ಕಾಮಕಾಂಡ ಪ್ರಕರಣ: ಮೂಡುಬಿದಿರೆ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್​​ಗೆ ಬಿಗ್ ಶಾಕ್

ಮೂಡುಬಿದಿರೆಯಲ್ಲಿ ಹಲವು ಮಹಿಳೆಯರಿಗೆ ಲೈಂಗಿಕ ಕಿರುಕುಳ ಕೊಟ್ಟಿರುವ ಆರೋಪ ಎದುರಿಸುತ್ತಿರುವ ಇನ್ಸ್‌ಪೆಕ್ಟರ್ ಸಂದೇಶ್ ಪ್ರಕರಣ ರಾಜ್ಯದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದೆ. ಇದೀಗ ಇನ್ಸ್‌ಪೆಕ್ಟರ್ ಸಂದೇಶ್ ಮೇಲೆ ಲೈಂಗಿಕ ಆರೋಪ ಪ್ರಕರಣ ಸಂಬಂಧ ಮಹಿಳಾ ಆಯೋಗ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದು, ವರದಿ ಕೊಡುವಂತೆ ಮಂಗಳೂರ ನಗರ ಪೊಲೀಸ್ ಕಮಿಷನರ್​ಗೆ ಪತ್ರ ಬರೆದಿದೆ. ಇದರ ಬೆನ್ನಲ್ಲೇ ಇನ್ಸ್​ಪೆಕ್ಟರ್​​ ಸಂದೇಶನನ್ನು ಅಮಾನತು ಮಾಡಲಾಗಿದೆ.

ಕಾಮಕಾಂಡ ಪ್ರಕರಣ:  ಮೂಡುಬಿದಿರೆ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್​​ಗೆ  ಬಿಗ್ ಶಾಕ್
ಇನ್ಸ್​ಪೆಕ್ಟರ್ ಸಂದೇಶ, ಸಂತ್ರಸ್ತ ಮಹಿಳೆ
Edited By:

Updated on: Mar 17, 2026 | 7:23 PM

ಮಂಗಳೂರು, (ಮಾರ್ಚ್ 17): ಕೌಟುಂಬಿಕ ಕಲಹದ ವಿಚಾರಕ್ಕೆ ದೂರು ನೀಡಲು ಬಂದ ಮಹಿಳೆಯರನ್ನು ಅಸಭ್ಯವಾಗಿ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ (moodbidri inspector Sandesh) ವಿರುದ್ಧ ಈಗ ರಾಜ್ಯ ಮಹಿಳಾ ಆಯೋಗವು ಸಿಡಿದೆದ್ದಿದ್ದು, ಸುಮೋಟೋ ಕೇಸ್ ದಾಖಲಿಸಿಕೊಂಡಿದೆ. ಅಲ್ಲದೇ ಈ ಪ್ರಕರಣ ಸಂಬಂಧ ವರದಿ ನೀಡುವಂತೆ ಮಂಗಳೂರ ನಗರ ಪೊಲೀಸ್ ಕಮಿಷನರ್​ಗೆ ಪತ್ರ ಬರೆದಿದೆ. ಇದರ ಬೆನ್ನಲ್ಲೇ ಇನ್ಸ್​ಪೆಕ್ಟರ್​​ ಸಂದೇಶನನ್ನು ಅಮಾನತು ಮಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಆದೇಶ ಹೊರಡಿಸಿದ್ದಾರೆ. ಆಡಿಯೋ, ವಿಡೀಯೋದಲ್ಲಿ ಮಹಿಳೆಯರ ಜೊತೆ ಅನುಚಿತ ವರ್ತನೆಯ ಕಾರಣ ನೀಡಿ ಸಂದೇಶ ಅವರನ್ನ ಸಸ್ಪೆಂಡ್ ಮಾಡಲಾಗಿದೆ.

