AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷಾ ಒತ್ತಡ ನಿವಾರಣೆಗೆ ಸಾವಿರಾರು ವಿದ್ಯಾರ್ಥಿಗಳಿಗೆ ಮಾಸ್ಟರ್ ಕ್ಲಾಸ್; ವಿಶ್ವ ದಾಖಲೆ ಬರೆದ 10ನೇ ತರಗತಿಯ ವಿಷ್ಣುಪ್ರಿಯಾ!

ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳು ತೀವ್ರ ಒತ್ತಡಕ್ಕೆ ಒಳಗಾಗುತ್ತಾರೆ. ಇಂತಹ ಸಮಯದಲ್ಲಿ ಶಿಕ್ಷಕರು ಹಾಗೂ ತಜ್ಞರು ಮಕ್ಕಳ ಸಹಾಯಕ್ಕೆ ಬರುವುದು, ಧೈರ್ಯ ಹೇಳುವುದು ಸಾಮಾನ್ಯ. ಆದರೆ ಮೂಡುಬಿದಿರೆಯ ಆಳ್ವಾಸ್ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ವಿಷ್ಣುಪ್ರಿಯಾ, ತನ್ನದೇ ವಯಸ್ಸಿನವರ ಪರೀಕ್ಷಾ ಭಯ ನಿರ್ವಹಿಸಲು ಅಭಿಯಾನಕ್ಕಿಳಿದು ‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ಗೆ ಸೇರಿದ್ದಾಳೆ.

ಪರೀಕ್ಷಾ ಒತ್ತಡ ನಿವಾರಣೆಗೆ ಸಾವಿರಾರು ವಿದ್ಯಾರ್ಥಿಗಳಿಗೆ ಮಾಸ್ಟರ್ ಕ್ಲಾಸ್; ವಿಶ್ವ ದಾಖಲೆ ಬರೆದ 10ನೇ ತರಗತಿಯ ವಿಷ್ಣುಪ್ರಿಯಾ!
ವಿಷ್ಣುಪ್ರಿಯಾImage Credit source: Vishnupriya Instagram account
ಭಾವನಾ ಹೆಗಡೆ
|

Updated on:Sep 28, 2026 | 8:10 AM

Share

ಮುಖ್ಯಾಂಶಗಳು

  • 15 ದಿನಗಳಲ್ಲಿ 51 ಶಾಲೆಗಳಿಗೆ ಭೇಟಿ ನೀಡಿ ವಿಶ್ವ ದಾಖಲೆ ಬರೆದ ಮೂಡುಬಿದಿರೆಯ ವಿಷ್ಣುಪ್ರಿಯಾ.
  • 4,500 ವಿದ್ಯಾರ್ಥಿಗಳಿಗೆ ಪರೀಕ್ಷಾ ಒತ್ತಡ ಮತ್ತು ಸಮಯ ನಿರ್ವಹಣೆ ಕುರಿತು ಸೈಕಾಲಜಿ ಕಾರ್ಯಾಗಾರ.
  • ಕೌನ್ಸೆಲಿಂಗ್ ಜ್ಞಾನದ ಮೂಲಕ ಸಹ-ವಿದ್ಯಾರ್ಥಿಗಳ ಪರೀಕ್ಷಾ ಭಯ ನೀಗಿಸಿದ 10ನೇ ತರಗತಿ ಹುಡುಗಿ.

ಮಂಗಳೂರು, ಸೆಪ್ಟೆಂಬರ್ 28: ಮಕ್ಕಳಿಂದ ಹಿಡಿದು ಹದಿಹರೆಯದವರವರೆಗೂ ಪರೀಕ್ಷೆಯ ಸಮಯದಲ್ಲಿ ಎಲ್ಲರೂ ಒತ್ತಡಕ್ಕೆ ಒಳಗಾಗುತ್ತಾರೆ.  ಈ ಸಮಯದಲ್ಲಿ ಶಿಕ್ಷಕರು ಅಥವಾ ತಜ್ಞರು ಪರೀಕ್ಷಾ ಒತ್ತಡ ಮತ್ತು ಸಮಯ ನಿರ್ವಹಣೆ ಕುರಿತು ಉಪನ್ಯಾಸ ನೀಡುವುದು ಸಾಮಾನ್ಯ. ಆದರೆ, ತನ್ನದೇ ವಯಸ್ಸಿನ ಸಹಪಾಠಿಗಳ ಪರೀಕ್ಷಾ ಭಯವನ್ನು ಹೋಗಲಾಡಿಸಲು 15 ವರ್ಷದ ಹುಡುಗಿಯೊಬ್ಬಳು ಅಭಿಯಾನಕ್ಕಿಳಿದು ಸಾಧನೆ ಮಾಡಿರುವುದು ಅಪರೂಪದ ಸಂಗತಿ. ಮೂಡುಬಿದಿರೆಯ ಆಳ್ವಾಸ್ ಸೆಂಟ್ರಲ್ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ವಿಷ್ಣುಪ್ರಿಯಾ ಪೈ, 15 ದಿನಗಳಲ್ಲಿ 51 ಶಾಲೆಗಳಿಗೆ ಭೇಟಿ ನೀಡಿ ಸುಮಾರು 4,500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ದಾರಿದೀಪವಾಗುವ ಮೂಲಕ ‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ ಪುಟಕ್ಕೆ ಸೇರಿದ್ದಾರೆ.

