Mangaluru News: ಸೋಮೇಶ್ವರ ಬೀಚ್​ನಲ್ಲಿ ನೈತಿಕ ಪೊಲೀಸ್​ಗಿರಿ; ಕೇರಳ ಮೂಲದ 6 ವಿದ್ಯಾರ್ಥಿಗಳ ಮೇಲೆ ಹಲ್ಲೆ

ಕೇರಳದ ಕಣ್ಣೂರಿನ ಯುವಕರು ಹಾಗೂ ಕಾಸರಗೋಡಿನ ಯುವತಿಯರು ಸೋಮೇಶ್ವರ ಬೀಚ್​ಗೆ ವಿಹಾರಕ್ಕೆ ಬಂದಿದ್ದರು. ಹಿಂದೂ ವಿದ್ಯಾರ್ಥಿನಿಯರ ಜೊತೆ ಬಂದಿದ್ದಕ್ಕೆ ಮುಸ್ಲಿಂ ಸಮುದಾಯಕ್ಕೆ ಸೇರಿದ್ದ ಮೂವರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿದೆ.

Mangaluru News: ಸೋಮೇಶ್ವರ ಬೀಚ್​ನಲ್ಲಿ ನೈತಿಕ ಪೊಲೀಸ್​ಗಿರಿ; ಕೇರಳ ಮೂಲದ 6 ವಿದ್ಯಾರ್ಥಿಗಳ ಮೇಲೆ ಹಲ್ಲೆ
ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ
Follow us
|

Updated on: Jun 01, 2023 | 10:01 PM

ಮಂಗಳೂರು: ಕರಾವಳಿ ನಗರ ಮಂಗಳೂರಿನ ಸೋಮೇಶ್ವರ ಬೀಚ್​ನಲ್ಲಿ (Someshwar Beach) ನೈತಿಕ ಪೊಲೀಸ್ ಗಿರಿ (Moral Policing) ನಡೆದಿದ್ದು, ಕೇರಳ ಮೂಲದ 6 ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿದೆ. ಮೂವರು ವಿದ್ಯಾರ್ಥಿನಿಯರು, ಮೂವರು ವಿದ್ಯಾರ್ಥಿಗಳ ಮೇಲೆ ದಾಳಿ ನಡೆದಿದೆ. ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಸಮುದ್ರ ತೀರದಲ್ಲಿ ವಿಹರಿಸುತ್ತಿದ್ದರು. ಇದೇ ವೇಳೆ ತಂಡವೊಂದು ಹಲ್ಲೆ ನಡೆಸಿದೆ.

ಕೇರಳದ ಕಣ್ಣೂರಿನ ಯುವಕರು ಹಾಗೂ ಕಾಸರಗೋಡಿನ ಯುವತಿಯರು ಸೋಮೇಶ್ವರ ಬೀಚ್​ಗೆ ವಿಹಾರಕ್ಕೆ ಬಂದಿದ್ದರು. ಹಿಂದೂ ವಿದ್ಯಾರ್ಥಿನಿಯರ ಜೊತೆ ಬಂದಿದ್ದಕ್ಕೆ ಮುಸ್ಲಿಂ ಸಮುದಾಯಕ್ಕೆ ಸೇರಿದ್ದ ಮೂವರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿದೆ. ಗಾಯಾಳು ವಿದ್ಯಾರ್ಥಿಗಳನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂವರು ವಿದ್ಯಾರ್ಥಿನಿಯರು ವಾಪಸ್ ಊರಿಗೆ ತೆರಳಿದ್ದಾರೆ ಎನ್ನಲಾಗಿದೆ. ಘಟನೆ ಬಗ್ಗೆ ಉಳ್ಳಾಲ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Chikmagalur News; ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್; ಮುಸ್ಲಿಂ ಯುವತಿ ಮನೆಯ ಕಬೋರ್ಡ್​​ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಕಾರ್ಯಕರ್ತ! 

ರಾಜ್ಯದಲ್ಲಿ ಇನ್ಮುಂದೆ ನೈತಿಕ ಪೊಲೀಸ್​ಗಿರಿಗೆ ಅವಕಾಶ ಇಲ್ಲ, ಹೀಗೆ ಮಾಡುವವರ‌ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಇತ್ತೀಚೆಗೆ ಪೊಲೀಸ್​ ಇಲಾಖೆಗೆ ಖಡಕ್ ಸೂಚನೆ ನೀಡಿದ್ದರು. ಬಳಿಕ ಅಧಿಕಾರಿಗಳು ಕೂಡ ನೈತಿಕ ಪೊಲೀಸ್​ ಗಿರಿ ನಡೆಸುವವರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದರು. ಇದಾದ ಬೆನ್ನಲ್ಲೇ ಇತ್ತೀಚೆಗೆ ಚಿಕ್ಕಬಳ್ಳಾಪುರ ನಗರದ ಗೋಪಿಕಾ ಚಾಟ್ಸ್ ಬಳಿ ಹಿಂದೂ ಯುವಕನ ಜೊತೆ ಮುಸ್ಲಿಂ ಯುವತಿ ಹೋಟೆಲ್​ಗೆ ಹೋಗಿದಕ್ಕೆ ಮುಸ್ಲಿಂ ಯುವಕರ ಗುಂಪು ನೈತಿಕ ಪೊಲೀಸ್ ಗಿರಿ ನಡೆಸಿತ್ತು. ಆ ನಂತರ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಕೂಡ ನೈತಿಕ ಪೊಲೀಸ್ ಗಿರಿ ನಡೆದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