AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್​ಗಿರಿ: ಅನ್ಯಕೋಮಿನ ಜೋಡಿ ಮೇಲೆ ದಾಳಿ

ಅನ್ಯಕೋಮಿನ ಜೋಡಿ ಮೇಲೆ ಹಿಂದೂ ಕಾರ್ಯಕರ್ತರಿಂದ ದಾಳಿ ಮಾಡಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಬಳಿ ನಡೆದಿದೆ. ಹಿಂದೂ ಕಾರ್ಯಕರ್ತರು ಯುವಕನನ್ನು ತರಾಟೆಗೆ ತೆಗೆದುಕೊಂಡಿದ್ದು, ಹಲ್ಲೆಗೆ ಯತ್ನಿಸಿದ್ದಾರೆ. ಬಂದರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್​ಗಿರಿ: ಅನ್ಯಕೋಮಿನ ಜೋಡಿ ಮೇಲೆ ದಾಳಿ
ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್​ಗಿರಿ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Dec 22, 2023 | 10:32 PM

Share

ದಕ್ಷಿಣ ಕನ್ನಡ, ಡಿಸೆಂಬರ್​ 22: ಜಿಲ್ಲೆಯ ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್​ಗಿರಿ (moral policing) ನಡೆದಿದೆ. ಅನ್ಯಕೋಮಿನ ಜೋಡಿ ಮೇಲೆ ಹಿಂದೂ ಕಾರ್ಯಕರ್ತರಿಂದ ದಾಳಿ ಮಾಡಿರುವಂತಹ ಘಟನೆ ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಬಳಿ ನಡೆದಿದೆ. ಅನ್ಯಕೋಮಿನ ಯುವಕನ ಜತೆ ಮಿಲಾಗ್ರಿಸ್ ಬಳಿ ಯುವತಿ ನಿಂತಿದ್ದಾಳೆ. ಈ ವೇಳೆ ಹಿಂದೂ ಕಾರ್ಯಕರ್ತರು ಯುವಕನನ್ನು ತರಾಟೆಗೆ ತೆಗೆದುಕೊಂಡಿದ್ದು, ಹಲ್ಲೆಗೆ ಯತ್ನಿಸಿದ್ದಾರೆ.

ಸ್ಥಳಕ್ಕೆ ಬಂದರು ಠಾಣೆ ಪೊಲೀಸರು ಆಗಮಿಸುತ್ತಿದ್ದಂತೆ ಜೋಡಿ ಮೇಲೆ ಹಲ್ಲೆಗೆ ಯತ್ನಿಸಿದ ಕಾರ್ಯಕರ್ತರು ಸ್ಥಳದಿಂದ ಪರಾರಿ ಆಗಿದ್ದಾರೆ. ಬಂದರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅನ್ಯಕೋಮಿನ ಜೋಡಿ ಮೇಲೆ ದಾಳಿ

ದಕ್ಷಿಣ ಕನ್ನಡ ಜಿಲ್ಲೆ ಹೇಳಿ ಕೇಳಿ ಕೋಮ ಸೂಕ್ಷ್ಮ ಪ್ರದೇಶ. ಯಾವುದೇ ಘಟನೆ ನಡೆದರೂ ಅದಕ್ಕೆ ಕೋಮು ಅನ್ನೋದು ತಳುಕು ಹಾಕಿಕೊಂಡಿರುತ್ತದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಪ್ರಣಾಳಿಕೆಯಲ್ಲೂ ಕೂಡ ಇದು ಒಂದು ಭಾಗವಾಗಿತ್ತು. ಸರ್ಕಾರ ಬಂದ ಕೂಡಲೇ ಗೃಹ ಸಚಿವ ಡಾ. ಜಿ ಪರಮೇಶ್ವರ್, ಮಂಗಳೂರಿಗೆ ಭೇಟಿ ಕೊಟ್ಟು ನೈತಿಕ ಪೊಲೀಸ್ ಗಿರಿಯನ್ನು ಹತ್ತಿಕ್ಕಲು ಪೊಲೀಸರಿಗೆ ಸೂಚಿಸಿದ್ದರು. ಆದರೆ ನೈತಿಕ ಪೊಲೀಸ್ ಗಿರಿ ಮತ್ತೆ ಮತ್ತೆ ಹೆಚ್ಚಾಗುತ್ತಲೇ ಇದೆ.

ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ನೈತಿಕ ಪೊಲೀಸ್​​ಗಿರಿ: ಯುವಕ-ಯುವತಿಯನ್ನ ತಡೆದು ಹಲ್ಲೆಗೆ ಯತ್ನ

ಇತ್ತೀಚೆಗೆ ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆದಿತ್ತು. ಮಂಗಳೂರಿನ ಮೋರ್ಗನ್ಸ್ ಗೇಟ್ ಬಳಿ ಬಜರಂಗದಳ ಕಾರ್ಯಕರ್ತರು ಅನ್ಯಕೋಮಿನ ಜೋಡಿ ಮೇಲೆ ದಾಳಿ ಮಾಡಿದ್ದರು.

ಮಂಗಳೂರಿನ ಮುಳುಹಿತ್ಲು ಬಳಿಯ ಸ್ಟೋರ್ ಒಂದರಲ್ಲಿ ಚಿಕ್ಕಮಗಳೂರು ಮೂಲದ ಸೌಜನ್ಯ ಮತ್ತು ಮಂಗಳೂರಿನ ಮಂಕಿ ಸ್ಟ್ಯಾಂಡ್ ನಿವಾಸಿ ನೂರುಲ್ಲಾ ಅಮೀನ್ ಕೆಲಸ ಮಾಡುತ್ತಿದ್ದರು. ಮಾರ್ಗನ್ಸ್ ಗೇಟ್ ಬಳಿ ಇಬ್ಬರು ಬೈಕ್​ನಲ್ಲಿ ಹೋಗುತ್ತಿದ್ದಾಗ ಬಜರಂಗದಳದ ಕಾರ್ಯಕರ್ತರು ಅವರನ್ನು ಹಿಂಬಾಲಿಸಿದ್ದರು. ಅರ್ಧ ದಾರಿಯಲ್ಲಿ ಅವರನ್ನು ತಡೆದು, ಅವರ ಮೇಲೆ ದಾಳಿ ನಡೆಸಿದ್ದರು.

ಇದನ್ನೂ ಓದಿ:

ದಾಳಿ ನಡೆಸಿದ ಬಜರಂಗದಳ ಕಾರ್ಯಕರ್ತರು ಯುವಕ ಮತ್ತು ಯುವತಿಯ ಐಡಿ ಕಾರ್ಡ್ ಪಡೆದುಕೊಂಡಿದ್ದರು. ಬಳಿಕ ಅವರಿಗೆ ಚೆನ್ನಾಗಿ ತರಾಟೆಗೆ ತೆಗೆದುಕೊಂಡು ಬೆದರಿಕೆ ಹಾಕಿದ್ದರು. ವಿಚಾರ ತಿಳಿಸಿದಂತೆ ಸ್ಥಳದಲ್ಲಿ ಸಾಕಷ್ಟು ಜನರು ಜಮಾಯಿಸಿದ್ದರು. ಎರಡು ಕೋಮುವಿನ ಜನರು ಸ್ಥಳಕ್ಕೆ ಜಮಯಿಸುವ ಹಂತಕ್ಕೆ ಘಟನೆ ತಲುಪಿತ್ತು. ತಕ್ಷಣ ಪಾಂಡೇಶ್ವರ ಪೊಲೀಸರು ಸ್ಥಳಕ್ಕೆ ಹೋಗಿ ಪರಿಸ್ಥಿತಿ ಹತೋಟಿಗೆ ತಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು