೌಡ ಸುಳಿವು
ನೈಸ್‌ ರೋಡ್ ಸಮೀಪ ಚಿರತೆ ಪ್ರತ್ಯಕ್ಷ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ನೈಸ್‌ ರೋಡ್ ಸಮೀಪ ಚಿರತೆ ಪ್ರತ್ಯಕ್ಷ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
‘ನೀನು ಹೀರೋನೆ ಅಲ್ಲ’, ಎಂದು ನನಗೆ ಹೇಳಿದ್ದಾರೆ’: ಸತೀಶ್ ನೀನಾಸಂ
‘ನೀನು ಹೀರೋನೆ ಅಲ್ಲ’, ಎಂದು ನನಗೆ ಹೇಳಿದ್ದಾರೆ’: ಸತೀಶ್ ನೀನಾಸಂ