ಮಂಗಳೂರಿನಲ್ಲಿ ನೈತಿಕ ಪೊಲೀಸ್​ ಗಿರಿ ಕೇಸ್: ಐವರ ಬಂಧನ, ಠಾಣೆಗೆ ಬಿಜೆಪಿ, ಹಿಂದೂ ಸಂಘಟನೆ ಮುಂಖಂಡರು ದೌಡು

ಮಂಗಳೂರಿನ ಸೋಮೇಶ್ವರ ಬೀಚ್‌ನಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ಬಿಜೆಪಿ ಹಾಗೂ ಹಿಂದೂ ಸಂಘಟನೆ ಮುಖಂಡರು ಠಾಣೆಗೆ ದೌಡಾಯಿಸಿದ್ದಾರೆ.

ಮಂಗಳೂರಿನಲ್ಲಿ ನೈತಿಕ ಪೊಲೀಸ್​ ಗಿರಿ ಕೇಸ್: ಐವರ ಬಂಧನ, ಠಾಣೆಗೆ ಬಿಜೆಪಿ, ಹಿಂದೂ ಸಂಘಟನೆ ಮುಂಖಂಡರು ದೌಡು
ಸಾಂದರ್ಭಿಕ ಚಿತ್ರ
Follow us
ರಮೇಶ್ ಬಿ. ಜವಳಗೇರಾ
|

Updated on:Jun 02, 2023 | 12:40 PM

ಮಂಗಳೂರು: ಮಂಗಳೂರಿನ(Mangaluru) ಸೋಮೇಶ್ವರ ಬೀಚ್‌ನಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ(Moral policing Case)) ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ಐವರನ್ನು ಆರೋಪಿಗಳನ್ನು ಬಂಧಿಸಿದ್ದಾರೆ. ಓರ್ವ ಅಪ್ರಾಪ್ತ ಸೇರಿದಂತೆ ಒಟ್ಟು ಐದು ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ತಿಳಿಸಿದ್ದಾರೆ. ಉಳ್ಳಾಲದ ಬಸ್ತಿಪಡ್ಪು ನಿವಾಸಿ ಯತೀಶ್(48), ಉಚ್ಚಿಲ ನಿವಾಸಿ ಸಚಿನ್(23), ತಲಪಾಡಿ ನಿವಾಸಿ ಮೋಕ್ಷಿತ್, ಸುಹಾನ್(19) ಬಂಧಿತ ಆರೋಪಿಗಳಾಗಿದ್ದು, ಇವರು ಹಿಂದೂ ಸಂಘಟನೆಗೆ ಸೇರಿದವರು ಎಂದು ತಿಳಿದುಬಂದಿದೆ.

ಇದನ್ನು ಓದಿ: Mangaluru News: ಸೋಮೇಶ್ವರ ಬೀಚ್​ನಲ್ಲಿ ನೈತಿಕ ಪೊಲೀಸ್​ಗಿರಿ; ಕೇರಳ ಮೂಲದ 6 ವಿದ್ಯಾರ್ಥಿಗಳ ಮೇಲೆ ಹಲ್ಲೆ

ಗಲಭೆ ಮತ್ತು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 307 (ಕೊಲೆ ಯತ್ನ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಇನ್ನೂ ಕೆಲವು ಆರೋಪಿಗಳನ್ನು ಬಂಧಿಸಬೇಕಿದ್ದು, ಇದಕ್ಕಾಗಿ ಮೂರು ತಂಡಗಳು ಕಾರ್ಯಚರಣೆ ನಡೆಸಿವೆ ಎಂದು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಮಾಹಿತಿ ನೀಡಿದರು.

ಇನ್ನು ಆರೋಪಿಗಳ ಬಂಧನವಾಗುತ್ತಿದ್ದಂತೆಯೇ ಉಳ್ಳಾಲ ಪೊಲೀಸ್ ಠಾಣೆಗೆ ಬಿಜೆಪಿ ನಾಯಕ ಸತೀಶ್ ಕುಂಪಲ ಹಾಗೂ ವಿಎಚ್ ಪಿ, ಭಜರಂಗದಳ ಪ್ರಮುಖರು ಭೇಟಿ ನೀಡಿದ್ದು, ಹಲವು ಅಮಾಯಕ ಹಿಂದೂ ಯುವಕರನ್ನು ಬಂಧಿಸಲಾಗಿದೆ. ತಕ್ಷಣ ಅಮಾಯಕರ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು. ಕೇಸ್ ನಲ್ಲಿ ಇಲ್ಲದಿದ್ದರೆ ಬಿಡುಗಡೆ ಮಾಡುವುದಾಗಿ ಕಮಿಷನರ್ ಕುಲದೀಪ್ ಜೈನ್ ಭರವಸೆ ನೀಡಿದರು.

