ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೇ ವಾರದಲ್ಲಿ 2 ನೈತಿಕ ಪೊಲೀಸ್​​ಗಿರಿ ಪ್ರಕರಣ: ವಿದ್ಯಾರ್ಥಿ ಮೇಲೆ ಸ್ವಧರ್ಮೀಯ ಯುವಕರಿಂದ ಹಲ್ಲೆ

| Updated By: ವಿವೇಕ ಬಿರಾದಾರ

Updated on: Aug 26, 2023 | 1:41 PM

Mangluru News: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇಲಿಂದ ಮೇಲೆ ನೈತಿಕ ಪೊಲೀಸ್​ಗಿರಿ ಪ್ರಕರಣಗಳು ವರದಿಯಾಗುತ್ತಿರುತ್ತವೆ. ಇದೀಗ ಇಂತಹದ್ದೇ ಮತ್ತೊಂದು ಪ್ರಕರಣ ವರದಿಯಾಗಿದ್ದು, ಹುಡುಗಿ ವಿಚಾರಕ್ಕೆ ವಿದ್ಯಾರ್ಥಿ ಮೇಲೆ ಸ್ವಧರ್ಮೀಯ ಯುವಕರೇ ಹಲ್ಲೆ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೇ ವಾರದಲ್ಲಿ 2 ನೈತಿಕ ಪೊಲೀಸ್​​ಗಿರಿ ಪ್ರಕರಣ: ವಿದ್ಯಾರ್ಥಿ ಮೇಲೆ ಸ್ವಧರ್ಮೀಯ ಯುವಕರಿಂದ ಹಲ್ಲೆ
ನೈತಿಕ ಪೊಲೀಸ್​ಗಿರಿ
Follow us on

ಮಂಗಳೂರು (ಆ.26) : ಸರ್ಕಾರ ಹಾಗೂ ಪೊಲೀಸ್​​ ಇಲಾಖೆ ಎಷ್ಟೇ ಎಚ್ಚರಿಕೆ ನೀಡಿದರೂ ನೈತಿಕ ಪೊಲೀಸ್​​ಗಿರಿ (Moral Policing) ನಿಲ್ಲುತ್ತಿಲ್ಲ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೇ ವಾರದಲ್ಲಿ ಎರಡನೇ ನೈತಿಕ ಪೊಲೀಸ್​​ಗಿರಿ ಪ್ರಕರಣ ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು (Mangaluru) ಹೊರವಲಯದ ಅಡ್ಯಾರ್ ಬಳಿಯ ಫ್ಲ್ಯಾಟ್​​​ನಲ್ಲಿ ವಿದ್ಯಾರ್ಥಿ ಮೇಲೆ ಸ್ವಧರ್ಮೀಯ ಯುವಕರೇ ನೈತಿಕ ಪೊಲೀಸ್​ಗಿರಿ ಮಾಡಿದ್ದಾರೆ. ಮಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿ ಇಬ್ರಾಹಿಂ ಫಾಹಿಂ (18) ಹಲ್ಲೆಗೊಳಗಾದ ಯುವಕ.

ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಉಪ್ಪಳದ ಇಬ್ರಾಹಿಂ ಫಾಹಿಂ ಅನ್ನು ಹುಡುಗಿ ವಿಚಾರಕ್ಕೆ ಅಪಹರಿಸಿ ಗಾಂಜಾ ನಶೆಯಲ್ಲಿ ಹಲ್ಲೆ ಮಾಡಿದ್ದಾರೆ. ಇದರಿಂದ ತೀರ್ವವಾಗಿ ಗಾಯಗೊಂಡ ಇಬ್ರಾಹಿಂ ಫಾಹಿಂ ಅನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅನಾನ್, ತಬೀಶ್ ಸೇರಿ ಹಲವರು ಇಬ್ರಾಹಿಂ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಘಟನೆ ಸಂಬಂಧ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಪೊಲೀಸ್ ಠಾಣೆ ಬಳಿ ಚೂರಿ ಇರಿತಕ್ಕೊಳಗಾದ ಯುವತಿ ಸಾವು: ಆರೋಪಿ ವಶಕ್ಕೆ

ವಿದ್ಯಾರ್ಥಿನಿ ಜತೆ ಮಾತನಾಡಿದಕ್ಕೆ ಯುವಕನ ಮೇಲೆ ಹಲ್ಲೆ

ಆಗಸ್ಟ್​ 24 ರಂದು ಇದೇ ಜಿಲ್ಲೆಯ ಮೂಡಬಿದ್ರೆಯಲ್ಲಿ ವಿದ್ಯಾರ್ಥಿನಿ ಜೊತೆ ಮಾತನಾಡಿದ ಅನ್ಯಧರ್ಮಿಯ ವಿದ್ಯಾರ್ಥಿ ಮೇಲೆ ಗುಂವೊಂದು ಹಲ್ಲೆ ಮಾಡಿತ್ತು. ಮೂಡಬಿದ್ರೆ ತಾಲೂಕಿನ ರಾಜೀವ ಗಾಂಧಿ ಸಂಕೀರ್ಣದ ಎದುರು ನಡೆದಿದ್ದ ಘಟನೆ ನಡೆದಿದ್ದು, ಈ ಸಂಬಂಧ ಮೂಡಬಿದ್ರೆ ಪೊಲೀಸರು ಮೂವರನ್ನು ಬಂಧಿಸಿದ್ದರು. ಅಭಿಲಾಷ್, ಪ್ರೇಮ್ ಭಂಡಾರಿ ಮತ್ತು ಸಂಜಯ್ ಬಂಧಿತರು.

ಮೂಡಬಿದ್ರೆಯ ರಾಜೀವ ಗಾಂಧಿ ಸಂಕೀರ್ಣದ ಎದುರು ಆಗಸ್ಟ್ 22ರಂದು ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಬೆಂಗಳೂರಿಗೆ ಹೋಗಲು ಬಂದಿದ್ದಳು. ಅದೇ ಸಮಯದಲ್ಲಿ ಆಗಮಿಸಿದ್ದ ಕೋಟೆಬಾಗಿಲು ಸಮೀಪದ ವಿದ್ಯಾರ್ಥಿ ಹುಡುಗಿಯೊಂದಿಗೆ ಮಾತನಾಡಿದ್ದನು. ಇದನ್ನು ನೋಡಿಕೊಂಡಿದ್ದ ಗುಂಪು, ಯುವತಿ ಬಸ್ ಹತ್ತಿದ ಬಳಿಕ ವಿದ್ಯಾರ್ಥಿ ಬಳಿ ಬಂದು ಹಲ್ಲೆ ನಡೆಸಿತ್ತು. ಈ ಸಂಬಂಧ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ದೂರು ದಾಖಲಾಗಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:19 pm, Sat, 26 August 23