ಸಂತ್ರಸ್ತೆ ಮಹಿಳೆ ಆರೋಪ ಸಂಬಂಧ ಕೆಲ ಆಡಿಯೋ ವಿಡಿಯೋಗಳ ಬಯಲಿಗೆ ಬರುತ್ತಿದ್ದಂತೆಯೇ ಇನ್ಸ್​ಪೆಕ್ಟರ್​ ವಿರುದ್ಧದ ಪ್ರಕರಣದ ತನಿಖೆ ನಡೆಸಿ ವರದಿ ನೀಡುವಂತೆ ಎಸಿಪಿ ಶ್ರೀಕಾಂತ್‌ಗೆ ಜವಾಬ್ದಾರಿ ನೀಡಲಾಗಿತ್ತು. ಮತ್ತೊಂದೆಡೆ ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಮಹಿಳೆಯರಿಗೆ ಕಿರುಕುಳ ಆರೋಪ ಸಂಬಂಧ ಶಾಸಕ ಉಮಾನಾಥ್ ಕೋಟ್ಯಾನ್ ಗೃಹ ಸಚಿವರನ್ನ ಭೇಟಿ ಮಾಡಿ ಮಾಡಿದ್ದು, ಸಂದೇಶ್ ಅವರನ್ನು ಅಮಾನತ್ತಿನಲ್ಲಿಟ್ಟು ತನಿಖೆ ಮಾಡುವಂತೆ ಮನವಿ ಮಾಡಿದ್ದರು. ಅಲ್ಲದೇ ಈ ಬಗ್ಗೆ ಮಹಿಳಾ ಆಯೋಗ ಸಹ ಸುಮಟೋ ಕೇಸ್ ದಾಖಲಿಸಿಕೊಂಡಿದ್ದು, ಪ್ರಕರಣದ ವರದಿ ನೀಡುವಂತೆ ಮಂಗಳೂರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿತ್ತು. ಈ ಎಲ್ಲಾ ಬೆಳವಣಿಗೆ ಬಳಿಕ ಇನ್ಸ್​ಪೆಕ್ಟರ್​ ಸಂದೇಶ ಅವರನ್ನು ಕೊನೆಗೂ ಅಮಾನತು ಮಾಡಲಾಗಿದೆ.

ಇದನ್ನೂ ಓದಿ: ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಕೊಟ್ಟ ಸಂತ್ರಸ್ತೆ ಸಹೋದರಿ

ಸಂದೇಶ್ ವಿರುದ್ಧ ಸ್ವಯಂಪ್ರೇರಿತ ಕೇಸ್

ಇನ್ನು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಮಹಿಳಾ ಆಯೋಗ, ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಸ್ವಯಂಪ್ರೇರಿತ ಪ್ರಕರಣ (ಸುಮಟೋ ಕೇಸ್) ದಾಖಲಿಸಿಕೊಂಡಿದೆ. ಅಲ್ಲದೇ ಈ ಪ್ರಕರಣ ಸಂಬಂಧ ತನಿಖೆ ನಡೆಸಿ 5 ದಿನದೊಳಗೆ ವರದಿ ನೀಡುವಂತೆ ಮಂಗಳೂರ ನಗರ ಪೊಲೀಸ್ ಕಮಿಷನರ್​ಗೆ ಪತ್ರ ಬರೆದಿದೆ.

ಗಂಭೀರ ಆರೋಪಗಳ ಸುರಿಮಳೆ

ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಸಂತ್ರಸ್ತ ಮಹಿಳೆಯರು ಅತ್ಯಂತ ಭೀಕರ ಆರೋಪಗಳನ್ನು ಮಾಡಿದ್ದಾರೆ. ಕೌಟುಂಬಿಕ ಸಮಸ್ಯೆಗೆ ನ್ಯಾಯ ಕೇಳಲು ಹೋದರೆ, ಅದಕ್ಕೆ ಪ್ರತಿಯಾಗಿ ಲೈಂಗಿಕ ಸುಖಕ್ಕೆ ಬೇಡಿಕೆ ಇಡುತ್ತಿದ್ದರು ಎಂಬುದು ಪ್ರಮುಖ ಆರೋಪ. ಅಷ್ಟೇ ಅಲ್ಲದೆ, ಗಂಡನನ್ನು ಬಂಧಿಸಿ ಬಳಿಕ ಅವರನ್ನು ಬಿಡುಗಡೆ ಮಾಡಲು ಹಣಕ್ಕಾಗಿ ಬೇಡಿಕೆ ಇಡುತ್ತಿದ್ದರು ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಸಂತ್ರಸ್ತೆಯ ಮಗನ ಮೇಲೆಯೂ ಹಲ್ಲೆ ನಡೆಸಿದ್ದಾರೆ ಎಂಬ ದೂರು ಕೇಳಿಬಂದಿದೆ. ಈ ಪ್ರಕರಣವು ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದ್ದು, ಉನ್ನತ ಅಧಿಕಾರಿಗಳ ತನಿಖೆಯ ಬಳಿಕ ಸತ್ಯಾಸತ್ಯತೆ ಹೊರಬರಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:02 pm, Tue, 17 March 26

ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us