ಮಂಗಳೂರಿನಲ್ಲಿ ಮುಂದುವರಿದ ನೈತಿಕ ಪೊಲೀಸ್​ಗಿರಿ; ಹಿಂದೂ ಯುವತಿಯನ್ನ ಮುಸ್ಲಿಂ ಯುವಕ ಆಟೋದಲ್ಲಿ ಕೂರಿಸಿಕೊಂಡು ಹೋಗ್ತಿದ್ದಾಗ ಹಲ್ಲೆ

ಇತ್ತೀಚೆಗೆ ಮಂಗಳೂರಿನ ಖಾಸಗಿ ವೆಬ್​ಸೈಟೊಂದರ ವರದಿಗಾರನ ಮೇಲೆ ನೈತಿಕ ಪೊಲೀಸ್​ಗಿರಿ ನಡೆಸಿ ಹಲ್ಲೆ ಮಾಡಿದ್ದ ಬೆನ್ನಲ್ಲೇ ಇದೀಗ ಇಂತಹುದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.

ಮಂಗಳೂರಿನಲ್ಲಿ ಮುಂದುವರಿದ ನೈತಿಕ ಪೊಲೀಸ್​ಗಿರಿ; ಹಿಂದೂ ಯುವತಿಯನ್ನ ಮುಸ್ಲಿಂ ಯುವಕ ಆಟೋದಲ್ಲಿ ಕೂರಿಸಿಕೊಂಡು ಹೋಗ್ತಿದ್ದಾಗ ಹಲ್ಲೆ
ಮಂಗಳೂರಿನಲ್ಲಿ ನೈತಿಕ ಪೊಲೀಸ್​ಗಿರಿ
Edited By: ಕಿರಣ್ ಹನುಮಂತ್​ ಮಾದಾರ್

Updated on: Aug 03, 2023 | 11:11 AM

ದಕ್ಷಿಣ ಕನ್ನಡ, ಆ.3: ಇತ್ತೀಚೆಗೆ ಮಂಗಳೂರಿನ ಖಾಸಗಿ ವೆಬ್​ಸೈಟೊಂದರ ವರದಿಗಾರನ ಮೇಲೆ ನೈತಿಕ ಪೊಲೀಸ್​ಗಿರಿ ನಡೆಸಿ ಹಲ್ಲೆ ಮಾಡಿದ್ದ ಬೆನ್ನಲ್ಲೇ ಇದೀಗ ಬೆಳ್ತಂಗಡಿ(Belthangady) ತಾಲೂಕಿನ ಧರ್ಮಸ್ಥಳ(Dharmasthala)ದ ಬಸ್ ನಿಲ್ದಾಣದಲ್ಲಿ ನಿನ್ನೆ(ಆ.2) ರಾತ್ರಿ ಆಟೋ ಚಾಲಕನ ಮೇಲೆ ಹಲ್ಲೆ ಮಾಡಲಾದ ಘಟನೆ ಬೆಳಕಿಗೆ ಬಂದಿದೆ. ಹೌದು, ಉಜಿರೆ ನಿವಾಸಿ ಮೊಹಮ್ಮದ್ ಆಶಿಕ್(22) ಎಂಬಾತ ಹಿಂದೂ ಯುವತಿಯನ್ನು ಆಟೋದಲ್ಲಿ ಕೂರಿಸಿಕೊಂಡು ಹೋಗುತ್ತಿದ್ದಾಗ ಅಡ್ಡಗಟ್ಟಿ ಹಲ್ಲೆ ಮಾಡಿದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ; ಮೂವರು ಡ್ರಗ್ ಪೆಡ್ಲರ್​ಗಳ ಬಂಧನ

ದಕ್ಷಿಣ ಕನ್ನಡ: ಮಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, MDMA ಸಮೇತ ಮೂವರು ಡ್ರಗ್ ಪೆಡ್ಲರ್​ಗಳನ್ನು ಬಂಧಿಸಿದ್ದಾರೆ. ಮಂಗಳೂರು ಹೊರವಲಯದ ತಲಪಾಡಿ ಬಳಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದಾಗ ಉಳ್ಳಾಲದ ಮೊಹಮ್ಮದ್ ಹಫೀಝ್, ಸಜಿಪದ ಅಮೀರ್ ಅಲಿಯಾಸ್ ಅಮ್ಮಿ, ದಾಸರಗುಡ್ಡೆ ಮನೆ ನಿವಾಸಿ ಜಾಕೀರ್ ಹುಸೇನ್ ಅಲಿಯಾಸ್ ತಾಚೀ ಬಂಧನ ಎಂಬುವವರನ್ನು ಬಂಧಿಸಲಾಗಿದೆ.
ಈ ವೇಳೆ 200 ಗ್ರಾಂ ತೂಕದ 10 ಲಕ್ಷ ಮೌಲ್ಯದ MDMA ಜಪ್ತಿ ಮಾಡಲಾಗಿದೆ. ಇದನ್ನು ಬೆಂಗಳೂರಿನಿಂದ ಖರೀದಿಸಿ ಮಂಗಳೂರಿಗೆ ತೆಗೆದುಕೊಂಡು ಬರುತ್ತಿದ್ದಾಗ ದಾಳಿ ನಡೆಸಲಾಗಿದೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ:ಗ್ರಾ.ಪಂಚಾಯಿತಿ ಅಧ್ಯಕ್ಷ ಚುನಾವಣೆ: ಪ್ರವಾಸಕ್ಕೆ ಕಳುಹಿಸಿದ್ದ ಅಭ್ಯರ್ಥಿಗೆ ಕೈ ಕೊಟ್ಟ ಸದಸ್ಯರು, ಮೋಜು-ಮಸ್ತಿ ಮಾಡಿಬಂದು ಎದುರಾಳಿ ಅಭ್ಯರ್ಥಿಗೆ ಮತ

ಶಾಲೆ ಬಳಿ ಕಾರಿನಲ್ಲಿ ಚರಸ್ ಸಾಗಿಸುತ್ತಿದ್ದ ಆರೋಪಿ ಬಂಧನ

ಮಂಗಳೂರು: ಶಾಲೆ ಬಳಿ ಕಾರಿನಲ್ಲಿ ಚರಸ್ ಸಾಗಿಸುತ್ತಿದ್ದ ಆರೋಪಿಯನ್ನ ಮಂಗಳೂರಿನ ಬಜ್ಪೆಯ ಮಾರ್ಮಿಂಗ್ ಸ್ಟಾರ್ ಶಾಲೆ ಬಳಿ ಬಂಧಿಸಲಾಗಿದೆ. ಸೂರಿಂಜೆ ನಿವಾಸಿ ಅಬ್ದುಲ್ ಅಝೀಜ್ (34) ಬಂಧಿತ ಆರೋಪಿ. ಇತನಿಂದ 230.4 ಗ್ರಾಂ ಚರಸ್ ಸೇರಿದಂತೆ ಕಾರನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಲು ಬಂದಿದ್ದ ವೇಳೆ ಅರೆಸ್ಟ್​ ಮಾಡಲಾಗಿದೆ. ಈ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:11 am, Thu, 3 August 23

ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Loading...
Unable to load recommendations.
Follow Us