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸತೀಶ್ ಕುಂಪಲ, ಕಾಂಗ್ರೆಸ್ ಸರ್ಕಾರ ಬಂದ ಬೆನ್ನಲ್ಲೇ ಉಳ್ಳಾಲದಲ್ಲಿ ಅಹಿತಕರ ಘಟನೆ ನಡೆದಿದೆ. ಕಾಲೇಜಿನ ಅನ್ಯಕೋಮಿನ ವಿದ್ಯಾರ್ಥಿಗಳು ಸೋಮೇಶ್ವರ ಬೀಚ್ ಗೆ ಬಂದಿದ್ದಾರೆ. ಪರಮಪವಿತ್ರ ಕ್ಷೇತ್ರದಲ್ಲಿ ಅಶ್ಲೀಲವಾಗಿ ವರ್ತಿಸಿದಾಗ ಸ್ಥಳೀಯ ಯುವಕರು ಪ್ರಶ್ನೆ ಮಾಡಿದ್ದಾರೆ. ಇದು ತಪ್ಪಾದರೂ ದೇವರ ಕ್ಷೇತ್ರದ ಬಳಿ ಅಶ್ಲೀಲ ವರ್ತನೆ ಕಂಡು ಆಕ್ರೋಶ ಸಹಜ. ಏನೇ ಆದರೂ ಪೊಲೀಸ್ ಇಲಾಖೆ ಈ ಬಗ್ಗೆ ಗಮನ ಹರಿಸಲಿ. ಇಂತಹ ಘಟನೆಗಳಿಗೆ ಆಸ್ಪದ ನೀಡುವುದು ಬೇಡ. ಅಮಾಯಕರ ಬಂಧನ ಸರಿಯಲ್ಲ ಎಂದರು.

ಅಮಾಯಕರನ್ನ ಬಿಡುತ್ತೇವೆ ಎಂದು ಹೇಳಿದ್ದಾರೆ. ಯುವಕರು ನಮ್ಮ ಕಾರ್ಯಕರ್ತರು ಎನ್ನುವ ಪ್ರಶ್ನೆ ಅಲ್ಲ. ಅವರ ಕುಟುಂಬದವರು ಬಂದು ಹೇಳಿದಾಗ ನಾವು ಠಾಣೆಗೆ ಬಂದಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಇನ್ನು ಪ್ರಕರಣ ಗಂಭೀರತೆ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಉಳ್ಳಾಲ ಪೊಲೀಸ್​ ಠಾಣೆಯಲ್ಲೇ ಕಮಿಷನರ್ ಕುಲದೀಪ್ ಜೈನ್ ಮೊಕ್ಕಾಂ ಹೂಡಿದ್ದಾರೆ.

ಪ್ರಕರಣದ ಹಿನ್ನೆಲೆ

ಕರಾವಳಿ ನಗರ ಮಂಗಳೂರಿನ ಸೋಮೇಶ್ವರ ಬೀಚ್​ನಲ್ಲಿ (Someshwar Beach) ನೈತಿಕ ಪೊಲೀಸ್ ಗಿರಿ (Moral Policing) ನಡೆದಿತ್ತು, ಕೇರಳ ಮೂಲದ 6 ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿತ್ತು. ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಓದುತ್ತಿರುವ ಮೂವರು ವಿದ್ಯಾರ್ಥಿನಿಯರು, ಮೂವರು ವಿದ್ಯಾರ್ಥಿಗಳು ಸಮುದ್ರ ತೀರದಲ್ಲಿ ವಿಹರಿಸುತ್ತಿದ್ದರು. ಇದೇ ವೇಳೆ ತಂಡವೊಂದು ಹಲ್ಲೆ ನಡೆಸಿತ್ತು.

. ಜಾಫರ್ ಶರೀಫ್, ಮುಜೀಬ್ ಮತ್ತು ಆಶೀಕ್ ಮೇಲೆ ಹಲ್ಲೆ ಮಾಡಲಾಗಿತ್ತು. ಮೂವರು ವಿದ್ಯಾರ್ಥಿನಿಯರು ಹಾಗೂ ಮೂವರು ವಿದ್ಯಾರ್ಥಿಗಳ ಮೇಲೆ ಹಿಂದೂ ಸಂಘಟನೆಗೆ ಸೇರಿದ ಕಾರ್ಯಕರ್ತರು ದಾಳಿ ಮಾಡಿದ್ದರು. ಮೂವರು ಯುವಕರು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂದು ತಂಡವೊಂದು ಹಿಂಬಾಲಿಸಿತ್ತು, ಹಿಂದೂ ವಿದ್ಯಾರ್ಥಿನಿಯರ ಜೊತೆ ಬಂದಿದ್ದ ಕಾರಣಕ್ಕೆ ಹಿಂದೂ ಸಂಘಟನೆಗೆ ಸೇರಿದ ಕಾರ್ಯಕರ್ತರು ನೈತಿಕ ಪೊಲೀಸ್ ಗಿರಿ ಮೆರೆದಿದ್ದರು.

Published On - 12:28 pm, Fri, 2 June 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