ವಿದ್ಯಾರ್ಥಿನಿಯಿಂದಲೇ ಸೈಕಾಲಜಿ ಮಾಸ್ಟರ್ ಕ್ಲಾಸ್!

ವಿಷ್ಣುಪ್ರಿಯಾಗೆ 6ನೇ ತರಗತಿಯಲ್ಲಿದ್ದಾಗಲೇ ಮಾನಸಿಕ ಆರೋಗ್ಯ, ಕೌನ್ಸೆಲಿಂಗ್ ಹಾಗೂ ಸೈಕಾಲಜಿ ವಿಷಯಗಳಲ್ಲಿ ತೀವ್ರ ಆಸಕ್ತಿ ಮೂಡಿತ್ತು. ಕಳೆದ ನಾಲ್ಕು ವರ್ಷಗಳಲ್ಲಿ ‘ಇಂಡಿಯನ್ ಕೌನ್ಸೆಲಿಂಗ್ ಸರ್ವಿಸಸ್’ ಮೂಲಕ ಆನ್‌ಲೈನ್ ಕೋರ್ಸ್‌ಗಳನ್ನು ಪೂರೈಸಿ ಜ್ಞಾನ ಹೆಚ್ಚಿಸಿಕೊಂಡಿದ್ದಾಳೆ. ತಾನು ಕಲಿತ ಸೈಕಾಲಜಿ ವಿಚಾರಗಳನ್ನು ಪುಸ್ತಕಕ್ಕೆ ಸೀಮಿತಗೊಳಿಸದೆ, ತನ್ನಂತೆಯೇ ಪರೀಕ್ಷೆಯ ಆತಂಕ ಎದುರಿಸುವ ಸಾವಿರಾರು ವಿದ್ಯಾರ್ಥಿಗಳಿಗೆ ತಲುಪಿಸಲು ನಿರ್ಧರಿಸಿದಳು.

15 ದಿನಗಳಲ್ಲಿ 4,500 ವಿದ್ಯಾರ್ಥಿಗಳಿಗೆ ಪ್ರೇರಣೆ

ಆಗಸ್ಟ್ 24 ರಿಂದ ಸೆಪ್ಟೆಂಬರ್ 11 ರವರೆಗೆ ನಡೆಸಿದ ಈ ಮಹತ್ತ್ವದ ಜಾಗೃತಿ ಅಭಿಯಾನದಲ್ಲಿ ವಿಷ್ಣುಪ್ರಿಯಾ ಕರ್ನಾಟಕದ ಹಾಸನ, ಕೊಡಗು, ಬೆಂಗಳೂರು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ 51 ಶಾಲೆಗಳಿಗೆ ಭೇಟಿ ನೀಡಿದ್ದಾಳೆ. ಪ್ರತಿದಿನ 1 ಗಂಟೆಯ ಕಾರ್ಯಾಗಾರ ನಡೆಸಿ, ಪರೀಕ್ಷಾ ಒತ್ತಡವನ್ನು ನಿರ್ವಹಿಸುವುದು ಹೇಗೆ?, ಸಮಯ ನಿರ್ವಹಣೆ, ಸುಲಭ ಅಧ್ಯಯನ ತಂತ್ರಗಳು ಹಾಗೂ ಪರೀಕ್ಷೆಗೆ ಸಿದ್ಧರಾಗುವ ವೈಜ್ಞಾನಿಕ ವಿಧಾನಗಳನ್ನು ಅತ್ಯಂತ ಸರಳವಾಗಿ ವಿದ್ಯಾರ್ಥಿಗಳಿಗೆ ವಿವರಿಸಿದ್ದಾಳೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್​ಪ್ರೆಸ್ ವರದಿ ಮಾಡಿದೆ.

ವಿಷ್ಣುಪ್ರಿಯಾ ಅವರ ಈ ಸಮಾಜಮುಖಿ ಹಾಗೂ ಶೈಕ್ಷಣಿಕ ಸಾಹಸವನ್ನು ‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ ಸಂಸ್ಥೆಯು ಹತ್ತಿರದಿಂದ ವೀಕ್ಷಿಸಿ ವಿಶ್ವ ದಾಖಲೆಯಾಗಿ ಗುರುತಿಸಿದೆ. ಅಕ್ಟೋಬರ್ 1 ರಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರ ಉಪಸ್ಥಿತಿಯಲ್ಲಿ ಈ ವಿಶ್ವ ದಾಖಲೆಯ ಅಧಿಕೃತ ಪ್ರಮಾಣಪತ್ರವನ್ನು ಹಸ್ತಾಂತರಿಸಲಾಗುವುದು. ವಿದ್ಯಾರ್ಥಿ ಹಂತದಲ್ಲೇ ಸಹ-ವಿದ್ಯಾರ್ಥಿಗಳ ಮಾನಸಿಕ ಸಿದ್ಧತೆಗೆ ನೆರವಾದ ವಿಷ್ಣುಪ್ರಿಯಾ ಅವರ ಈ ವಿಶಿಷ್ಟ ಪ್ರಯತ್ನಕ್ಕೆ ರಾಜ್ಯಾದ್ಯಂತ ಶ್ಲಾಘನೆ ವ್ಯಕ್ತವಾಗುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:48 am, Mon, 28 September 26

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು