ಮಂಗಳೂರು, (ಡಿಸೆಂಬರ್ 26): ಮಂಗಳೂರಿನ(Mangaluru) ಸೋಮೇಶ್ವರ ದೇವಸ್ಥಾನ ಬಳಿ ಮತ್ತೆ ನೈತಿಕ ಪೊಲೀಸ್ ಗಿರಿ (moral policing ) ಪ್ರಕರಣ ಬೆಳಕಿಗೆ ಬಂದಿದೆ. ಕೇರಳ ಮೂಲದ ಅನ್ಯಕೋಮಿನ ವಿದ್ಯಾರ್ಥಿಗಳ ತಡೆದ ಹಿಂದೂ ಕಾರ್ಯಕರ್ತರು ಪ್ರಶ್ನಿಸಿದ್ದಾರೆ. ಇಬ್ಬರು ಹಿಂದೂ ಯುವತಿಯರು, ಓರ್ವ ಹಿಂದೂ ಯುವಕ ಮತ್ತು ಓರ್ವ ಮುಸ್ಲಿಂ ಯುವಕ ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನ ಸೋಮೇಶ್ವರ ದೇವಸ್ಥಾನಕ್ಕೆ ತೆರಳಿ ಸುತ್ತಮುತ್ತ ಓಡಾಡುತ್ತಿದ್ದರು. ಇದನ್ನ ಗಮನಿಸಿದ ಹಿಂದೂ ಕಾರ್ಯಕರ್ತರು ತಡೆದು ವಿಚಾರಿಸಿದ್ದಾರೆ.
ಹಿಂದೂ ಕಾರ್ಯಕರ್ತರು ಪ್ರಶ್ನೆ ಮಾಡಿದ ವೇಳೆ ಮುಸ್ಲಿಂ ಯುವಕ ಸೋಮೇಶ್ವರ ದೇವಸ್ಥಾನ ಸುತ್ತಾಡಿ ಹಣೆಗೆ ಗಂಧ ಹಚ್ಚಿಕೊಂಡಿರುವುದು ಬೆಳಕಿಗೆ ಬಂದಿದೆ. ಬಳಿಕ ಅನ್ಯಕೋಮಿನ ಜೋಡಿ ಎಂದು ಗೊತ್ತಾದ ಹಿನ್ನೆಲೆ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿ, ಯುವಕ-ಯುವತಿಯನ್ನ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿ ಬಿಟ್ಟು ಕಳುಹಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:43 pm, Mon, 25 December 23