ಮಂಗಳೂರಿನಲ್ಲಿ ಮುಂದುವರಿದ ನೈತಿಕ ಪೊಲೀಸ್​ಗಿರಿ; ಹಿಂದೂ ಯುವತಿಯನ್ನ ಮುಸ್ಲಿಂ ಯುವಕ ಆಟೋದಲ್ಲಿ ಕೂರಿಸಿಕೊಂಡು ಹೋಗ್ತಿದ್ದಾಗ ಹಲ್ಲೆ

ಇತ್ತೀಚೆಗೆ ಮಂಗಳೂರಿನ ಖಾಸಗಿ ವೆಬ್​ಸೈಟೊಂದರ ವರದಿಗಾರನ ಮೇಲೆ ನೈತಿಕ ಪೊಲೀಸ್​ಗಿರಿ ನಡೆಸಿ ಹಲ್ಲೆ ಮಾಡಿದ್ದ ಬೆನ್ನಲ್ಲೇ ಇದೀಗ ಇಂತಹುದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.

ಮಂಗಳೂರಿನಲ್ಲಿ ಮುಂದುವರಿದ ನೈತಿಕ ಪೊಲೀಸ್​ಗಿರಿ; ಹಿಂದೂ ಯುವತಿಯನ್ನ ಮುಸ್ಲಿಂ ಯುವಕ ಆಟೋದಲ್ಲಿ ಕೂರಿಸಿಕೊಂಡು ಹೋಗ್ತಿದ್ದಾಗ ಹಲ್ಲೆ
ಮಂಗಳೂರಿನಲ್ಲಿ ನೈತಿಕ ಪೊಲೀಸ್​ಗಿರಿ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 03, 2023 | 11:11 AM

ದಕ್ಷಿಣ ಕನ್ನಡ, ಆ.3: ಇತ್ತೀಚೆಗೆ ಮಂಗಳೂರಿನ ಖಾಸಗಿ ವೆಬ್​ಸೈಟೊಂದರ ವರದಿಗಾರನ ಮೇಲೆ ನೈತಿಕ ಪೊಲೀಸ್​ಗಿರಿ ನಡೆಸಿ ಹಲ್ಲೆ ಮಾಡಿದ್ದ ಬೆನ್ನಲ್ಲೇ ಇದೀಗ ಬೆಳ್ತಂಗಡಿ(Belthangady) ತಾಲೂಕಿನ ಧರ್ಮಸ್ಥಳ(Dharmasthala)ದ ಬಸ್ ನಿಲ್ದಾಣದಲ್ಲಿ ನಿನ್ನೆ(ಆ.2) ರಾತ್ರಿ ಆಟೋ ಚಾಲಕನ ಮೇಲೆ ಹಲ್ಲೆ ಮಾಡಲಾದ ಘಟನೆ ಬೆಳಕಿಗೆ ಬಂದಿದೆ. ಹೌದು, ಉಜಿರೆ ನಿವಾಸಿ ಮೊಹಮ್ಮದ್ ಆಶಿಕ್(22) ಎಂಬಾತ ಹಿಂದೂ ಯುವತಿಯನ್ನು ಆಟೋದಲ್ಲಿ ಕೂರಿಸಿಕೊಂಡು ಹೋಗುತ್ತಿದ್ದಾಗ ಅಡ್ಡಗಟ್ಟಿ ಹಲ್ಲೆ ಮಾಡಿದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ; ಮೂವರು ಡ್ರಗ್ ಪೆಡ್ಲರ್​ಗಳ ಬಂಧನ

ದಕ್ಷಿಣ ಕನ್ನಡ: ಮಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, MDMA ಸಮೇತ ಮೂವರು ಡ್ರಗ್ ಪೆಡ್ಲರ್​ಗಳನ್ನು ಬಂಧಿಸಿದ್ದಾರೆ. ಮಂಗಳೂರು ಹೊರವಲಯದ ತಲಪಾಡಿ ಬಳಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದಾಗ ಉಳ್ಳಾಲದ ಮೊಹಮ್ಮದ್ ಹಫೀಝ್, ಸಜಿಪದ ಅಮೀರ್ ಅಲಿಯಾಸ್ ಅಮ್ಮಿ, ದಾಸರಗುಡ್ಡೆ ಮನೆ ನಿವಾಸಿ ಜಾಕೀರ್ ಹುಸೇನ್ ಅಲಿಯಾಸ್ ತಾಚೀ ಬಂಧನ ಎಂಬುವವರನ್ನು ಬಂಧಿಸಲಾಗಿದೆ. ಈ ವೇಳೆ 200 ಗ್ರಾಂ ತೂಕದ 10 ಲಕ್ಷ ಮೌಲ್ಯದ MDMA ಜಪ್ತಿ ಮಾಡಲಾಗಿದೆ. ಇದನ್ನು ಬೆಂಗಳೂರಿನಿಂದ ಖರೀದಿಸಿ ಮಂಗಳೂರಿಗೆ ತೆಗೆದುಕೊಂಡು ಬರುತ್ತಿದ್ದಾಗ ದಾಳಿ ನಡೆಸಲಾಗಿದೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ:ಗ್ರಾ.ಪಂಚಾಯಿತಿ ಅಧ್ಯಕ್ಷ ಚುನಾವಣೆ: ಪ್ರವಾಸಕ್ಕೆ ಕಳುಹಿಸಿದ್ದ ಅಭ್ಯರ್ಥಿಗೆ ಕೈ ಕೊಟ್ಟ ಸದಸ್ಯರು, ಮೋಜು-ಮಸ್ತಿ ಮಾಡಿಬಂದು ಎದುರಾಳಿ ಅಭ್ಯರ್ಥಿಗೆ ಮತ

ಶಾಲೆ ಬಳಿ ಕಾರಿನಲ್ಲಿ ಚರಸ್ ಸಾಗಿಸುತ್ತಿದ್ದ ಆರೋಪಿ ಬಂಧನ

ಮಂಗಳೂರು: ಶಾಲೆ ಬಳಿ ಕಾರಿನಲ್ಲಿ ಚರಸ್ ಸಾಗಿಸುತ್ತಿದ್ದ ಆರೋಪಿಯನ್ನ ಮಂಗಳೂರಿನ ಬಜ್ಪೆಯ ಮಾರ್ಮಿಂಗ್ ಸ್ಟಾರ್ ಶಾಲೆ ಬಳಿ ಬಂಧಿಸಲಾಗಿದೆ. ಸೂರಿಂಜೆ ನಿವಾಸಿ ಅಬ್ದುಲ್ ಅಝೀಜ್ (34) ಬಂಧಿತ ಆರೋಪಿ. ಇತನಿಂದ 230.4 ಗ್ರಾಂ ಚರಸ್ ಸೇರಿದಂತೆ ಕಾರನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಲು ಬಂದಿದ್ದ ವೇಳೆ ಅರೆಸ್ಟ್​ ಮಾಡಲಾಗಿದೆ. ಈ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:11 am, Thu, 3 August 23

ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